Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಸಂಪರ್ಕ ಬಲಪಡಿಸುವತ್ತ ಮಹತ್ವದ ಹೆಜ್ಜೆ

ಸರ್ಕಾರಿ ಶಾಲೆ ಮಕ್ಕಳಿಗೆ ಸ್ವಂತ ಹಣದಿಂದ ಶೂ-ಸಾಕ್ಸ್ ವಿತರಣೆ

ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣ ಸಂಪರ್ಕ ಬಲಪಡಿಸುವತ್ತ ಮಹತ್ವದ ಹೆಜ್ಜೆ
(ರಾಜ್ಯ ) ಜಿಲ್ಲೆ

ಗ್ರಾಮೀಣ ಸಂಪರ್ಕ ಬಲಪಡಿಸುವತ್ತ ಮಹತ್ವದ ಹೆಜ್ಜೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಥಣಿ ಕ್ಷೇತ್ರದಲ್ಲಿ ₹10.15 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಸಚಿವ ಲಕ್ಷ್ಮಣ ಸವದಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ಅಥಣಿ: ಕ್ಷೇತ್ರದ ಗ್ರಾಮೀಣ ಭಾಗಗಳ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆ ವತಿಯಿಂದ ಅಂದಾಜು ₹10 ಕೋಟಿ 15 ಲಕ್ಷ ವೆಚ್ಚದಲ್ಲಿ ವಿವಿಧ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಸಹಕಾರ ಸಚಿವರು ಹಾಗೂ ಅಥಣಿ ಕ್ಷೇತ್ರದ ಶಾಸಕರಾದ ಲಕ್ಷ್ಮಣ ಸವದಿ ಅವರು ಭೂಮಿಪೂಜೆ ನೆರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ರಸ್ತೆ ಮತ್ತು ಸೇತುವೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಮಳೆಗಾಲ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಗ್ರಾಮಸ್ಥರು ಸಂಚಾರಕ್ಕೆ ಎದುರಿಸುತ್ತಿರುವ ತೊಂದರೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಹಲವು ಗ್ರಾಮಗಳ ಸಂಪರ್ಕ ವ್ಯವಸ್ಥೆ ಮತ್ತಷ್ಟು ಸುಧಾರಿಸುವ ನಿರೀಕ್ಷೆ ಇದೆ.
ಅಥಣಿ ಕ್ಷೇತ್ರದ ಶಿರಹಟ್ಟಿ ಗ್ರಾಮದಲ್ಲಿ ಸೇತುವೆ ನಿರ್ಮಾಣ, ಕೊಕಟನೂರ ಗ್ರಾಮದ ಎಲ್ಲಮ್ಮವಾಡಿಯಲ್ಲಿ ಸೇತುವೆ ನಿರ್ಮಾಣ, ಹುಲಗಬಾಳಿ–ರಾಮವಾಡಿ ರಸ್ತೆ ನಿರ್ಮಾಣ, ಹುಲಗಬಾಳಿಯಲ್ಲಿ ಸಂಗಮೇಶ್ವರ ರಸ್ತೆ ನಿರ್ಮಾಣ ಹಾಗೂ ಹುಲಗಬಾಳಿ ಗ್ರಾಮದ ಕೆಂಪಿ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಲಕ್ಷ್ಮಣ ಸವದಿ ಅವರು ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಸಚಿವ ಲಕ್ಷ್ಮಣ ಸವದಿ ಅವರು, ಗ್ರಾಮೀಣ ಭಾಗದ ಜನರಿಗೆ ಉತ್ತಮ ರಸ್ತೆ, ಸುಗಮ ಸಂಚಾರ ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸುವುದು ಅಭಿವೃದ್ಧಿಯ ಪ್ರಮುಖ ಭಾಗವಾಗಿದೆ. ಕ್ಷೇತ್ರದ ವಿವಿಧ ಗ್ರಾಮಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಬಹುಕಾಲದಿಂದ ರಸ್ತೆ ಹಾಗೂ ಸೇತುವೆ ನಿರ್ಮಾಣದ ನಿರೀಕ್ಷೆಯಲ್ಲಿದ್ದ ಗ್ರಾಮಸ್ಥರಲ್ಲಿ ಕಾಮಗಾರಿಗಳಿಗೆ ಚಾಲನೆ ದೊರೆತ ಹಿನ್ನೆಲೆಯಲ್ಲಿ ಸಂತಸ ವ್ಯಕ್ತವಾಯಿತು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ಕಾರಿ ಶಾಲೆ ಮಕ್ಕಳಿಗೆ ಸ್ವಂತ ಹಣದಿಂದ ಶೂ-ಸಾಕ್ಸ್ ವಿತರಣೆ

ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ

ಹಿಂಗಾರು ಬಿತ್ತನೆ ಆರಂಭ: ಬೀಜೋಪಚಾರ, ಜೈವಿಕ ಗೊಬ್ಬರ ಬಳಕೆಗೆ ಸಲಹೆ

ಗಾಂಧಿ ಜಯಂತಿ: ಪ್ರಾಣಿವಧೆ- ಮಾಂಸ ಮಾರಾಟ ನಿಷೇಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಸಂಪರ್ಕ ಬಲಪಡಿಸುವತ್ತ ಮಹತ್ವದ ಹೆಜ್ಜೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆ ಮಕ್ಕಳಿಗೆ ಸ್ವಂತ ಹಣದಿಂದ ಶೂ-ಸಾಕ್ಸ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ
    In (ರಾಜ್ಯ ) ಜಿಲ್ಲೆ
  • ಹಿಂಗಾರು ಬಿತ್ತನೆ ಆರಂಭ: ಬೀಜೋಪಚಾರ, ಜೈವಿಕ ಗೊಬ್ಬರ ಬಳಕೆಗೆ ಸಲಹೆ
    In (ರಾಜ್ಯ ) ಜಿಲ್ಲೆ
  • ಗಾಂಧಿ ಜಯಂತಿ: ಪ್ರಾಣಿವಧೆ- ಮಾಂಸ ಮಾರಾಟ ನಿಷೇಧ
    In (ರಾಜ್ಯ ) ಜಿಲ್ಲೆ
  • ಅ.೭ ರಿಂದ ರೈತರಿಗೆ ಉಚಿತನೈಸರ್ಗಿಕ ಕೃಷಿ ತರಬೇತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಅ.೧ ರಂದು ಕಾನೂನು ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ​ರೈತರು-ಸೈನಿಕರ ಆರ್‌ಟಿಐ ಅರ್ಜಿಗಳಿಗೆ ನಿರ್ಲಕ್ಷ್ಯ: ತಪ್ಪಿತಸ್ಥ ಅಧಿಕಾರಿಗಳಿಗೆ ದಂಡ
    In (ರಾಜ್ಯ ) ಜಿಲ್ಲೆ
  • ಮತಪಟ್ಟಿಯಲ್ಲಿ ಎರಡೆರಡು ಕಡೆ ಮುಸ್ಲಿಂ ಮತದಾರರ ಹೆಸರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.