Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪ್ರೀತಿ.. ಹಕ್ಕಲ್ಲ, ಒಂದು ಸುಂದರ ಭಾವನೆ

ಮಹಿಳಾ ವಿವಿ: ಇಂದು ರಾಷ್ಟ್ರೀಯ ವಿಚಾರ ಸಂಕಿರಣ

ಜೆನ್–ಜಿ ಯುವಜನಾಂಗ: ಒಂದು ಜಿಜ್ಞಾಸೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ಮಹಿಳಾ ವಿವಿ: ಇಂದು ರಾಷ್ಟ್ರೀಯ ವಿಚಾರ ಸಂಕಿರಣ
Uncategorized

ಮಹಿಳಾ ವಿವಿ: ಇಂದು ರಾಷ್ಟ್ರೀಯ ವಿಚಾರ ಸಂಕಿರಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ ವತಿಯಿಂದ ಸೆಪ್ಟೆಂಬರ್ ೩೦ರಂದು “ಹಿಂದಿ ಭಾಷೆ ಸಾಹಿತ್ಯದ ವಿವಿಧ ಆಯಾಮಗಳು” ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ವಿಚಾರ ಸಂಕಿರಣದ ಸಂಯೋಜಕ ಪ್ರೊ. ನಾಮದೇವ ಎಂ.ಗೌಡ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಭಾಷೆ ಹಾಗೂ ಸಾಹಿತ್ಯದ ಕುರಿತು ಸಮಗ್ರ ಚಿಂತನೆ ಮತ್ತು ಚರ್ಚೆಯ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ದೇಶದ ಪ್ರತಿಷ್ಠಿತ ವಿದ್ವಾಂಸರನ್ನು ಆಹ್ವಾನಿಸಿ ವಿದ್ಯಾರ್ಥಿನಿಯರಲ್ಲಿ ಹಿಂದಿ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸುವುದು ವಿಚಾರ ಸಂಕಿರಣದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ವಿಚಾರ ಸಂಕಿರಣವನ್ನು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಉದ್ಘಾಟಿಸಲಿದ್ದಾರೆ. ವಿಶ್ವವಿದ್ಯಾಲಯದ ಕುಲಸಚಿವ ಡಾ.ವಿಜಯಕುಮಾರ ಬಿ. ಅಜೂರ ಉಪಸ್ಥಿತರಿರಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ಮಹಾರಾಷ್ಟ್ರದ ನಲದುರ್ಗದ ಪ್ರೊ.ಹಾಶಿಂಬೆಗ್ ಮಿರ್ಜಾ ಹಾಗೂ ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಡಾ.ಭಾವನಾ ಭಾಗವಹಿಸಿ ಹಿಂದಿ ಭಾಷೆ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ವಿಚಾರ ಮಂಡಿಸಲಿದ್ದಾರೆ.
ವಿಚಾರ ಸಂಕಿರಣದ ಅಂಗವಾಗಿ ದಿನವಿಡೀ ವಿವಿಧ ಗೋಷ್ಠಿಗಳು ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಹಲವಾರು ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ.
ವಿಶ್ವವಿದ್ಯಾಲಯದ ಐಕ್ಯುಎಸಿ ನಿರ್ದೇಶಕರಾದ ಪ್ರೊ. ಶಾಂತಾದೇವಿ ಟಿ. ಹಾಗೂ ಪ್ರೊ.ಮಹೇಶ ಚಿಂತಾಮಣಿ ಅವರು ವಿಚಾರ ಸಂಕಿರಣದಲ್ಲಿ ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮೌಲ್ಯಮಾಪನ ಕುಸಚಿವರಾದ ಪ್ರೊ.ಬಿ.ಎಲ್. ಲಕ್ಷ್ಮಣವರ್ ವಹಿಸಲಿದ್ದಾರೆ. ಪ್ರೊ.ರಾಜು ಬಾಗಲಕೋಟ, ಡಾ. ಗುಲಾಬ್ ರಾಠೋಡ್ ಹಾಗೂ ಡಾ.ಅಮರನಾಥ ಪ್ರಜಾಪತಿ ಉಪಸ್ಥಿತರಿರಲಿದ್ದಾರೆ ಎಂದು ಪ್ರೊ. ನಾಮದೇವ ಎಂ.ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪ್ರೀತಿ.. ಹಕ್ಕಲ್ಲ, ಒಂದು ಸುಂದರ ಭಾವನೆ

ಜೆನ್–ಜಿ ಯುವಜನಾಂಗ: ಒಂದು ಜಿಜ್ಞಾಸೆ!

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 29,2026

₹೨,೫೦೦ ಪರಿಹಾರಕ್ಕೆ ರೈತರ ಆಕ್ರೋಶ :ವಿನೂತನ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪ್ರೀತಿ.. ಹಕ್ಕಲ್ಲ, ಒಂದು ಸುಂದರ ಭಾವನೆ
    In ವಿಶೇಷ ಲೇಖನ
  • ಮಹಿಳಾ ವಿವಿ: ಇಂದು ರಾಷ್ಟ್ರೀಯ ವಿಚಾರ ಸಂಕಿರಣ
    In Uncategorized
  • ಜೆನ್–ಜಿ ಯುವಜನಾಂಗ: ಒಂದು ಜಿಜ್ಞಾಸೆ!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 29,2026
    In ದಿನಪತ್ರಿಕೆ
  • ₹೨,೫೦೦ ಪರಿಹಾರಕ್ಕೆ ರೈತರ ಆಕ್ರೋಶ :ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ನೇಮಕಾತಿ ಪರೀಕ್ಷೆ ಸುಸೂತ್ರ ನಿರ್ವಹಣೆಗೆ ಡಿಸಿ ಡಾ.ಆನಂದ ಕೆ ಸೂಚನೆ
    In (ರಾಜ್ಯ ) ಜಿಲ್ಲೆ
  • ರೈತರ ಆರ್ಥಿಕ ಸ್ವಾವಲಂಬನೆಗೆ ಹೊಸ ಹೆಜ್ಜೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ: ಶಾಕಂಬರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರಥಮ
    In (ರಾಜ್ಯ ) ಜಿಲ್ಲೆ
  • ಸಹಕಾರಿ ಸಂಘಗಳ ಪ್ರಗತಿಯಲ್ಲಿ ರೈತರ ಸಹಕಾರ ಮುಖ್ಯ
    In (ರಾಜ್ಯ ) ಜಿಲ್ಲೆ
  • ಸಹಕಾರ, ತಾಳ್ಮೆ, ಭಾತೃತ್ವದಿಂದ ಸಂಘ ಪ್ರಗತಿ ಕಾಣಲು ಸಾಧ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.