ಉದಯರಶ್ಮಿ ದಿನಪತ್ರಿಕೆ
ಇಂಡಿ: ತಾಲೂಕಿನ ಭೂಯ್ಯಾರ ಗ್ರಾಮದ ಶಿವಾನಂದ ಗಡ್ಡೆಪ್ಪ ಇರಗೊಂಡ ಅವರ ಸರ್ವೇ ನಂ. 214/1ರಲ್ಲಿರುವ ಸುಮಾರು 4 ಎಕರೆ ಕಬ್ಬು ಬೆಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಪೂರ್ಣ ಸುಟ್ಟುಹೋಗಿದೆ.
ಜಮೀನಿನ ಮೇಲ್ಭಾಗದಲ್ಲಿ ಹಾದುಹೋಗಿರುವ ವಿದ್ಯುತ್ ಮುಖ್ಯ ಮಾರ್ಗದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಬ್ಬಿನ ಗದ್ದೆಗೆ ವ್ಯಾಪಿಸಿದೆ. ಪರಿಣಾಮವಾಗಿ ಕಟಾವಿಗೆ ಬಂದಿದ್ದ ಕಬ್ಬು ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ರೈತನಿಗೆ ಭಾರಿ ಪ್ರಮಾಣದ ಆರ್ಥಿಕ ನಷ್ಟ ಸಂಭವಿಸಿದೆ.
ವಿದ್ಯುತ್ ಇಲಾಖೆಯ ನಿರ್ಲಕ್ಷ್ಯದಿಂದಲೇ ಘಟನೆ ಸಂಭವಿಸಿದೆ ಎಂದು ರೈತ ಶಿವಾನಂದ ಇರಗೊಂಡ ಆರೋಪಿಸಿದ್ದು, ಸ್ಥಳ ಪರಿಶೀಲನೆ ನಡೆಸಿ ಬೆಳೆ ನಷ್ಟ ಅಂದಾಜಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

