ಉದಯರಶ್ಮಿ ದಿನಪತ್ರಿಕೆ
ಇಂಡಿ: ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಇಂಡಿ ತಾಲೂಕು ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ಇಂಗಳೆ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಇಂಡಿ ತಾಲೂಕಿನ ವ್ಯಾಪ್ತಿಯ ನಾಡ ಕೆ.ಡಿ. ಗ್ರಾಮ ಹಾಗೂ ಲಾಳಸಂಗಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ನಕಲಿ ವೈದ್ಯರೊಬ್ಬರು ನಡೆಸುತ್ತಿದ್ದ ಕ್ಲಿನಿಕ್ ಮೇಲೆ ದಾಳಿ ನಡೆಸಿ, ಕ್ಲಿನಿಕ್ ಬಂದ್ ಮಾಡಿಸಿ ನೋಟಿಸ್ ನೀಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕಾರ್ಯಾಚರಣೆ ವೇಳೆ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

