ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2026-27ನೇ ಸಾಲಿನ 14 ಫಲಾನುಭವಿ ಆಧಾರಿತ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಾಧಾರಣ ಸಾಧನೆ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ, ಸಾಧನ ಸಲಕರಣೆ, ಪ್ರತಿಭೆ, ಟಾಕಿಂಗ್ ಲ್ಯಾಪ್‌ಟಾಪ್, ಬೈಲ್ ಕಿಟ್, ಯಂತ್ರಚಾಲಿತ ದ್ವಿಚಕ್ರ ವಾಹನ, ಹೊಲಿಗೆ ಯಂತ್ರ, ಮರಣ ಪರಿಹಾರ ನಿಧಿ ಹಾಗೂ ವೀಲ್‌ಚೇರ್ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹರು ಅ.30,ರೊಳಗೆ https://sevaone.karnataka.gov.in ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದವರು ಸಹ ಮತ್ತೊಮ್ಮೆ ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಗೆ ಅಡಕಗೊಳಿಸಿರುವ ಅಗತ್ಯ ದಾಖಲೆಗಳನ್ನು ಸಂಬಂಧಪಟ್ಟ ತಾಲೂಕು ಪಂಚಾಯಿತಿಯ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಸಂಯೋಜಕಿ ಪ್ರತಿಭಾ ಮೊ:9606151149, ವಿಜಯಪುರ ತಾಲೂಕು ಪಂಚಾಯಿತಿಯ ರವಿ ರಾಠೋಡ ಮೊ:9035553337, ಇಂಡಿ ಪರಶುರಾಮ ಭೋಸಲೆ ಮೊ:9972441464, ಸಿಂದಗಿ ತಾಲೂಕು ಪಂಚಾಯಿತಿಯ ಮುತ್ತುರಾಜ ಸಾತಿಹಾಳ ಮೊ: 9980019635, ಮುದ್ದೇಬಿಹಾಳ ತಾಲೂಕು ಪಂಚಾಯಿತಿಯ ಎಸ್.ಕೆ. ಘಾಟಿ ಮೊ:9740682979 ಹಾಗೂ ಬಸವನ ಬಾಗೇವಾಡಿ ತಾಲೂಕು ಪಂಚಾಯಿತಿಯ ಶೀವಲೀಲಾ ಬಿರಾದಾರ/ಮೊ:8722135660 ಅವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
