Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಸಂಪರ್ಕ ಬಲಪಡಿಸುವತ್ತ ಮಹತ್ವದ ಹೆಜ್ಜೆ

ಸರ್ಕಾರಿ ಶಾಲೆ ಮಕ್ಕಳಿಗೆ ಸ್ವಂತ ಹಣದಿಂದ ಶೂ-ಸಾಕ್ಸ್ ವಿತರಣೆ

ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿಂಗಾರು ಬಿತ್ತನೆ ಆರಂಭ: ಬೀಜೋಪಚಾರ, ಜೈವಿಕ ಗೊಬ್ಬರ ಬಳಕೆಗೆ ಸಲಹೆ
(ರಾಜ್ಯ ) ಜಿಲ್ಲೆ

ಹಿಂಗಾರು ಬಿತ್ತನೆ ಆರಂಭ: ಬೀಜೋಪಚಾರ, ಜೈವಿಕ ಗೊಬ್ಬರ ಬಳಕೆಗೆ ಸಲಹೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಹಿಂಗಾರು ಹಂಗಾಮು ಆರಂಭವಾಗಿದ್ದು, ಮಣ್ಣಿನಲ್ಲಿ ಸೂಕ್ತ ತೇವಾಂಶವಿದ್ದಾಗ ರೈತರು ಜೋಳ, ಕಡಲೆ ಹಾಗೂ ಗೋಧಿ ಬಿತ್ತನೆ ಕೈಗೊಳ್ಳುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಎಸ್. ಪಾಟೀಲ ಸಲಹೆ ನೀಡಿದ್ದಾರೆ.
ಬಿತ್ತನೆಗೂ ಮುನ್ನ ಸೂಕ್ತ ಬೀಜೋಪಚಾರ ಹಾಗೂ ಜೈವಿಕ ಗೊಬ್ಬರಗಳ ಬಳಕೆಯಿಂದ ಉತ್ತಮ ಮೊಳಕೆ, ಆರೋಗ್ಯಕರ ಬೆಳವಣಿಗೆ ಹಾಗೂ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಹಿಂಗಾರಿ ಜೋಳ ಬಿತ್ತನೆಗೆ ಪ್ರತಿ ಕಿಲೋಗ್ರಾಂ ಬಿತ್ತನೆ ಬೀಜಕ್ಕೆ ೩೦ ಗ್ರಾಂ ಕ್ಯಾಲ್ಸಿಯಂ ಕ್ಲೋರೈಡ್, ೧.೫ ಲೀಟರ್ ನೀರಿನಲ್ಲಿ ಬೆರೆಸಿ ೮ ಗಂಟೆಗಳ ಕಾಲ ನೆನೆಸಬೇಕು. ಬಳಿಕ ಬೀಜವನ್ನು ೮ ಗಂಟೆಗಳ ಕಾಲ ನೆರಳಿನಲ್ಲಿ ಒಣಗಿಸಿ ಬಿತ್ತನೆ ಮಾಡುವುದರಿಂದ ಮೊಳಕೆ ಪ್ರಮಾಣ ಸುಧಾರಿಸುವುದರ ಜೊತೆಗೆ, ಬೆಳೆಯ ಬರನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಪ್ರತಿ ಕಿಲೋಗ್ರಾಂ ಬೀಜಕ್ಕೆ ಕನಿಷ್ಠ ೪ ಗ್ರಾಂ ಅಜೋಸ್ಪಿರಿಲಂ ಹಾಗೂ ೪ ಮಿ.ಲೀ. ರಂಜಕ ಕರಗಿಸುವ ಜೈವಿಕ ಗೊಬ್ಬರದಿಂದ ಬೀಜೋಪಚಾರ ಮಾಡಬೇಕು. ಅಜೋಸ್ಪಿರಿಲಂ ಗಾಳಿಯಲ್ಲಿರುವ ಸಾರಜನಕವನ್ನು ಬೆಳೆಗಳಿಗೆ ಲಭ್ಯವಾಗುವಂತೆ ಮಾಡುವುದರ ಜೊತೆಗೆ ಬೇರುಗಳ ಬೆಳವಣಿಗೆಗೆ ಸಹಕಾರಿಯಾಗುವ ಹಾರ್ಮೋನ್‌ಗಳನ್ನು ಉತ್ಪಾದಿಸುತ್ತದೆ. ರಂಜಕ ಕರಗಿಸುವ ಜೈವಿಕ ಗೊಬ್ಬರವು ಮಣ್ಣಿನಲ್ಲಿರುವ ಸ್ಥಿರ ರಂಜಕವನ್ನು ಕರಗಿಸಿ ಸಸ್ಯಗಳಿಗೆ ಸುಲಭವಾಗಿ ದೊರೆಯುವಂತೆ ಮಾಡುತ್ತದೆ.
