Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶೋಷಿತರ ಧ್ವನಿಯಾಗಿ ಮಾನವ ಹಕ್ಕುಗಳ ರಕ್ಷಣೆಗೆ ಬದ್ಧ :ಮಕಾಂದಾರ

ನಿಸ್ವಾರ್ಥ ಸೇವಾ ಮನೋಭಾವ ಬೆಳೆಸುವ ಎನ್ನೆಸ್ಸೆಸ್ :ಪ್ರೊ.ಶಿತೋಳೆ

7 ವ್ಯಕ್ತಿಗಳಿಂದ1,564 ಅರ್ಜಿ: ಬಿಜೆಪಿ ಮತಗಳ್ಳತನ ಯತ್ನಕ್ಕೆ ಸಾಕ್ಷಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ವೇಗ
(ರಾಜ್ಯ ) ಜಿಲ್ಲೆ

ವಿಜಯಪುರ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ವೇಗ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಪ್ರವಾಸಿ ತಾಣಗಳ ಅಭಿವೃದ್ಧಿ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಮೂಲಕ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡಲಾಗುವುದು ಎಂದು ನಾಗಠಾಣ ಕ್ಷೇತ್ರದ ಶಾಸಕರಾದ ವಿಠ್ಠಲ ಕಟಕಧೋಂಡ ಅವರು ಹೇಳಿದರು.
ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಡಿಜಿಟಲ್ ಕಾರ್ಯಸೂಚಿ ಮತ್ತು ಕೃತಕ ಬುದ್ಧಿಮತ್ತೆ (ಎಐ) ಬಳಸಿ ಪ್ರವಾಸೋದ್ಯಮ ಮರುಸೃಷ್ಟಿ ಧ್ಯೇಯವಾಕ್ಯದೊಂದಿಗೆ ಭಾನುವಾರ ನಗರದ ಇಬ್ರಾಹಿಂ ರೋಜಾ ಆವರಣದಲ್ಲಿ ಆಯೋಜಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಪ್ರವಾಸೋದ್ಯಮದ ಬೆಳವಣಿಗೆಯಿಂದ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೆ ವೇಗ ದೊರೆಯುವುದರೊಂದಿಗೆ ಯುವಜನರಿಗೆ ಉದ್ಯೋಗ ಹಾಗೂ ಸ್ವಉದ್ಯೋಗದ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ ಎಂದರು.
ವಿಜಯಪುರವು ವಿಶ್ವವಿಖ್ಯಾತ ಗೋಳಗುಮ್ಮಟ ಸೇರಿದಂತೆ ಅಪರೂಪದ ಕಲೆ, ವಾಸ್ತುಶಿಲ್ಪ ಹಾಗೂ ಐತಿಹಾಸಿಕ ಸ್ಮಾರಕಗಳ ಶ್ರೀಮಂತ ಪರಂಪರೆಯನ್ನು ಹೊಂದಿದೆ. ಇಂತಹ ಅಮೂಲ್ಯ ಪರಂಪರೆಯ ಇತಿಹಾಸ ಹಾಗೂ ಮಹತ್ವವನ್ನು ವಿದ್ಯಾರ್ಥಿಗಳು ಮತ್ತು ಯುವಜನತೆಗೆ ಪರಿಚಯಿಸುವ ಮೂಲಕ ಸ್ಮಾರಕಗಳ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಬೇಕು. ಸ್ಮಾರಕಗಳ ಇತಿಹಾಸ ಮತ್ತು ಪ್ರವಾಸಿ ಮಾಹಿತಿಯನ್ನು ಸುಲಭವಾಗಿ ಒದಗಿಸುವ ಮೂಲಕ ದೇಶ-ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸಬೇಕು ಎಂದು ತಿಳಿಸಿದರು.
