ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಇದೇ ಅಕ್ಟೋಬರ್.೨೬ ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ ೯ರಂದು ಮಧ್ಯಾಹ್ನ ೧೨ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಿದೆ.
ಜಿಲ್ಲೆಯ ಗಣ್ಯರು, ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