ಗೋಧಿ ಬಿತ್ತನೆಗೆ ಪ್ರತಿ ಕಿಲೋಗ್ರಾಂ ಬೀಜಕ್ಕೆ ಕನಿಷ್ಠ ೪ ಗ್ರಾಂ ಅಜೋಸ್ಪಿರಿಲಂ ಹಾಗೂ ೪ ಮಿ.ಲೀ. ರಂಜಕ ಕರಗಿಸುವ ಜೈವಿಕ ಗೊಬ್ಬರದಿಂದ ಬೀಜೋಪಚಾರ ಮಾಡುವುದು ಅಗತ್ಯವಾಗಿದೆ. ಬಿತ್ತನೆಗೂ ಮೊದಲು ರಸಗೊಬ್ಬರಗಳನ್ನು ೬ರಿಂದ ೮ ಸೆಂಟಿಮೀಟರ್ ಆಳದ ಸಾಲುಗಳಲ್ಲಿ ಮಣ್ಣಿನೊಂದಿಗೆ ಬೆರೆಸಬೇಕು. ಬಿತ್ತನೆ ಸಂದರ್ಭದಲ್ಲಿ ಎಕರೆಗೆ ೮ ಕೆಜಿ ಮೈಕೋರೈಜಾ ಜೈವಿಕ ಗೊಬ್ಬರವನ್ನು ೨೦೦ ಕೆಜಿ ಎರೆಹುಳು ಗೊಬ್ಬರದೊಂದಿಗೆ ಮಿಶ್ರಣ ಮಾಡಿ ಬಿತ್ತನೆ ಸಾಲಿನ ಮಣ್ಣಿನಲ್ಲಿ ಸೇರಿಸುವುದು ಉತ್ತಮ. ಮೈಕೋರೈಜಾ ಬಳಕೆಯಿಂದ ಸಸ್ಯಗಳಿಗೆ ಸುಲಭವಾಗಿ ಲಭ್ಯವಾಗದ ರಂಜಕ, ಸತು ಹಾಗೂ ಸಾರಜನಕದಂತಹ ಪೋಷಕಾಂಶಗಳು ದೊರೆಯಲು ಸಹಕಾರಿಯಾಗುತ್ತದೆ.
ಕಡಲೆ ಬಿತ್ತನೆಗೂ ಮುನ್ನ ಬರನಿರೋಧಕತೆ ಹೆಚ್ಚಿಸಲು ಬಿತ್ತನೆ ಬೀಜವನ್ನು ಶೇಕಡಾ ೨ರ ಕ್ಯಾಲ್ಸಿಯಂ ದ್ರಾವಣದಲ್ಲಿ ೩೦ ನಿಮಿಷ ಅಥವಾ ಶೇಕಡಾ ೨೫ರ ಗೋಮೂತ್ರದಲ್ಲಿ ೮ ಗಂಟೆಗಳ ಕಾಲ ನೆನೆಸಬೇಕು. ನಂತರ ಕನಿಷ್ಠ ೭ ಗಂಟೆಗಳ ಕಾಲ ನೆರಳಿನಲ್ಲಿ ಒಣಗಿಸಿ, ರೈಜೋಬಿಯಂ ಹಾಗೂ ರಂಜಕ ಕರಗಿಸುವ ಅಣುಜೀವಿಯಿಂದ ಬೀಜೋಪಚಾರ ಮಾಡಬೇಕು. ರೈಜೋಬಿಯಂ ಅಣುಗಳು ವಾತಾವರಣದಲ್ಲಿರುವ ಸಾರಜನಕವನ್ನು ಸಸ್ಯಗಳಿಗೆ ಅಗತ್ಯವಿರುವ ರೂಪಕ್ಕೆ ಪರಿವರ್ತಿಸಿ ಪೋಷಣೆಗೆ ನೆರವಾಗುತ್ತವೆ.
ಹಿಂಗಾರು ಹಂಗಾಮಿನಲ್ಲಿ ರೈತರು ವೈಜ್ಞಾನಿಕ ಹಾಗೂ ಸುಧಾರಿತ ಬಿತ್ತನೆ ಪದ್ಧತಿಗಳನ್ನು ಅಳವಡಿಸಿಕೊಂಡು, ಬೀಜೋಪಚಾರ ಹಾಗೂ ಜೈವಿಕ ಗೊಬ್ಬರ ಬಳಕೆಗೆ ಆದ್ಯತೆ ನೀಡುವ ಮೂಲಕ ಉತ್ತಮ ಬೆಳೆ ಮತ್ತು ಇಳುವರಿ ಪಡೆಯಬೇಕು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಜಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಸಂಪರ್ಕ ಬಲಪಡಿಸುವತ್ತ ಮಹತ್ವದ ಹೆಜ್ಜೆ

