Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಕ್ರೀಢೆಗಳನ್ನು ಉಳಿಸಿ ಬೆಳೆಸಬೇಕಿದೆ :ಶಾಸಕ ಸವದಿ

ಮಿಣಜಗಿ ಗ್ರಾಮದೆಡೆಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಮನವಿ

ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಸಂಕಲ್ಪ ;ಸುರೇಶ ಶೇಡಶ್ಯಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೩೭೧ಜೆ ವ್ಯಾಪ್ತಿಗೆ ಸೇರ್ಪಡೆಗೊಳಿಸಲು ಪ್ರಾಮಾಣಿಕ ಪ್ರಯತ್ನ
(ರಾಜ್ಯ ) ಜಿಲ್ಲೆ

೩೭೧ಜೆ ವ್ಯಾಪ್ತಿಗೆ ಸೇರ್ಪಡೆಗೊಳಿಸಲು ಪ್ರಾಮಾಣಿಕ ಪ್ರಯತ್ನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲೆಯನ್ನು ೩೭೧ಜೆ ಸ್ಥಾನಮಾನಕ್ಕೆ ಸೇರ್ಪಡೆಗೊಳಿಸಲು ಸಿಂದಗಿಯಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ | ಸಂಸದ ಜಿಗಜಿಣಗಿ ಭರವಸೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವಿಜಯಪುರ ಜಿಲ್ಲೆಯನ್ನು ೩೭೧ಜೆ ವಿಶೇಷ ಸ್ಥಾನಮಾನಕ್ಕೆ ಸೇರ್ಪಡೆಗೊಳಿಸಬೇಕೆಂಬ ಆಗ್ರಹದೊಂದಿಗೆ ಸಿಂದಗಿ ನಗರದ ಬಸವೇಶ್ವರ ವೃತ್ತದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟು, ಧರಣಿ ಸತ್ಯಾಗ್ರಹ ಮುಂದುವರಿಸುವಂತೆ ಸಂಸದ ರಮೇಶ ಜಿಗಜಿಣಗಿ ಮನವಿ ಮಾಡಿದರು.
ಸಿಂದಗಿ ಬಸವೇಶ್ವರ ವೃತ್ತದಲ್ಲಿ ಗೋಕಾಕ ಚಳುವಳಿಯ ರೂವಾರಿ ಶ್ರೀ ರೇಚ ರೇವಡಿಗಾರ ಪ್ರತಿಷ್ಠಾನ ಹಾಗೂ ಸಿಂದಗಿ ೩೭೧ಜೆ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಅವರು, ಹೋರಾಟಗಾರರೊಂದಿಗೆ ಮಾತನಾಡಿ, ವಿಜಯಪುರ ಜಿಲ್ಲೆಯನ್ನು ೩೭೧ಜೆ ವ್ಯಾಪ್ತಿಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಕೆಲವು ವರ್ಷಗಳ ಹಿಂದೆ ಹೈದರಾಬಾದ್ ಕರ್ನಾಟಕ ಭಾಗಕ್ಕೆ ೩೭೧ಜೆ ಸೌಲಭ್ಯ ಕಲ್ಪಿಸುವಂತೆ ನಡೆದ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸೌಲಭ್ಯ ದೊರೆತಿದೆ. ಆದರೆ ವಿಜಯಪುರ ಜಿಲ್ಲೆಯನ್ನು ಅದರಿಂದ ಹೊರಗಿಟ್ಟಿರುವುದು ದುರಂತ. ಈ ಭಾಗಕ್ಕೂ ಸೌಲಭ್ಯ ದೊರೆಯಬೇಕೆಂಬ ಬೇಡಿಕೆ ನ್ಯಾಯಯುತವಾಗಿದೆ ಎಂದು ಅವರು ಹೇಳಿದರು.