ವಿಜಯಪುರ ಉಪ ವಿಭಾಗಾಧಿಕಾರಿ ಜುಫಿಶಾನ್ ಹಕ್ ಅವರು ಮಾತನಾಡಿ, ಬಾಲ್ಯದಲ್ಲಿ ವಿಜಯಪುರ ಎಂದರೆ ಗೋಳಗುಮ್ಮಟ ನೆನಪಾಗುತ್ತಿತ್ತು. ಆದರೆ ಗೋಳಗುಮ್ಮಟ ಸೇರಿದಂತೆ ಜಿಲ್ಲೆಯಲ್ಲಿ ಸಾವಿರಾರು ಐತಿಹಾಸಿಕ ಸ್ಮಾರಕಗಳಿದ್ದು, ಅವುಗಳ ಪರಿಚಯವನ್ನು ಹೆಚ್ಚಿನ ಜನರಿಗೆ ಮಾಡಿಸುವ ಅಗತ್ಯವಿದೆ ಎಂದರು.
ಭಾರತೀಯ ಪುರಾತತ್ವ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿ ವಿಜಯಕುಮಾರ ಮಾತನಾಡಿ, ವಿಜಯಪುರ ಜಿಲ್ಲೆ ಸಂಪದ್ಭರಿತ ಪ್ರವಾಸಿ ತಾಣಗಳನ್ನು ಹೊಂದಿದೆ. ಇಲ್ಲಿನ ಕಲೆ, ವಾಸ್ತುಶಿಲ್ಪ ಹಾಗೂ ಐತಿಹಾಸಿಕ ಪರಂಪರೆಯ ಕುರಿತು ಯುವಜನರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಅರಿವು ಬೆಳೆಸಿಕೊಳ್ಳಬೇಕು. ಸ್ಮಾರಕಗಳ ಮಹತ್ವವನ್ನು ಅರಿತು ಅವುಗಳ ಸಂರಕ್ಷಣೆಗೆ ಸಹಕರಿಸಬೇಕು ಎಂದು ಹೇಳಿದರು.
ವಿಶೇಷ ಉಪನ್ಯಾಸ ನೀಡಿದ ಸುಮಂಗಲಾ ಬಿರಾದಾರ ಅವರು, ಪ್ರವಾಸೋದ್ಯಮ ಕುರಿತು ಮಾತನಾಡಿ, ಡಿಜಿಟಲ್ ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಪ್ರವಾಸಿಗರಲ್ಲಿ ಆಸಕ್ತಿ ಮೂಡಿಸುವ ಜೊತೆಗೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
“ಡಿಸ್ಕವರ್ ವಿಜಯಪುರ’ ಆ್ಯಪ್ ಮೂಲಕ ವಿಜಯಪುರದ ಪ್ರವಾಸವನ್ನು ಮತ್ತಷ್ಟು ಸುಲಭಗೊಳಿಸಿಕೊಳ್ಳಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಅರವಿಂದ ಹೂಗಾರ ಅವರು ಹೇಳಿದರು.
ಅತ್ಯುತ್ತಮ ಸೇವೆ ಸಲ್ಲಿಸಿದ ವಿಜಯಕುಮಾರ ಬಂಡಿ ಹಾಗೂ ಪ್ರವಾಸಿ ಮಿತ್ರರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಿಗೆ ಇದೇ ವೇಳೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ವಸಂತ ಹೊನಮೊಡೆ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಡಿಎಚ್‌ಒ ಡಾ. ಮಲ್ಲನಗೌಡ ಬಿರಾದಾರ, ಚಂದ್ರಕಾಂತ ಶೆಟ್ಟಿ, ಆರತಿ ಪಾಟೀಲ, ಸಂಜು ಕಾಖಂಡಕಿ, ಗೌರಿಶಂಕರ, ಕಲ್ಲೂರ, ಸೋಮನಗೌಡ, ಬಿಎಲ್‌ಡಿಇ ಸ ಪ್ರಾಂಶುಪಾಲರಾದ ಮಂಜುನಾಥ ಪಿ., ಡಾ. ವೈ. ತಮ್ಮಣ್ಣ, ಪೀಟರ್ ಅಲೆಕ್ಸಾಂಡರ್, ಭೀಮರಾಯ ಜಿಗಜಿಣಗಿ, ಅಡಿವೆಪ್ಪ ಸಾಲಗಲ್, ಡಿ.ಪಿ. ಜಾಧವ, ಡಾ. ಅಮೀನ ಹುಲ್ಲೂರ, ಗಿರೀಶ ಹನಮರಡ್ಡಿ ಹಾಗೂ ಕೆಎಸ್‌ಟಿಡಿಸಿ ಮ್ಯಾನೇಜರ್ ಜಗದೇವಿ ಕೆಂಬಾವಿ ಸೇರಿದಂತೆ ಹಲವರಿದ್ದರು.

