Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
(ರಾಜ್ಯ ) ಜಿಲ್ಲೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಕೊಲ್ಹಾರ ತಾಲೂಕು ಅಧ್ಯಕ್ಷ ಅರುಣ ಔರಸಂಗ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಫಾರ್ಮಸಿಸ್ಟ್‌ಗಳು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದ ಆರೋಗ್ಯ ರಕ್ಷಣೆಗೆ ಬದ್ಧರಾಗಬೇಕು ಎಂದು ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಕೊಲ್ಹಾರ ತಾಲೂಕು ಅಧ್ಯಕ್ಷ ಅರುಣ ಔರಸಂಗ ಹೇಳಿದರು.
ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಬಿ.ಎಲ್.ಡಿ.ಇ ಸಂಸ್ಥೆಯ ಬಸವನ ಬಾಗೇವಾಡಿ ಔಷಧ ಮಹಾವಿದ್ಯಾಲಯ ಹಾಗೂ ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಕೊಲ್ಹಾರ ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಅಂಕಗಳಿಗೆ ಮಾತ್ರ ಸೀಮಿತವಾಗದೆ ಔಷಧ ವಿಜ್ಞಾನದ ಆಳವಾದ ಜ್ಞಾನ ಬೆಳೆಸಿಕೊಳ್ಳಬೇಕು. ಸಂಶೋಧನೆ, ಔಷಧ ತಯಾರಿಕೆ ಸೇರಿದಂತೆ ಫಾರ್ಮಸಿ ಕ್ಷೇತ್ರದಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ಉತ್ತಮ ವೃತ್ತಿಪರರಾಗಿ ಹೊರಹೊಮ್ಮಬೇಕು ಎಂದರು.
ಚರಕ, ಸುಶ್ರುತರಿಂದ ಆರಂಭವಾದ ಭಾರತೀಯ ಔಷಧ ವಿಜ್ಞಾನದ ಪಯಣ ಇಂದು ಆಧುನಿಕ ತಂತ್ರಜ್ಞಾನ ಮತ್ತು ಸಂಶೋಧನೆಯೊಂದಿಗೆ ವಿಸ್ತರಿಸಿದೆ. ಕೊರೊನಾ ಮಹಾಮಾರಿಯ ಸಂದರ್ಭದಲ್ಲಿಯೂ ಫಾರ್ಮಸಿಸ್ಟ್‌ಗಳು ಮಹತ್ವದ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.
ಬಿ.ಎಲ್.ಡಿ.ಇ ಸಂಸ್ಥೆಯ ಪ್ರೊಫೆಸರ್ ಚೇತನ್ ತೇಲಿ ಮಾತನಾಡಿ, ಫಾರ್ಮಸಿಸ್ಟ್‌ನ ಕರ್ತವ್ಯ ಔಷಧ ವಿತರಿಸುವುದಕ್ಕೆ ಸೀಮಿತವಲ್ಲ. ರೋಗಿಯೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಯನ್ನು ಅರಿತು ವೈದ್ಯರ ಸಲಹೆಯಂತೆ ಸರಿಯಾದ ಔಷಧಿ ಮತ್ತು ಪ್ರಮಾಣದ ಕುರಿತು ಮಾರ್ಗದರ್ಶನ ನೀಡಬೇಕು ಎಂದರು.
ಹಿರಿಯ ಫಾರ್ಮಸಿಸ್ಟ್ ಆದಾಮಸಾಬ್ ದಸ್ತಗೀರಸಾಬ್ ಜಮನಾ ಅವರು 1976ರಿಂದಲಿನ ತಮ್ಮ ವೃತ್ತಿ ಅನುಭವ ಹಂಚಿಕೊಂಡು, ರೋಗಿಗಳ ಹಿತವೇ ಫಾರ್ಮಸಿಸ್ಟ್‌ನ ಮೊದಲ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದರು.
ಬಾಳಪ್ಪ ಗವರೋಜಿ, ಡಾ.ಮಾರಾಪೂರ ಮಾತನಾಡಿದರು.
ಇಜಾಜ್ ಜಮನಾ, ಪ್ರಶಾಂತ ಸಂಗಳದ, ಡಾ. ಆರ್.ಬಿ. ಮಠ, ಡಾ. ಪೂಜಾ ಮಠ ಸೇರಿದಂತೆ ಔಷಧ ವ್ಯಾಪಾರಸ್ಥರು, ಫಾರ್ಮಸಿ ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ಕವಿತಾ ಅಜಯ ಮುದಕವಿ ಕಾರ್ಯಕ್ರಮ ನಿರ್ವಹಿಸಿದರು.
ಇದಕ್ಕೂ ಮುನ್ನ ಫಾರ್ಮಸಿ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಔಷಧಿ ಹಾಗೂ ಆರೋಗ್ಯ ಜಾಗೃತಿ ಜಾಥಾ ನಡೆಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ

ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೇಂದ್ರ ಸಚಿವ ಜೋಶಿ ಮನೆಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಚಡಚಣವನ್ನು ತೀವ್ರ ಬರವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ :ಕರ್ನಲ್ ವಂಶಿ
    In (ರಾಜ್ಯ ) ಜಿಲ್ಲೆ
  • ಪ್ರವಾಸೋದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ :ಎಡಿಜಿಪಿ ಆರ್.ಹಿತೇಂದ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.