ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಶಾಲೆಯ ಮುಖ್ಯ ಶಿಕ್ಷಕ ರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಭಾನುವಾರ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಲಕ್ಷ್ಮೀಪುತ್ರ ಕಿರನಳ್ಳಿ ರವರ ಶೈಕ್ಷಣಿಕ, ಸಾಮಾಜಿಕ ಹಾಗೂ ಸಂಘಟನಾತ್ಮಕ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.
ಪ್ರಶಸ್ತಿಯನ್ನು ಮಾಜಿ ಸಭಾಪತಿಗಳು ಹಾಗೂ ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ , ಸಚಿವ ರುದ್ರಪ್ಪ ಲಮಾಣಿ, ಶಾಸಕ ಹಣಮಂತ ನಿರಾಣಿ, ಚಂದ್ರಶೇಖರ ನುಗ್ಲಿ, ಜಿ.ಹನುಮಂತಪ್ಪ, ರಾಜಾಧ್ಯಕ್ಷ ಶಿವಾನಂದ ಹಿರೇಕುರುಬರ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಮ್.ಕೆ.ರಾಜು, ಜಿಲ್ಲಾಧ್ಯಕ್ಷ ಗಿರೀಶ ಬಿರಾದಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಗುಳೇದಗುಡ್ಡ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ.ಹೊಸೂರ ಮುಂತಾದವರು ಪ್ರಶಸ್ತಿ ಪ್ರಧಾನ ಮಾಡಿದರು.
ಪ್ರಶಸ್ತಿ ಲಭಿಸಿದಕ್ಕೆ ಸಂಸ್ಥೆಯ ಅಧ್ಯಕ್ಷ ಎಸ್.ಆಯ್.ಜೋಗೂರ,ಕಾರ್ಯದರ್ಶಿ ಪ್ರಶಾಂತ ಬಡದಾಳ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕವೃಂದದವರು ಹರ್ಷ ವ್ಯಕ್ತ ಪಡಿಸಿದರು.