“ಡಿಸ್ಕವರ್ ವಿಜಯಪುರ’ ಆ್ಯಪ್ ಬಿಡುಗಡೆ

ವಿಶ್ವ ಪ್ರವಾಸೋದ್ಯಮ ಆಚರಣೆ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ಹೊಟೇಲ್ ವೀಕ್ಷಣಾ ಅವಧಿ ವಿವರ ವಿಜಯಪುರದ ವೈಭವದ ಇತಿಹಾಸ, ಸಂಸ್ಕೃತಿ ಮತ್ತು ವೈವಿಧ್ಯಮಯ ಅನುಭವಗಳನ್ನು ತಿಳಿಸಲು ಬಿಎಲ್ ಡಿಇ ಡಾ.ಫ.ಗು ಹಳಕಟ್ಟಿ ಇಂಜಿನೀಯರಿಂಗ್ ಹಾಗೂ ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳಾದ ದತ್ತಾ ಹಾಗೂ ತಂಡದ ಎಐ ತಂತ್ರಾಂಶ ಡಿಸ್ಕವರ್ ವಿಜಯಪುರ’ ಎಂಬ ನೂತನ ಆ್ಯಪ್ ಅನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶೋಷಿತರ ಧ್ವನಿಯಾಗಿ ಮಾನವ ಹಕ್ಕುಗಳ ರಕ್ಷಣೆಗೆ ಬದ್ಧ :ಮಕಾಂದಾರ

ನಿಸ್ವಾರ್ಥ ಸೇವಾ ಮನೋಭಾವ ಬೆಳೆಸುವ ಎನ್ನೆಸ್ಸೆಸ್ :ಪ್ರೊ.ಶಿತೋಳೆ

7 ವ್ಯಕ್ತಿಗಳಿಂದ1,564 ಅರ್ಜಿ: ಬಿಜೆಪಿ ಮತಗಳ್ಳತನ ಯತ್ನಕ್ಕೆ ಸಾಕ್ಷಿ

ಸಂಘಟಿತ ಹೋರಾಟದಿಂದ ಎಂಥಹ ಸಮಸ್ಯೆಗೂ ಪರಿಹಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶೋಷಿತರ ಧ್ವನಿಯಾಗಿ ಮಾನವ ಹಕ್ಕುಗಳ ರಕ್ಷಣೆಗೆ ಬದ್ಧ :ಮಕಾಂದಾರ
    In (ರಾಜ್ಯ ) ಜಿಲ್ಲೆ
  • ನಿಸ್ವಾರ್ಥ ಸೇವಾ ಮನೋಭಾವ ಬೆಳೆಸುವ ಎನ್ನೆಸ್ಸೆಸ್ :ಪ್ರೊ.ಶಿತೋಳೆ
    In (ರಾಜ್ಯ ) ಜಿಲ್ಲೆ
  • 7 ವ್ಯಕ್ತಿಗಳಿಂದ1,564 ಅರ್ಜಿ: ಬಿಜೆಪಿ ಮತಗಳ್ಳತನ ಯತ್ನಕ್ಕೆ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಸಂಘಟಿತ ಹೋರಾಟದಿಂದ ಎಂಥಹ ಸಮಸ್ಯೆಗೂ ಪರಿಹಾರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ವೇಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026
    In ವಿಶೇಷ ಲೇಖನ
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.