ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಕ್ಟೋಬರ್ ೨ ರಂದು ಮಹಾತ್ಮ ಗಾಂಧಿ ಜಯಂತಿ ಆಚರಣೆ ಹಿನ್ನಲೆಯಲ್ಲಿ ಅಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿತ ದಿನವೆಂದು ಸರ್ಕಾರ ಘೋಷಿಸಿದ್ದು, ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮಾಡುವುದು ಹಾಗೂ ಮಾಂಸ ಮಾರಾಟ ಮಾಡುವುದನ್ನು ಅ.೨ರಂದು ನಿಷೇಧಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

