Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷ, ಪ್ರ.ಕಾರ್ಯದರ್ಶಿ ಹಾಗೂ ಕೋಶಾಧ್ಯಕ್ಷ ಅವಿರೋಧ ಆಯ್ಕೆ

ಮೈಸೂರು ದಸರಾ: ಸಿಂದಗಿ ಶ್ರೀಗಳಿಗೆ ಆಹ್ವಾನ

ಸಂಸತ್ ಕಲಾಪದ ಅನುಭವದೊಂದಿಗೆ ಪ್ರಜಾಪ್ರಭುತ್ವದ ಪಾಠ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ಸಿಗರದ್ದು ಬೌದ್ಧಿಕ ದಿವಾಳಿತನ-ಹತಾಶ ಮನಃಸ್ಥಿತಿ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ಸಿಗರದ್ದು ಬೌದ್ಧಿಕ ದಿವಾಳಿತನ-ಹತಾಶ ಮನಃಸ್ಥಿತಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ಟೀಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ‘ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಡೆಸುತ್ತಿರುವ ಹೋರಾಟ ಹತಾಶ ಮನಃಸ್ಥಿತಿಗೆ ಹಿಡಿದ ಕೈಗನ್ನಡಿಯಲ್ಲದೇ ಇದು ಗಾಂಧಿ ಕುಟುಂಬದ ಮಾನಸಿಕ ಅಸ್ವಸ್ಥತೆಯನ್ನು ಪ್ರದರ್ಶನಕ್ಕಿರಿಸಿದೆ’ ಎಂದು ಸಂಸದ ರಮೇಶ ಜಿಗಜಿಣಗಿ ಟೀಕಿಸಿದ್ದಾರೆ.
‘ಸತತ ಸೋಲಿನಿಂದಾಗಿ ಕಂಗೆಟ್ಟಿರುವ ಕಾಂಗ್ರೆಸ್ ಮಾನಸಿಕವಾಗಿ ಸಂಪೂರ್ಣ ದಿವಾಳಿಯಾಗಿದೆ. ತನ್ನ ಪ್ರತಿಯೊಂದು ವೈಫಲ್ಯವನ್ನು ಇವಿಎಂ ಯಂತ್ರದ ಮೇಲೆ, ಎಸ್‌ಐಆರ್ ಪ್ರಕ್ರಿಯೆ ಮೇಲೆ, ಚುನಾವಣೆ ಆಯೋಗದ ಮೇಲೆ ಹೊರಿಸುವ ಹುನ್ನಾರ ನಡೆಸುತ್ತಿದೆ. ದೇಶದಲ್ಲಿ ಅರಾಜಕತೆ ಸೃಷ್ಠಿಸುವ ಮೂಲಕ ಅಧಿಕಾರಕ್ಕೆ ಬರಬೇಕೆಂಬ ಪ್ರಯತ್ನಗಳೆಲ್ಲವೂ ವಿಫಲವಾಗುತ್ತಿವೆ. ಹೀಗಾಗಿ ದೇಶದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಸಿದೆ. ಕಾಂಗ್ರೆಸ್‌ನ ಈ ಕುತಂತ್ರವನ್ನು ಜನ ಗಮನಿಸುತ್ತಿದ್ದಾರೆ’ ಎಂದು ಜಿಗಜಿಣಗಿ ತಿಳಿಸಿದ್ದಾರೆ.
‘ಕೇಂದ್ರ ಚುನಾವಣೆ ಆಯೋಗ ಅತ್ಯಂತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಮತ್ತು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಕಾಂಗ್ರೆಸ್‌ನ ಪ್ರತಿ ಆರೋಪಗಳಿಗೆ ಸ್ಪಷ್ಟವಾಗಿ ಉತ್ತರ ನೀಡಿದೆ. ಅದಾಗ್ಯೂ ಗೊಂದಲಗಳಿದ್ದರೆ ಸಂವಿಧಾನಾತ್ಮಕವಾಗಿ ಬಗೆ ಹರಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಅದನ್ನು ಬಿಟ್ಟು ಬೀದಿಗಿಳಿದು ಹೋರಾಟ ಮಾಡುವುದು, ದೊಂಬಿ ಮತ್ತು ಗಲಭೆಗಳನ್ನು ಎಬ್ಬಿಸುವುದು, ತಮ್ಮ ಮೇಲಿನ ಪ್ರತಿಯೊಂದು ಎಫ್‌ಐಆರ್ ಕೂಡ ಒಂದು ಮೆಡಲ್ ಇದ್ದಂತೆ ಎಂದು ಹೇಳುವ ರಾಹುಲ್ ಗಾಂಧಿಯ ಪ್ರತಿ ನಡೆಯ ಹಿಂದೆ ದುರುದ್ಧೇಶ ಎದ್ದು ಕಾಣುತ್ತಿದೆ’ ಎಂದಿದ್ದಾರೆ.
‘ಕಾಂಗ್ರೆಸ್ ತನ್ನ ಆಡಳಿತಾವಧಿಯಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ಕೇವಲ ‘ಕೈಗೊಂಬೆ’ಯಂತೆ ನಡೆಸಿಕೊಂಡ ಉದಾಹರಣೆಗಳು ಇತಿಹಾಸದ ಪುಟಗಳಲ್ಲಿವೆ. 1975ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನ್ಯಾಯಾಂಗ, ಚುನಾವಣಾ ಆಯೋಗ ಹಾಗೂ ಮಾಧ್ಯಮಗಳ ಸ್ವಾತಂತ್ರ್ಯವನ್ನು ಕಸಿದುಕೊಂಡು ಪ್ರಜಾಪ್ರಭುತ್ವದ ಕಂಠ ಹಿಚುಕಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಗೆದ್ದಾಗ ಸಾಂವಿಧಾನಿಕ ಸಂಸ್ಥೆಗಳು ಸರಿಯಾಗಿ ಕಾಣಿಸುತ್ತವೆ; ಆದರೆ ಜನಾದೇಶ ವಿರುದ್ಧ ಬಂದಾಗ ಆಯೋಗದ ಮೇಲೆ ಗೂಬೆ ಕೂರಿಸುವುದು ಅವರ ಹಳೆಯ ಚಾಳಿಯಾಗಿದೆ. ಸೋಲಿನ ಭಯದಿಂದ ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್, ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವ ಪ್ರವೃತ್ತಿಯನ್ನು ತಕ್ಷಣವೇ ಕೈಬಿಡಬೇಕು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಿರಂತರವಾಗಿ ದಾಳಿ ಮಾಡುವುದು ದೇಶದ ಮತದಾರರಿಗೆ ಹಾಗೂ ಸಂವಿಧಾನಕ್ಕೆ ಮಾಡುವ ಅಪಚಾರ. ಕಾಂಗ್ರೆಸ್ ನಾಯಕರು ಬಾಲಿಶ ಪ್ರತಿಭಟನೆಗಳನ್ನು ನಿಲ್ಲಿಸಿ, ಜನಾದೇಶವನ್ನು ಗೌರವಿಸುವುದನ್ನು ಕಲಿಯಲಿ’ ಎಂದು ಸಂಸದ ರಮೇಶ ಜಿಗಜಿಣಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷ, ಪ್ರ.ಕಾರ್ಯದರ್ಶಿ ಹಾಗೂ ಕೋಶಾಧ್ಯಕ್ಷ ಅವಿರೋಧ ಆಯ್ಕೆ

