ಚಡಚಣ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಹಮ್ಮಿಕೊಳ್ಳಲಾದ ಕರ್ನಾಟಕ ಸುವರ್ಣ ಸಿರಿ ರಾಜ್ಯ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಉಮರಜ ಗ್ರಾಮದವರಾದ ಶಿಕ್ಷಕ ಸಾಹಿತಿ ಶ್ರೀಪ್ರಮೋದಕುಮಾರ ಮಠಪತಿ ಭಾಜನರಾಗಿದ್ದಾರೆ.
ಶ್ರೀಯುತರ ಶೈಕ್ಷಣಿಕ ಮತ್ತು ಕನ್ನಡ ನಾಡು, ನುಡಿಗಾಗಿನ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸುವರ್ಣ ಸಿರಿ ರಾಜ್ಯ ಪ್ರಶಸ್ತಿಗೆ ಆಯ್ಕೆಮಾಡಿ ಅಭಿನಂದಿಸಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಮುಖ್ಯಸ್ಥರಾದ ಸಾಲಿ ಗ್ರಾಮಶೆಣೈರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಮೋದಕುಮಾರ ಮಠಪತಿ ಇವರು ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಮಾಚಹಳ್ಳಿ ಶಾಲೆಯಲ್ಲಿ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

