ಉದಯರಶ್ಮಿ ದಿನಪತ್ರಿಕೆ
ಇಂಡಿ: ತಾಲೂಕಿನ ಲಚ್ಯಾಣ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜಿಲ್ಲಾಮಟ್ಟದಲ್ಲಿ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ ಲಚ್ಯಾಣ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಹಾಗೂ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಿ ಗಮನ ಸೆಳೆದರು. ಉತ್ತಮ ಪ್ರದರ್ಶನದ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿರುವುದು ಶಾಲೆ ಹಾಗೂ ಲಚ್ಯಾಣ ಗ್ರಾಮದ ಹೆಮ್ಮೆಯ ಸಂಗತಿಯಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆಯ ಕೀರ್ತಿಯನ್ನು ಹೆಚ್ಚಿಸುವಂತೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಕ್ರೀಡಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲು ಪ್ರೋತ್ಸಾಹಿಸಿದರು.