ಸರ್ಕಾರಿ ಶಾಲೆ ಮಕ್ಕಳಿಗೆ ಸ್ವಂತ ಹಣದಿಂದ ಶೂ-ಸಾಕ್ಸ್ ವಿತರಣೆ

ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ

ಗಾಂಧಿ ಜಯಂತಿ: ಪ್ರಾಣಿವಧೆ- ಮಾಂಸ ಮಾರಾಟ ನಿಷೇಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಸಂಪರ್ಕ ಬಲಪಡಿಸುವತ್ತ ಮಹತ್ವದ ಹೆಜ್ಜೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆ ಮಕ್ಕಳಿಗೆ ಸ್ವಂತ ಹಣದಿಂದ ಶೂ-ಸಾಕ್ಸ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ
    In (ರಾಜ್ಯ ) ಜಿಲ್ಲೆ
  • ಹಿಂಗಾರು ಬಿತ್ತನೆ ಆರಂಭ: ಬೀಜೋಪಚಾರ, ಜೈವಿಕ ಗೊಬ್ಬರ ಬಳಕೆಗೆ ಸಲಹೆ
    In (ರಾಜ್ಯ ) ಜಿಲ್ಲೆ
  • ಗಾಂಧಿ ಜಯಂತಿ: ಪ್ರಾಣಿವಧೆ- ಮಾಂಸ ಮಾರಾಟ ನಿಷೇಧ
    In (ರಾಜ್ಯ ) ಜಿಲ್ಲೆ
  • ಅ.೭ ರಿಂದ ರೈತರಿಗೆ ಉಚಿತನೈಸರ್ಗಿಕ ಕೃಷಿ ತರಬೇತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಅ.೧ ರಂದು ಕಾನೂನು ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ​ರೈತರು-ಸೈನಿಕರ ಆರ್‌ಟಿಐ ಅರ್ಜಿಗಳಿಗೆ ನಿರ್ಲಕ್ಷ್ಯ: ತಪ್ಪಿತಸ್ಥ ಅಧಿಕಾರಿಗಳಿಗೆ ದಂಡ
    In (ರಾಜ್ಯ ) ಜಿಲ್ಲೆ
  • ಮತಪಟ್ಟಿಯಲ್ಲಿ ಎರಡೆರಡು ಕಡೆ ಮುಸ್ಲಿಂ ಮತದಾರರ ಹೆಸರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.