Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆ ಈಡೇರಿಕೆಗೆ ರೈತರಿಂದ ಜೋಡೆತ್ತಿನ ಬಂಡಿಗಳ ರ್ಯಾಲಿ

ನಕಲಿ ವೈದ್ಯರ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ!

ದೇವರಹಿಪ್ಪರಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ್ ಬ್ಯಾಡಗಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯ ಸರ್ಕಾರ ನುಡಿದಂತೆ ನಡೆದುಕೊಂಡಿದ್ದು, ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿವೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಪಾಟೀಲ್ ಬ್ಯಾಡಗಿ ಹೇಳಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ನಡೆದ ೨೦೨೬-೨೭ನೇ ಸಾಲಿನ ಆಗಸ್ಟ್ -೨೦೨೬ರ ಅಂತ್ಯದವರೆಗಿನ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಮಿತಿ ರಚನೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳು ಮಹಿಳೆಯರು ಹಾಗೂ ಹಿಂದುಳಿದ ವರ್ಗದ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪಿ ಅವರ ಜೀವನ ಉಜ್ವಲಗೊಳ್ಳಬೇಕು ಎಂಬ ಕಳಕಳಿ ಮುಖ್ಯಮಂತ್ರಿಗಳದ್ದಾಗಿದೆ. ಫಲಾನುಭವಿಗಳ ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹರಿಸಲು ಸಿಎಂ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಯೋಜನೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಲು ವಾರ್ಡ್ ಮಟ್ಟದ ಸಮಿತಿಗಳನ್ನು ರಚಿಸಲಾಗುವುದು ಎಂದರು.
ರಾಜ್ಯದ ಮುಖ್ಯಮಂತ್ರಿಗಳು ಹಲವಾರು ಗ್ಯಾರಂಟಿ ಸಭೆಗಳನ್ನು ನಡೆಸುವ ಮೂಲಕ ಗ್ಯಾರಂಟಿಗಳ ಲಾಭವನ್ನು ಪ್ರತಿ ಫಲಾನುಭವಿಗೆ ತಲುಪಿಸಲು ನಿರಂತರ ಶ್ರಮಿಸುತ್ತಿದ್ದಾರೆ. ಗ್ರಾಮ ಪಂಚಾಯತ ಮಟ್ಟದಲ್ಲಿನ ಫಲಾನುಭವಿ ಯಶೋಗಾಥೆಗಳ ಕೈಪಿಡಿ ತರಬೇಕು ಎಂದು ಸಲಹೆ ನೀಡಿದರು.
ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸಲಾಗುತ್ತಿದೆ. ಶೇ.೭೮ ಇ-ಕೆವೈಸಿ ಪ್ರಗತಿ ಸಾಧಿಸಲಾಗಿದೆ. ನಮ್ಮ ಜಿಲ್ಲೆಯ ಪ್ರಗತಿ ಆಶಾದಾಯಕವಾಗಿದೆ ಎಂದು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್ ದೈವಾಡಿ ಮಾತನಾಡಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಭಾರತ ಜೋಡೋ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ೩೨೦ ಸಂಘ ರಚಿಸಿದ್ದೇವೆ. ಜೊತೆಗೆ ಮೆಂಟರ್ ಗಳನ್ನು ನೇಮಕ ಮಾಡಲಾಗಿದೆ ಎಂದು ಸಭೆಗೆ ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೋಡೆ, ಮಹಾನಗರ ಪಾಲಿಕೆ ಗ್ಯಾರಂಟಿ ಯೋಜನೆ ಅಧ್ಯಕ್ಷ ಶಬ್ಬೀರ ಜಾಗೀರಾದಾರ, ಉಪಾಧ್ಯಕ್ಷರುಗಳಾದ ಹೊನಮಲ್ಲ ರಾಠೋಡ, ನಬೀಲಾಲ್ ನಾಯ್ಕೋಡಿ, ಆನಂದ ಜಾಧವ, ಮಹಾದೇವಿ ಗೋಕಾಕ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸಂತೋಷ್ ಎಚ್. ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಪ್ರೇಮಾನಂದ ಬಿರಾದಾರ, ಮುಖ್ಯ ಯೋಜನಾಧಿಕಾರಿ ಸಿ.ಬಿ.ಕುಂಬಾರ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆ ಈಡೇರಿಕೆಗೆ ರೈತರಿಂದ ಜೋಡೆತ್ತಿನ ಬಂಡಿಗಳ ರ್ಯಾಲಿ

ನಕಲಿ ವೈದ್ಯರ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ!

ದೇವರಹಿಪ್ಪರಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ

ಅ.೨ರಂದು ಭೂಮಾಪಕರ ನೇಮಕಾತಿ ಪರೀಕ್ಷೆ :ನಿಷೇಧಾಜ್ಞೆ ಜಾರಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆ ಈಡೇರಿಕೆಗೆ ರೈತರಿಂದ ಜೋಡೆತ್ತಿನ ಬಂಡಿಗಳ ರ್ಯಾಲಿ
    In (ರಾಜ್ಯ ) ಜಿಲ್ಲೆ
  • ನಕಲಿ ವೈದ್ಯರ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ!
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ
    In (ರಾಜ್ಯ ) ಜಿಲ್ಲೆ
  • ಅ.೨ರಂದು ಭೂಮಾಪಕರ ನೇಮಕಾತಿ ಪರೀಕ್ಷೆ :ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ಕತನಕಹಳ್ಳಿಯಲ್ಲಿ ಸಮುದಾಯ ಮಧ್ಯಸ್ಥಿಕೆ ಅರಿವು
    In (ರಾಜ್ಯ ) ಜಿಲ್ಲೆ
  • ಮಧ್ಯಸ್ಥಿಕೆಯ ಅಭಿಯಾನ ೩.೦: ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಭೀಮ್ ಆರ್ಮಿ ಭಾರತ್ ಮಿಷನ್‌ಗೆ ನೂತನ ಸದಸ್ಯರ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ವಚನ ದೀಪವಾಗಿ ಬೆಳಗಿದ ಡಾ.ಹಳಕಟ್ಟಿ :ಡಾ.ಮಹಾಂತೇಶ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ರಸ್ತೆ ಸುರಕ್ಷತೆ ಕ್ರಮಗಳಿಗೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.