ವಿಜಯಪುರ ಜಿಲ್ಲೆಯ ಎಲ್ಲ ಶಾಸಕರು ಹಾಗೂ ಸಚಿವರ ಮೂಲಕ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಸಮಗ್ರ ಪ್ರಸ್ತಾವನೆ ಸಲ್ಲಿಸುವಂತೆ ಕ್ರಮ ಕೈಗೊಳ್ಳಬೇಕು. ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ರಾಜ್ಯ ಸರ್ಕಾರದ ಮೂಲಕ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ, ಸಂಸತ್ತಿನಲ್ಲಿ ಈ ಕುರಿತು ಚರ್ಚಿಸಿ ವಿಜಯಪುರ ಜಿಲ್ಲೆಯನ್ನು ೩೭೧ಜೆ ವ್ಯಾಪ್ತಿಗೆ ಸೇರ್ಪಡೆಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಹೋರಾಟದ ರೂವಾರಿ ಹಾಗೂ ಪ್ರತಿಷ್ಠಾನದ ಸಂಚಾಲಕ ರಂಘನಾಥ ತೋರ್ಫೆ ಮಾತನಾಡಿ, ಡಾ. ಡಿ.ಎಂ. ನಂಜುಂಡಪ್ಪ ವರದಿಯಲ್ಲಿ ಇಂಡಿ, ಸಿಂದಗಿ, ತಾಳಿಕೋಟಿ, ಮುದ್ದೇಬಿಹಾಳ ಹಾಗೂ ಬಸವನಬಾಗೇವಾಡಿ ಸೇರಿದಂತೆ ಈ ಭಾಗದ ತಾಲೂಕುಗಳು ಹಿಂದುಳಿದಿರುವ ಕುರಿತು ದಾಖಲೆಗಳಿವೆ. ರಜಾಕರ ಹಾವಳಿಯಿಂದ ಈ ಭಾಗದ ಜನರು ಮನೆ-ಮಠ ಕಳೆದುಕೊಂಡು ಸಂಕಷ್ಟ ಅನುಭವಿಸಿದ್ದರೆ, ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಐತಿಹಾಸಿಕ ಹಾಗೂ ಹಿಂದುಳಿದ ಪರಿಸ್ಥಿತಿಯ ಆಧಾರದ ಮೇಲೆ ವಿಜಯಪುರ ಜಿಲ್ಲೆಗೂ ೩೭೧ಜೆ ಸೌಲಭ್ಯ ಕಲ್ಪಿಸಬೇಕಾಗಿದೆ ಎಂದು ಒತ್ತಾಯಿಸಿದರು.
ಈ ವೇಳೆ ಮಾಜಿ ವಿಪ ಸದಸ್ಯ ಅರುಣ ಶಹಾಪುರ ಮಾತನಾಡಿ, ಹೈದರಾಬಾದ್ ಕರ್ನಾಟಕ ೩೭೧ಜೆ ಹೋರಾಟದ ಸಂದರ್ಭದಲ್ಲಿ ಜನಪ್ರತಿನಿಧಿಗಳು ಹಾಗೂ ಈ ಭಾಗದ ಜನರ ಇಚ್ಛಾಶಕ್ತಿಯ ಕೊರತೆಯಿಂದ ವಿಜಯಪುರ ಜಿಲ್ಲೆಗೆ ಸೌಲಭ್ಯ ದೊರೆಯಲಿಲ್ಲ. ಆದರೆ ಬ್ರಿಟಿಷರ ವರದಿ ಹಾಗೂ ಡಾ. ನಂಜುಂಡಪ್ಪ ವರದಿಯಲ್ಲಿ ಈ ಭಾಗ ಹಿಂದುಳಿದಿರುವುದಕ್ಕೆ ದಾಖಲೆಗಳಿವೆ. ರಾಜ್ಯ ಸರ್ಕಾರವು ಈ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿದಾಗ ಮಾತ್ರ ಹೋರಾಟಕ್ಕೆ ನ್ಯಾಯ ಸಿಗಲಿದೆ ಎಂದರು. ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಯಂಕಂಚಿ ಕುಂಟೋಜಿ ಹಿರೇಮಠದ ರುದ್ರಮುನಿ ಶಿವಾಚಾರ್ಯರು, ಮಾಜಿ ಶಾಸಕ ರಮೇಶ ಭೂಸನೂರ, ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಸುರೇಶಗೌಡ ಬಿರಾದಾರ, ನ್ಯಾಯವಾದಿ ದಾನಪ್ಪಗೌಡ ಚನ್ನಗೊಂಡ, ರೈತ ಸಂಘದ ಮುಖಂಡ ಸಿದ್ರಾಮ ರಂಜುಣಗಿ, ರವಿಗೌಡ ಪೀರಶೆಟ್ಟಿ, ಗುರುರಾಜ ಪಡಶೆಟ್ಟಿ, ಈರಣ್ಣಗೌಡ ಬಿರಾದಾರ, ಎಂ.ಎಂ.ಹಂಗರಗಿ, ಶಿವಾನಂದ ಕಲಬುರ್ಗಿ ಮಾತನಾಡಿದರು.
ಸಿದ್ದರಾಮ ಪಾಟೀಲ, ಅಶೋಕ ವಾರದ, ಸಾಯಬಣ್ಣ ದೇವರಮನಿ, ಸಂಗಣ್ಣ ಬ್ಯಾಕೋಡ, ಶೈಲಜಾ ಸ್ಥಾವರಮಠ, ಶಾಮಲಾ ಮಂದೇವಾಲಿ, ಆನಂದ ಶಾಬಾದಿ, ಪಂಡಿತ ಯಂಪೂರೆ, ಸಿದ್ದು ಕಡಗಂಚಿ ಸೇರಿದಂತೆ ಅನೇಕ ನಾಗರಿಕರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಕ್ರೀಢೆಗಳನ್ನು ಉಳಿಸಿ ಬೆಳೆಸಬೇಕಿದೆ :ಶಾಸಕ ಸವದಿ

