Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಸಂಪರ್ಕ ಬಲಪಡಿಸುವತ್ತ ಮಹತ್ವದ ಹೆಜ್ಜೆ

ಸರ್ಕಾರಿ ಶಾಲೆ ಮಕ್ಕಳಿಗೆ ಸ್ವಂತ ಹಣದಿಂದ ಶೂ-ಸಾಕ್ಸ್ ವಿತರಣೆ

ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಶಾಲೆ ಮಕ್ಕಳಿಗೆ ಸ್ವಂತ ಹಣದಿಂದ ಶೂ-ಸಾಕ್ಸ್ ವಿತರಣೆ
(ರಾಜ್ಯ ) ಜಿಲ್ಲೆ

ಸರ್ಕಾರಿ ಶಾಲೆ ಮಕ್ಕಳಿಗೆ ಸ್ವಂತ ಹಣದಿಂದ ಶೂ-ಸಾಕ್ಸ್ ವಿತರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿದ್ದ 55 ಮಕ್ಕಳಿಗೆ ಮಲ್ಲಿಕಾರ್ಜುನ ಹಂಜಗಿ ನೆರವು

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಸೌಲಭ್ಯಗಳು ಸಮಾನವಾಗಿ ದೊರೆಯಬೇಕು ಎಂಬ ಕಾಳಜಿಯಿಂದ ಮುಖಂಡ ಮಲ್ಲಿಕಾರ್ಜುನ ಹಂಜಗಿ ಅವರು ತಮ್ಮ ಸ್ವಂತ ಹಣದಿಂದ 55 ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಶೂ ಹಾಗೂ ಸಾಕ್ಸ್ ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತಿಕೋಟಾ ಪಟ್ಟಣದ ಸರ್ಕಾರಿ ಹೆಣ್ಣು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಎಂಟನೇ ತರಗತಿಯ ಮಕ್ಕಳಿಗೆ ಸರ್ಕಾರದಿಂದ ಶೂ ಹಾಗೂ ಸಾಕ್ಸ್ ವಿತರಿಸಲಾಗುತ್ತಿದೆ. ಆದರೆ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಈ ಸೌಲಭ್ಯ ದೊರೆಯುತ್ತಿರಲಿಲ್ಲ. ಇದರಿಂದ ಚಿಕ್ಕ ಮಕ್ಕಳಿಗೂ ತಾರತಮ್ಯವಾಗಬಾರದು ಎಂಬ ಉದ್ದೇಶದಿಂದ ಮಲ್ಲಿಕಾರ್ಜುನ ಹಂಜಗಿ ಅವರು ತಮ್ಮ ಸ್ವಂತ ಹಣವನ್ನು ವಿನಿಯೋಗಿಸಿ ಶಾಲೆಯ 55 ಮಕ್ಕಳಿಗೆ ಮಂಗಳವಾರ ಶೂ ಹಾಗೂ ಸಾಕ್ಸ್ ವಿತರಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದು ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಮಲ್ಲಿಕಾರ್ಜುನ ಹಂಜಗಿ ಅವರು ಕೈಗೊಂಡಿರುವ ಕಾರ್ಯವು ಸರ್ಕಾರಿ ಶಾಲೆಗಳ ಮೇಲಿನ ಅವರ ಕಾಳಜಿ ಮತ್ತು ಮಕ್ಕಳ ಮೇಲಿನ ಪ್ರೀತಿಗೆ ಸಾಕ್ಷಿಯಾಗಿದೆ.
ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಸರ್ಕಾರದ ಸೌಲಭ್ಯಗಳ ಜೊತೆಗೆ ಸಮಾಜದ ದಾನಿಗಳು, ಮುಖಂಡರು ಹಾಗೂ ಸಾರ್ವಜನಿಕರು ಸಹಕರಿಸಿದರೆ ಮಕ್ಕಳಿಗೆ ಇನ್ನಷ್ಟು ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಮುಖ್ಯಶಿಕ್ಷಕ ಎಂ.ಕೆ. ಬಗಲಿ, ರಾಮರಾವ ದೇಸಾಯಿ, ಮಾಳು ಗುಗದಡ್ಡಿ, ಸದಾಶಿವ ಪೂಜಾರಿ, ಶಿವಾನಂದ ಪರೀಟ್, ಗುರಯ್ಯ ಕೊಳಾಲಮಠ, ಬಸವರಾಜ ನಾವಿ, ಬಾಪು ಕೊಣ್ಣೂರ, ಅಶ್ವಿನಿ ಶಿವನಾಕರ, ಎಸ್.ಎಸ್.ಚಾವರ ಸೇರಿದಂತೆ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಸಂಪರ್ಕ ಬಲಪಡಿಸುವತ್ತ ಮಹತ್ವದ ಹೆಜ್ಜೆ

ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ

ಹಿಂಗಾರು ಬಿತ್ತನೆ ಆರಂಭ: ಬೀಜೋಪಚಾರ, ಜೈವಿಕ ಗೊಬ್ಬರ ಬಳಕೆಗೆ ಸಲಹೆ

ಗಾಂಧಿ ಜಯಂತಿ: ಪ್ರಾಣಿವಧೆ- ಮಾಂಸ ಮಾರಾಟ ನಿಷೇಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಸಂಪರ್ಕ ಬಲಪಡಿಸುವತ್ತ ಮಹತ್ವದ ಹೆಜ್ಜೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆ ಮಕ್ಕಳಿಗೆ ಸ್ವಂತ ಹಣದಿಂದ ಶೂ-ಸಾಕ್ಸ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ
    In (ರಾಜ್ಯ ) ಜಿಲ್ಲೆ
  • ಹಿಂಗಾರು ಬಿತ್ತನೆ ಆರಂಭ: ಬೀಜೋಪಚಾರ, ಜೈವಿಕ ಗೊಬ್ಬರ ಬಳಕೆಗೆ ಸಲಹೆ
    In (ರಾಜ್ಯ ) ಜಿಲ್ಲೆ
  • ಗಾಂಧಿ ಜಯಂತಿ: ಪ್ರಾಣಿವಧೆ- ಮಾಂಸ ಮಾರಾಟ ನಿಷೇಧ
    In (ರಾಜ್ಯ ) ಜಿಲ್ಲೆ
  • ಅ.೭ ರಿಂದ ರೈತರಿಗೆ ಉಚಿತನೈಸರ್ಗಿಕ ಕೃಷಿ ತರಬೇತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಅ.೧ ರಂದು ಕಾನೂನು ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ​ರೈತರು-ಸೈನಿಕರ ಆರ್‌ಟಿಐ ಅರ್ಜಿಗಳಿಗೆ ನಿರ್ಲಕ್ಷ್ಯ: ತಪ್ಪಿತಸ್ಥ ಅಧಿಕಾರಿಗಳಿಗೆ ದಂಡ
    In (ರಾಜ್ಯ ) ಜಿಲ್ಲೆ
  • ಮತಪಟ್ಟಿಯಲ್ಲಿ ಎರಡೆರಡು ಕಡೆ ಮುಸ್ಲಿಂ ಮತದಾರರ ಹೆಸರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.