ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಮಂಜೂರಾಗಿರುವ 10 ಅಂಗನವಾಡಿ-ಕಂ-ಕ್ರಷ್ ಕೇಂದ್ರಗಳಿಗೆ ಕ್ರಷ್ ಕಾರ್ಯಕರ್ತೆ ಹಾಗೂ ಕ್ರಷ್ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರದ ಆದೇಶದನ್ವಯ ಆಯ್ಕೆಯಾಗುವ ಕ್ರಷ್ ಕಾರ್ಯಕರ್ತೆಗೆ ಮಾಸಿಕ ರೂ.5,500 ಹಾಗೂ ಕ್ರಷ್ ಸಹಾಯಕಿಯರಿಗೆ ಮಾಸಿಕ ರೂ.3,000 ಗೌರವಧನ ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅ.23ರೊಳಗೆ ವಿಜಯಪುರ ಗ್ರಾಮೀಣಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಇರಿಸಲಾಗಿರುವ ಸೀಲ್ ಮಾಡಿದ ಪೆಟ್ಟಿಗೆಯಲ್ಲಿ ಖುದ್ದಾಗಿ ಸಲ್ಲಿಸಬೇಕು.
ನಿಗದಿತ ಅವಧಿಯ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿ ನಮೂನೆ ಹಾಗೂ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲ ಭವನದ ಹತ್ತಿರ, ಜಿಲ್ಲಾ ಪಂಚಾಯತ್ ರಸ್ತೆ, ಮನುಗೂಳಿ ರಸ್ತೆಯಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08352-276391 ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
