ಎನ್‌ಪಿಎಸ್ ಹಾಗೂ ಪಿಂಚಣಿ ಯೋಜನೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅಭಿಯಾನ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ‘ಎನ್‌ಪಿಎಸ್ ದಿವಸ್ ೨೦೨೬’ ಅಭಿಯಾನದ ಅಂಗವಾಗಿ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಹಾಗೂ ಆರ್ಥಿಕವಾಗಿ ಸುರಕ್ಷಿತ ಭವಿಷ್ಯಕ್ಕಾಗಿ ಪಿಂಚಣಿ ಯೋಜನೆಯ ಮಹತ್ವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ಎನ್‌ಪಿಎಸ್ ಸಂಚಯ ಯಾತ್ರೆ’ ಅಕ್ಟೋಬರ್ ೭ರಂದು ಜಿಲ್ಲೆಗೆ ಆಗಮಿಸಲಿದೆ. ದೇಶಾದ್ಯಂತ ಪಿಂಚಣಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೇಂದ್ರ ಹಣಕಾಸು ಸಚಿವರು ಈಗಾಗಲೇ ನವದೆಹಲಿಯಲ್ಲಿ ‘ಎನ್‌ಪಿಎಸ್ ಸಂಚಯಯಾತ್ರೆ’ಗೆಎ ಚಾಲನೆ ನೀಡಿದ್ದಾರೆ. ಕರ್ನಾಟಕದಲ್ಲಿ ಅಕ್ಟೋಬರ್ ೧ರಿಂದ ೧೫ರವರೆಗೆ ವಿವಿಧ ನಗರಗಳು ಹಾಗೂ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದೆ.
ಜಿಲ್ಲೆಗೆ ಆಗಮಿಸುವ ಸಂದರ್ಭದಲ್ಲಿ ತರಬೇತಿ ಪಡೆದ ಪ್ರತಿನಿಧಿಗಳು ‘ಎನ್‌ಪಿಎಸ್ ಸಂಚಯ’ದ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಿದ್ದಾರೆ. ಅಲ್ಲದೆ, ಎನ್‌ಪಿಎಸ್ ಖಾತೆ ತೆರೆಯುವಿಕೆ, ಕೊಡುಗೆ ಸಲ್ಲಿಕೆ ಸೇರಿದಂತೆ ವಿವಿಧ ಪ್ರಕ್ರಿಯೆಗಳ ಕುರಿತು ಮಾರ್ಗದರ್ಶನ ನೀಡುವುದರ ಜೊತೆಗೆ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಪಿಂಚಣಿ ಯೋಜನೆಗೆ ಸಂಬAಧಿಸಿದ ಮಾಹಿತಿಯುಳ್ಳ ಕರಪತ್ರಗಳಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ, ಸಾರ್ವಜನಿಕರಿಗೆ ಅಗತ್ಯ ನೆರವು ನೀಡಲು ಕೆನರಾ ಬ್ಯಾಂಕ್‌ನ ಲೀಡ್ ಬ್ಯಾಂಕ್ ಹಾಗೂ ಇತರ ಬ್ಯಾಂಕ್‌ಗಳ ಅಧಿಕಾರಿಗಳು ಸಹ ಉಪಸ್ಥಿತರಿರಲಿದ್ದಾರೆ. ವಿಜಯಪುರ ನಗರ ಹಾಗೂ ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ ವೈಶಿಷ್ಟ್ಯಗಳು ಹಾಗೂ ಪ್ರಯೋಜನಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು. ಭವಿಷ್ಯದ ಆರ್ಥಿಕ ಭದ್ರತೆಗಾಗಿ ಸೂಕ್ತ ಪಿಂಚಣಿ ಯೋಜನೆ ರೂಪಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ ೯೪೪೯೮೬೦೭೩೩ ಸಂಪರ್ಕಿಸುವಂತೆ
ಜಿಲ್ಲಾಅಗ್ರಣೀಯ ಬ್ಯಾಕಿನ ವ್ಯವಸ್ಥಾಪಕರಾದ ಸಿದ್ದಯ್ಯ ಬಿ. ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
