ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವಿವಿಧ ಪದಾಧಿಕಾರಿಗಳನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸೂಚನೆ ಮೇರೆಗೆ ನೇಮಕ ಮಾಡಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಘಟಕದ ನೂತನ ಉಪಾಧ್ಯಕ್ಷರಾಗಿ ಪ್ರಭುಗೌಡ ಬಿರಾದಾರ ಅಸ್ಕಿ, ಎಸ್.ಎ. ಪಾಟೀಲ, ಶಿಲ್ಪಾ ಕುದರಗೊಂಡ, ಭೀಮಾಶಂಕರ ಬಿರಾದಾರ, ಬಸವರಾಜ್ ಬಿರಾದಾರ್ ಶಂಕರಗೌಡ ಪಾಟೀಲ, ಪರಶುರಾಮಸಿಂಗ್ ರಜಪೂತ, ಜಿಲ್ಲಾ ಕಾರ್ಯದರ್ಶಿಗಳಾಗಿ ಕೃಷ್ಣಾ ಗುನ್ನಾಳಕರ, ರಾಜೇಶ ತಾವಸೆ, ರಮೇಶ ಬಿದನೂರ, ಮಲ್ಲಿಕಾರ್ಜುನ ಕಿವಡೆ, ಶರಣು ಮಾತಾಳಿ, ರಾಜಶೇಖರ ಡೊಳ್ಳಿ, ಉಮೇಶ ವಂದಾಲ ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಕೋಶಾಧ್ಯಕ್ಷರಾಗಿ ಭೀಮಾಶಂಕರ ಹದನೂರ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಯಾಗಿ ಶರಣಬಸಪ್ಪ ಕುಂಬಾರ ಹಾಗೂ ಜಿಲ್ಲಾ ಮಾಧ್ಯಮ ಪ್ರಮುಖರಾಗಿ ವಿಜಯ ಜೋಶಿ ಅವರನ್ನು ನೇಮಕ ಮಾಡಲಾಗಿದೆ ಎಂದು ಮಾಧ್ಯಮ ಪ್ರಮುಖ ವಿಜಯ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