ಮಿಣಜಗಿ ಗ್ರಾಮದೆಡೆಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಮನವಿ

ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಸಂಕಲ್ಪ ;ಸುರೇಶ ಶೇಡಶ್ಯಾಳ

ಶಾಸಕರ ಭರವಸೆ: ರೈತರ ಅಮರಣ ಉಪವಾಸ ಅಂತ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಕ್ರೀಢೆಗಳನ್ನು ಉಳಿಸಿ ಬೆಳೆಸಬೇಕಿದೆ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
  • ಮಿಣಜಗಿ ಗ್ರಾಮದೆಡೆಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಸಂಕಲ್ಪ ;ಸುರೇಶ ಶೇಡಶ್ಯಾಳ
    In (ರಾಜ್ಯ ) ಜಿಲ್ಲೆ
  • ಶಾಸಕರ ಭರವಸೆ: ರೈತರ ಅಮರಣ ಉಪವಾಸ ಅಂತ್ಯ
    In (ರಾಜ್ಯ ) ಜಿಲ್ಲೆ
  • ಅ.೭ರಂದು ವಿಜಯಪುರಕ್ಕೆ ಎನ್‌ಪಿಎಸ್ ಸಂಚಯ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಪೂರ್ವಭಾವಿ ಸಭೆ: ಕನ್ನಡಹಬ್ಬ ಅದ್ದೂರಿ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನಿರಂತರ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ೩೭೧ಜೆ ವ್ಯಾಪ್ತಿಗೆ ಸೇರ್ಪಡೆಗೊಳಿಸಲು ಪ್ರಾಮಾಣಿಕ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ಬಯಲಾಟವನ್ನು ನಾಡಕಲೆಯಾಗಿ ಘೋಷಿಸಿ :ಮೇತ್ರಿ
    In (ರಾಜ್ಯ ) ಜಿಲ್ಲೆ
  • ದೆಹಲಿಯಲ್ಲಿ ಪತ್ರಕರ್ತರ ಮೇಲೆ ಹಲ್ಲೆಗೆ ಕೆಯುಡಬ್ಲ್ಯೂಜೆ ಖಂಡನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.