Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೇವಾ ಸಂಕಲ್ಪ ಅಭಿಯಾನ & ವಿಕಸಿತ ಭಾರತ ಸಂಕಲ್ಪ ಸಭೆ ಯಶಸ್ವಿ

ಆಳದ ಆಲೋಚನೆ – ಸರಳ ಸಂವಹನ

ಕಬ್ಬಿಗೆ ದರ ಪ್ರಕಟಿಸದೇ ಕಬ್ಬು ಅರೆಯುವಂತಿಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೂ.೮,೭೮೦ ಬೆಂಬಲ ಬೆಲೆಗೆ ಹೆಸರುಕಾಳು ಖರೀದಿ
(ರಾಜ್ಯ ) ಜಿಲ್ಲೆ

ರೂ.೮,೭೮೦ ಬೆಂಬಲ ಬೆಲೆಗೆ ಹೆಸರುಕಾಳು ಖರೀದಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೈತರ ನೋಂದಣಿಗೆ ೮೦ ದಿನ; ಖರೀದಿಗೆ ೯೦ ದಿನಗಳ ಕಾಲಾವಕಾಶ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬ನೇ ಸಾಲಿನ ಮುಂಗಾರು ಹಂಗಾಮಿನ ಎಫ್‌ಎಕ್ಯೂ ಗುಣಮಟ್ಟದ ಹೆಸರುಕಾಳನ್ನು ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ ₹೮,೭೮೦ರ ಬೆಂಬಲ ಬೆಲೆಯಲ್ಲಿ ಖರೀದಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ ೫ರಂದು ನಡೆದ ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಹೆಸರುಕಾಳು ಪ್ರತಿ ಕ್ವಿಂಟಾಲ್‌ಗೆ ₹೭,೫೦೦ರಿಂದ ₹೮,೦೦೦ರ ವರೆಗೆ ಮಾರಾಟವಾಗುತ್ತಿದ್ದು, ರೈತರು ಬೆಂಬಲ ಬೆಲೆ ಯೋಜನೆಯ ಸೌಲಭ್ಯ ಪಡೆದುಕೊಳ್ಳುವಂತೆ ಜಿಲ್ಲಾಡಳಿತ ತಿಳಿಸಿದೆ.
ಯೋಜನೆಯಡಿ ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ ೪ ಕ್ವಿಂಟಾಲ್ ಹಾಗೂ ಒಬ್ಬ ರೈತನಿಂದ ಗರಿಷ್ಠ ೨೦ ಕ್ವಿಂಟಾಲ್ ಹೆಸರುಕಾಳನ್ನು ಖರೀದಿಸಲಾಗುವುದು. ರೈತರ ಅನುಕೂಲಕ್ಕಾಗಿ ವಿಜಯಪುರ, ಬಸವನಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ, ಇಂಡಿ, ಚಡಚಣ ಹಾಗೂ ಬಬಲೇಶ್ವರ ತಾಲೂಕುಗಳಲ್ಲಿನ ಟಿಎಪಿಸಿಎಂಎಸ್ ಸಂಸ್ಥೆಗಳು ಮತ್ತು ಬಬಲೇಶ್ವರ ತಾಲೂಕಿನ ಪಿಕೆಪಿಎಸ್‌ನಲ್ಲಿ ಖರೀದಿ ಕೇಂದ್ರಗಳನ್ನು ಗುರುತಿಸಲಾಗಿದೆ.
ರೈತರ ನೋಂದಣಿ ಪ್ರಕ್ರಿಯೆಗೆ ೮೦ ದಿನಗಳು ಹಾಗೂ ಹೆಸರುಕಾಳು ಖರೀದಿ ಪ್ರಕ್ರಿಯೆಗೆ ೯೦ ದಿನಗಳ ಕಾಲಾವಕಾಶ ನಿಗದಿಪಡಿಸಲಾಗಿದೆ. ಖರೀದಿಸಿದ ಹೆಸರುಕಾಳಿನ ಮೊತ್ತವನ್ನು ರೈತರ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಮೂರು ದಿನಗಳೊಳಗಾಗಿ ನೇರವಾಗಿ ಜಮೆ ಮಾಡಲಾಗುವುದು. ಖರೀದಿ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ಆಯಾ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಕಾರ್ಯದರ್ಶಿಗಳನ್ನು ತಾಲೂಕು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಹೆಸರುಕಾಳು ಖರೀದಿ ಹಾಗೂ ನೋಂದಣಿ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಎಸ್‌ಸಿಎಂಎಫ್ ಶಾಖಾ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ ೮೭೨೨೬೮೭೧೪೩ ಅನ್ನು ಸಂಪರ್ಕಿಸಬಹುದು ಎಂದು ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೇವಾ ಸಂಕಲ್ಪ ಅಭಿಯಾನ & ವಿಕಸಿತ ಭಾರತ ಸಂಕಲ್ಪ ಸಭೆ ಯಶಸ್ವಿ

ಆಳದ ಆಲೋಚನೆ – ಸರಳ ಸಂವಹನ

ಕಬ್ಬಿಗೆ ದರ ಪ್ರಕಟಿಸದೇ ಕಬ್ಬು ಅರೆಯುವಂತಿಲ್ಲ

ಅಂಗನವಾಡಿ-ಕಂ-ಕ್ರಷ್ ಕೇಂದ್ರಗಳ ನೇಮಕಾತಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೇವಾ ಸಂಕಲ್ಪ ಅಭಿಯಾನ & ವಿಕಸಿತ ಭಾರತ ಸಂಕಲ್ಪ ಸಭೆ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಳದ ಆಲೋಚನೆ – ಸರಳ ಸಂವಹನ
    In ವಿಶೇಷ ಲೇಖನ
  • ಕಬ್ಬಿಗೆ ದರ ಪ್ರಕಟಿಸದೇ ಕಬ್ಬು ಅರೆಯುವಂತಿಲ್ಲ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ-ಕಂ-ಕ್ರಷ್ ಕೇಂದ್ರಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೆಜೆಎಂ ಕಾಮಗಾರಿ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಉನ್ನತ ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಿ :ಆದಿತ್ಯಗೌಡ
    In (ರಾಜ್ಯ ) ಜಿಲ್ಲೆ
  • ಪ್ರತಿ ಕ್ವಿಂಟಾಲ್‌ಗೆ ₹೮,೩೪೩ ಬೆಂಬಲ ಬೆಲೆಗೆ ಸೂರ್ಯಕಾಂತಿ ಖರೀದಿ
    In (ರಾಜ್ಯ ) ಜಿಲ್ಲೆ
  • ರೂ.೮,೭೮೦ ಬೆಂಬಲ ಬೆಲೆಗೆ ಹೆಸರುಕಾಳು ಖರೀದಿ
    In (ರಾಜ್ಯ ) ಜಿಲ್ಲೆ
  • ಡಿಸಿಎಂ ಡಾ. ಜಿ.ಪರಮೇಶ್ವರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.