ಚಡಚಣ: ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸುವ, ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಗೀತೆ, ಕವನಗಳನ್ನು ನಾಡಿನ ಹೆಮ್ಮೆಯ ಕವಿಗಳು ರಚಿಸಿದ್ದು, ಇವುಗಳ ಕೇಳುವಿಕೆಯು ನಮ್ಮಲ್ಲಿ ಅಭಿಮಾನವನ್ನು ಮೂಡಿಸುತ್ತದೆ. ಕನ್ನಡ ನಾಡು-ನುಡಿಯ ಶ್ರೇಷ್ಠತೆಯನ್ನು ಸಾರುವುದೇ ಕನ್ನಡ ರಾಜ್ಯೋತ್ಸವವಾಗಿದೆ ಎಂದು ರೇವತಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಗುರು ಆರ್.ಎಚ್.ನದಾಫ್ ಹೇಳಿದರು.
ಗುರುವಾರದಂದು ರೇವತಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದಿನ ಜಗತ್ತಿನ ಅಭಿವೃದ್ಧಿಗಾಗಿ ನಾಡು, ನುಡಿ, ಸಂಸ್ಕೃತಿ ಮರೆತು ಮೂಢರಾದೇ ನಮ್ಮತನದ ಅಭಿಮಾನವನ್ನು ತನು-ಮನದಲ್ಲಿ ಮೆರೆಯಲೇಬೇಕಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ರಾಷ್ಟçಕವಿ ಕುವೆಂಪು ವಿರಚಿತ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ”, ಹುಯಿಲಗೊಳ ನಾರಾಯಣರಾವ್ ವಿರಚಿತ “ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು”, ಸಾಹಿತಿ ಚನ್ನವೀರ ಕಣವಿಯವರ ವಿರಚಿತ “ಹೆಸರಾಯಿತು ಕರ್ನಾಟಕ”, ಸಿದ್ಧಯ್ಯ ಪುರಾಣಿಕ ವಿರಚಿತ “ ಹೊತ್ತಿತೋ ಹೊತ್ತಿತೋ ಕನ್ನಡದ ದೀಪ” ಹಾಗೂ ದ.ರಾ.ಭೇಂದ್ರೆಯವರ ವಿರಚಿತ “ಒಂದೇ ಒಂದೇ ಒಂದೇ ಕರ್ನಾಟಕ ಒಂದೇ” ಎಂಬ ಗೀತೆಗಳನ್ನು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಡಿದರು. ಹಲವು ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು.
ಭುವನೇಶ್ವರಿ ದೇವಿಯ ಭಾವಚಿತ್ರ ಪೂಜೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ಎಂ.ಡಿ.ಹಕ್ಕೆ, ರಮೇಶ ಮೇತ್ರೆ, ಸವರಾಜ ಕುಂಬಾರ, ಅಶೋಕ ಶೇಠೆ ಹಾಗೂ ಗಂಗಾರಾಮ ಶೇಠೆಯವರು ನೆರವೇರಿಸಿದರು.
ಈ ವೇಳೆ ಎಸ್‌ಡಿಎಂಸಿ ಅಧ್ಯಕ್ಷರಾದ ಎಂ.ಡಿ.ಹಕ್ಕೆಯವರು ಶಾಲಾ ವಿದ್ಯಾರ್ಥಿಗಳಿಗೆ ಈ ಶೈಕ್ಷಣಿಕ ವರ್ಷಕ್ಕೆ ಬೇಕಾಗುವಷ್ಟು ಬೂಸ್ಟ್ನ್ನು ಫ್ರೀಯಾಗಿ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ಸಿಬ್ಬಂದಿ ವರ್ಗ, ಎಸ್‌ಡಿಎಂಸಿ ಸದಸ್ಯರುಗಳು ಸೇರಿದಂತೆ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Related Posts
Add A Comment