ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಉಪಮುಖ್ಯಮಂತ್ರಿ ಡಾ.
ಜಿ. ಪರಮೇಶ್ವರ ಅವರು ಅ.8 ಹಾಗೂ 9ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅ.8ರಂದು ಸಂಜೆ 7 ಗಂಟೆಗೆ ರಾಯಚೂರಿನ ಹಟ್ಟಿಯಿಂದ ಹೊರಟು, ರಾತ್ರಿ 10ಗಂಟೆಗೆ ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಅ.9ರಂದು ಬೆಳಿಗ್ಗೆ 8 ಗಂಟೆಯಿಂದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ನಂತರ ಮಧ್ಯಾಹ್ನ 3.30ಕ್ಕೆ ವಿಜಯಪುರದಿಂದ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳಲಿರುವ ಅವರು, ರಾತ್ರಿ 8.25ರ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