ಮೈಸೂರು ದಸರಾ: ಸಿಂದಗಿ ಶ್ರೀಗಳಿಗೆ ಆಹ್ವಾನ

ಸಂಸತ್ ಕಲಾಪದ ಅನುಭವದೊಂದಿಗೆ ಪ್ರಜಾಪ್ರಭುತ್ವದ ಪಾಠ

ಶಿವಪುರದಲ್ಲಿ ಯುವ ಅಲ್ಪಸಂಖ್ಯಾತ ಅಭಿವೃದ್ಧಿ ಸಮಿತಿ ಸಭೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷ, ಪ್ರ.ಕಾರ್ಯದರ್ಶಿ ಹಾಗೂ ಕೋಶಾಧ್ಯಕ್ಷ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಸಿಂದಗಿ ಶ್ರೀಗಳಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಂಸತ್ ಕಲಾಪದ ಅನುಭವದೊಂದಿಗೆ ಪ್ರಜಾಪ್ರಭುತ್ವದ ಪಾಠ
    In (ರಾಜ್ಯ ) ಜಿಲ್ಲೆ
  • ಶಿವಪುರದಲ್ಲಿ ಯುವ ಅಲ್ಪಸಂಖ್ಯಾತ ಅಭಿವೃದ್ಧಿ ಸಮಿತಿ ಸಭೆ
    In (ರಾಜ್ಯ ) ಜಿಲ್ಲೆ
  • ಪುಸ್ತಕಗಳ ಆಯ್ಕೆ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ-ಅಚ್ಚುಕಟ್ಟಾಗಿ ಕೆ-ಸೆಟ್ ಪರೀಕ್ಷೆ ನಡೆಸಿ
    In (ರಾಜ್ಯ ) ಜಿಲ್ಲೆ
  • ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ನಿವೃತ್ತಿ ಭದ್ರತೆಗೆ ಇಂದಿನಿಂದಲೇ ಪಿಂಚಣಿ ಹೂಡಿಕೆ ಮಾಡಿ
    In (ರಾಜ್ಯ ) ಜಿಲ್ಲೆ
  • ಮಳೆ ಕೊರತೆ: ತೋಟಗಾರಿಕೆ ಬೆಳೆಗಳ ರಕ್ಷಣೆಗೆ ವಿಜ್ಞಾನಿಗಳ ಕ್ಷೇತ್ರ ಅಧ್ಯಯನ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್ ನೋಂದಣಿಗೆ ಅ.11 ಕೊನೆ ದಿನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.