ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಒಗ್ಗಟ್ಟು, ಸಹಕಾರ, ಸೌಹಾರ್ದತೆ ಹಾಗೂ ಸಹೋದರತ್ವದ ಮನೋಭಾವ ಬೆಳೆಸುವಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಬಿ.ಎಲ್.ಡಿ.ಇ ಫಾರ್ಮಸಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶಿವಕುಮಾರ ಹೇಳಿದರು.
ನಗರದ ಬಿ.ಎಲ್.ಡಿ.ಇ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ)ದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ ಪ್ರಾಚಾರ್ಯ ಪ್ರೊ. ಕೆ.ಜೆ. ಜೀರಗಾಳಿ ಮಾತನಾಡಿ, ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು, ಸಮಯಪ್ರಜ್ಞೆ ಹಾಗೂ ಸಾಮಾಜಿಕ ಹೊಣೆಗಾರಿಕೆ ಬೆಳೆಸಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ರೊ. ಎಲ್.ಎಂ. ಮಾರ್ಕಪನಳ್ಳಿ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಪ್ರೊ. ಪ್ರೇಮಾನಂದ ಹಿರೇಮಠ, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಮಹದೇವ ಗಲಬಿ, ಗ್ರಂಥಪಾಲಕ ಪ್ರೊ. ವೈ.ಎಸ್. ಕೋರಿ ಹಾಗೂ ಪ್ರೊ. ಲಕ್ಷ್ಮೀ ಧರ್ಮಟ್ಟಿ ಉಪಸ್ಥಿತರಿದ್ದರು.
ಪ್ರಶಿಕ್ಷಣಾರ್ಥಿ ರಾಧಿಕಾ ಬಿರಾದರ ಪ್ರಾರ್ಥಿಸಿದರು. ಪ್ರೀತಿ ರಾಮದುರ್ಗ ಸ್ವಾಗತಿಸಿದರು. ಪವನ ಸದಲಗಿ, ವೈಶಾಲಿ ವಾರೆ ಹಾಗೂ ಕಾವ್ಯ ಮುಧೋಳ ವಂದನಾರ್ಪಣೆ ಸಲ್ಲಿಸಿದರು.

