ವಿಜಯಪುರದಲ್ಲಿ ದಾಖಲೆ ಬಿಡುಗಡೆ ಮಾಡಿದ ಸಚಿವ ಡಾ. ಎಂ.ಬಿ.ಪಾಟೀಲ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೆಲವು ರಾಜಕೀಯ ವ್ಯಕ್ತಿಗಳು ಪ್ರೇರಣೆಯಿಂದ ಬಬಲೇಶ್ವರ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ
೧೬೦೭ ಮತದಾರರ ಬಗ್ಗೆ ಆಕ್ಷೇಪಣೆಯನ್ನು ಸಾಮೂಹಿಕವಾಗಿ ಸಲ್ಲಿಕೆ ಮಾಡಿ, ನಂತರ ಈ ಆಕ್ಷೇಪಣೆಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ, ಈ ವೇಳೆ ಅವರೇ
ಅವರೇ ಸಹಿ ಮಾಡಿಕೊಟ್ಟಿರುವ ಪತ್ರದಲ್ಲಿ ತಾವು ಭಾರತೀಯ ಜನತಾ ಪಕ್ಷದವರು ಎಂದು ಉಲ್ಲೇಖಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ವಿಜಯಪುರ ನಗರ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿಯೂ ಕಳೆದ
೨೨-೯-೨೦೨೬
೫ ಸಾವಿರಕ್ಕೂ ಹೆಚ್ಚು ಆಕ್ಷೇಪಣೆ ಅರ್ಜಿ, ದಿನಾಂಕ ೨೩ ರಂದು ಪುನಃ ೮ ಸಾವಿರ ರೂ. ಹೀಗೆ ಒಟ್ಟು ೧೩ ಸಾವಿರ ಆಕ್ಷೇಪಣೆ ಸಲ್ಲಿಕೆ
ಮಾಡಿ ನಂತರ ಹಿಂದಕ್ಕೆ ಪಡೆದುಕೊಳ್ಳಲಾಗಿದೆ, ನನ್ನ ಮಾಹಿತಿ ಪ್ರಕಾರ ಆಕ್ಷೇಪಣೆ ಸಲ್ಲಿಕೆ ಮಾಡಿರುವ ರಾಜಕುಮಾರ ಬಿರಾದಾರ ಹಾಗೂ ಸಚಿನ್ ವಿಜಯಪುರ ನಗರ ಮತಕ್ಷೇತ್ರದ ಶಾಸಕರ ಕಾರ್ಯಾಲಯದ ಸಿಬ್ಬಂದಿ ಎಂಬ ಮಾಹಿತಿ ಇದೆ, ಇನ್ನುಳಿದಂತೆ ಆಕ್ಷೇಪಣೆ ಸಲ್ಲಿಕೆ ಮಾಡದವರಲ್ಲಿ ಪ್ರೇಮಾನಂದ ಬಿರಾದಾರ, ಚಂದ್ರಶೇಖರ ಕವಟಗಿ ಅವರು ಸಲ್ಲಿಕೆ ಮಾಡಿ ಈಗ ವಾಪಸ್ಸು ಪಡೆದುಕೊಂಡಿದ್ದಾರೆ.
ಈ ರೀತಿ ತಪ್ಪು ಮಾಹಿತಿ ನೀಡಿದವರ ಮೇಲೆ ಕ್ರಮ ಕೈಗೊಳ್ಳಲು ಕಾನೂನಾತ್ಮಕ ಹೋರಾಟದ ಬಗ್ಗೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತಿರುವೆ ಎಂದರು.
ಇದು ಸರಿಯಾದ ಮಾರ್ಗವಲ್ಲ, ಯಾವೊಬ್ಬ ಅರ್ಹ ಮತದಾರರ ಹಕ್ಕನ್ನು ಕಸಿದುಕೊಳ್ಳುವುದು ಅತ್ಯಂತ ಹೀನವಾದ ಕೃತ್ಯ ಎಂದರು.
ಈ ವೇಳೆ ಮುಖಂಡರಾದ ರಾಜು ಆಲಗೂರ, ಹಮೀದ ಮುಶ್ರೀಫ್, ಅಬ್ದುಲ್ ರಜಾಕ್ ಹೊರ್ತಿ, ದಿನೇಶ ಹಳ್ಳಿ ಸೇರಿದಂತೆ ಹಲವರಿದ್ದರು.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಯಾಗಲಿ
ಮುಖ್ಯ ಚುನಾವಣಾ ಆಯುಕ್ತರ ಮೇಲೆ ಗುರುತರ ಆಪಾದನೆ ಕೇಳಿಬಂದಿದ್ದು, ತಕ್ಷಣವೇ ಅವರನ್ನು ವಜಾಗೊಳಿಸಬೇಕು, ಅವರ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗಾಗಿ ಹಾಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಎಂ.ಬಿ. ಪಾಟೀಲ ಒತ್ತಾಯಿಸಿದರು.
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಚುನಾವಣಾ ಆಯೋಗವನ್ನು ದುರಪಯೋಗಪಡಿಸಿಕೊಂಡು ಅರ್ಹ ಮತದಾರರನ್ನು ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

