ಉದಯರಶ್ಮಿ ದಿನಪತ್ರಿಕೆ
ಬೀಳಗಿ: ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಸ್ಪರ್ಧೆಗಳು ತಾಲೂಕಿನ ಗರಡದಿನ್ನಿ ಕ್ರೀಡಾಂಗಣದಲ್ಲಿ ಏರ್ಪಡಿಸಿಲಾಗಿತ್ತು.
ತಾಲೂಕಿನ ಮುಂಡಗನೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಥ್ರೋಬಾಲ್ ಸ್ಪರ್ಧೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ವಿಜೇತ ವಿದ್ಯಾರ್ಥಿಗಳಿಗೆ ಶಿಕ್ಷಕರು , ಎಸ್ ಡಿ ಎಂ ಸಿ ಯವರು ಮತ್ತು ಗ್ರಾಮಸ್ಥರು ಅಭಿನಂದನೆ ತಿಳಿಸಿದ್ದಾರೆ ಎಂದು ಮುಖ್ಯೋಪಾಧ್ಯಾಯ ಬಿ ಎಸ್ ಪಾಟೀಲ ತಿಳಿಸಿದ್ದಾರೆ.

