Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ಕಾಲಮಿತಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ

ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳುವುದು ಜನರ ಜವಾಬ್ದಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳುವುದು ಜನರ ಜವಾಬ್ದಾರಿ
(ರಾಜ್ಯ ) ಜಿಲ್ಲೆ

ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳುವುದು ಜನರ ಜವಾಬ್ದಾರಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಥಣಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಸಹಕಾರ ಸಚಿವ ಲಕ್ಷ್ಮಣ ಸವದಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಅಥಣಿ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಹಕಾರ ಸಚಿವ ಹಾಗೂ ಶಾಸಕ ಲಕ್ಷ್ಮಣ ಸವದಿ ಭೂಮಿಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದರು.
ರೆಡ್ಡೇರಹಟ್ಟಿ ಗ್ರಾಮದ ಶ್ರೀ ಮಟ್ಟಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ₹50 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.
ಸತ್ತಿ ಗ್ರಾಮದ ವಾಸಪ್ಪನ ತೋಟ ಹಾಗೂ ಗಾಯಕ್ವಾಡ ತೋಟದಲ್ಲಿ ನಿರಂತರ ಜ್ಯೋತಿ ಯೋಜನೆ ಉದ್ಘಾಟನೆ, 0 ಪಾಯಿಂಟ್‌ನಿಂದ ನಂದಗಾಂವವರೆಗೆ 1.50 ಕಿ.ಮೀ. ರಸ್ತೆ ನಿರ್ಮಾಣ, ನಂದಗಾಂವ ಮುಖ್ಯ ರಸ್ತೆಯಿಂದ ಗೊರಕ ಹೊನಕಡಬಿ ಮನೆವರೆಗೆ ಸಿಸಿ ರಸ್ತೆ, ಶ್ರೀ ರಾಮದೇವ ಸಮುದಾಯ ಭವನ, ನಂದಗಾಂವ-ಈಚಲ ರಸ್ತೆ 1.50 ಕಿ.ಮೀ. ರಸ್ತೆ ನಿರ್ಮಾಣ ಹಾಗೂ ನಂದಗಾಂವದಲ್ಲಿ 1 ಕಿ.ಮೀ. ರಸ್ತೆ ಡಾಂಬರೀಕರಣ ಸೇರಿದಂತೆ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಣ ಸವದಿ, “ಬಸವೇಶ್ವರ ದೇವರ ದರ್ಶನಕ್ಕೆ ಹೊರಗಿನಿಂದ ಆಗಮಿಸುವ ಭಕ್ತರು ಹಾಗೂ ಸ್ಥಳೀಯರಿಗೆ ವಸತಿ ಸೌಕರ್ಯ ಕಲ್ಪಿಸಬೇಕು ಎಂಬುದು ಗ್ರಾಮಸ್ಥರ ಬಹುದಿನದ ಬೇಡಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸುಮಾರು ₹50 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ,” ಎಂದರು.
“ಮುಖ್ಯಮಂತ್ರಿಗಳು ಅಥಣಿ ಕ್ಷೇತ್ರದ ಅಭಿವೃದ್ಧಿಗೆ 10 ಕೋಟಿ ವಿಶೇಷ ಅನುದಾನ ನೀಡಿದ್ದಾರೆ. ಈ ಅನುದಾನವನ್ನು ವಿವಿಧ ಸಮುದಾಯಗಳ ದೇವಸ್ಥಾನಗಳು, ಸಮುದಾಯ ಭವನಗಳು ಹಾಗೂ ರಸ್ತೆಗಳ ನಿರ್ಮಾಣಕ್ಕೆ ಬಳಸಲಾಗುತ್ತಿದೆ.
“ಸರ್ಕಾರದಿಂದ ಅನುದಾನ ತಂದುಕೊಡುವುದು ನಮ್ಮ ಜವಾಬ್ದಾರಿ. ಅದನ್ನು ಗುಣಮಟ್ಟದಿಂದ ಬಳಸಿಕೊಳ್ಳುವುದು ಗ್ರಾಮಸ್ಥರು ಹಾಗೂ ಸಾರ್ವಜನಿಕರ ಜವಾಬ್ದಾರಿ,” ಎಂದು ಸವದಿ ಹೇಳಿದರು.
ಅಥಣಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್, ನೀರಾವರಿ, ಸಮುದಾಯ ಭವನ, ದೇವಸ್ಥಾನ ಹಾಗೂ ಸಾರ್ವಜನಿಕ ಸೌಲಭ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಪ್ರತಿಯೊಂದು ಗ್ರಾಮಕ್ಕೂ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸುವ ಮೂಲಕ ಅಥಣಿ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದು ತಮ್ಮ ಗುರಿಯಾಗಿದೆ ಎಂದು ಲಕ್ಷ್ಮಣ ಸವದಿ ಹೇಳಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ಕಾಲಮಿತಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ

ಕುಸ್ತಿ: ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ

ಅಕ್ರಮವಾಗಿ ಸಾಗಿಸುತ್ತಿದ್ದ 33.83 ಟನ್ ಅಕ್ಕಿ ಜಪ್ತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಾಲಮಿತಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ
    In (ರಾಜ್ಯ ) ಜಿಲ್ಲೆ
  • ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳುವುದು ಜನರ ಜವಾಬ್ದಾರಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ: ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಅಕ್ರಮವಾಗಿ ಸಾಗಿಸುತ್ತಿದ್ದ 33.83 ಟನ್ ಅಕ್ಕಿ ಜಪ್ತಿ
    In (ರಾಜ್ಯ ) ಜಿಲ್ಲೆ
  • ದಾಖಲೆಗಳಿಲ್ಲದೆ ದ್ವಿ.ದ.ಸ ಕರ್ತವ್ಯ ನಿರ್ವಹಣೆಗೆ ಹೊಣೆ ಯಾರು?
    In (ರಾಜ್ಯ ) ಜಿಲ್ಲೆ
  • ಕಾಯಕಯೋಗಿ ಒಕ್ಕಲಿಗ ಮುದ್ದಣ್ಣ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧಿಕಾರಿಗಳ ನಿರ್ಲಕ್ಷಕ್ಕೆ ಸ್ಥಳೀಯರ ಹಿಡಿಶಾಪ
    In (ರಾಜ್ಯ ) ಜಿಲ್ಲೆ
  • ವಾಲ್ಮೀಕಿ ಜಯಂತಿ: ಅ.೯ರಂದು ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ಗೆ ಕಬ್ಬು ಬೆಳೆ ಆಹುತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.