Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷ, ಪ್ರ.ಕಾರ್ಯದರ್ಶಿ ಹಾಗೂ ಕೋಶಾಧ್ಯಕ್ಷ ಅವಿರೋಧ ಆಯ್ಕೆ

ಮೈಸೂರು ದಸರಾ: ಸಿಂದಗಿ ಶ್ರೀಗಳಿಗೆ ಆಹ್ವಾನ

ಸಂಸತ್ ಕಲಾಪದ ಅನುಭವದೊಂದಿಗೆ ಪ್ರಜಾಪ್ರಭುತ್ವದ ಪಾಠ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ
(ರಾಜ್ಯ ) ಜಿಲ್ಲೆ

ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್. ಹಾಗರಗಿ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪೌಷ್ಟಿಕಯುಕ್ತ ಆಹಾರ ಸೇವಿಸುವ ಮೂಲಕ ಗರ್ಭಿಣಿ ಮಹಿಳೆಯರು ಹಾಗೂ ಬಾಣಂತಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ವೈಯಕ್ತಿಕ ಸ್ವಚ್ಛತೆ, ಆರೋಗ್ಯ ಹಾಗೂ ಪೌಷ್ಟಿಕ ಆಹಾರದ ಮಹತ್ವದ ಕುರಿತು ತಾಯಂದಿರು ಅರಿವು ಹೊಂದಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಎಸ್. ಹಾಗರಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಜಯಪುರ ಗ್ರಾಮೀಣ ಮತ್ತು ನಗರ ಶಿಶು ಅಭಿವೃದ್ಧಿ ಯೋಜನೆಗಳ ಸಹಯೋಗದಲ್ಲಿ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹ-೨೦೨೬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಯಿ ಮತ್ತು ಮಗುವಿನ ಉತ್ತಮ ಆರೋಗ್ಯಕ್ಕೆ ಸಮತೋಲಿತ ಹಾಗೂ ಪೌಷ್ಟಿಕ ಆಹಾರ ಅತ್ಯಗತ್ಯವಾಗಿದ್ದು, ಆರೋಗ್ಯಕರ ಆಹಾರ ಪದ್ಧತಿಯನ್ನು ಜೀವನದ ಅವಿಭಾಜ್ಯ ಭಾಗವಾಗಿ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಡಾ. ಸಂತೋಷಕುಮಾರ ಹೆಚ್. ಮಾತನಾಡಿ, ಪ್ರಸಕ್ತ ಸಾಲಿನ ಪೋಷಣ್ ಮಾಸಾಚರಣೆಯ ಧ್ಯೇಯವಾಕ್ಯವಾದ ನಮ್ಮ ಅಂಗನವಾಡಿ–ನಮ್ಮ ಜವಾಬ್ದಾರಿ’ಯ ಆಶಯದಂತೆ ತಾಯಿ ಮತ್ತು ಮಗುವಿನ ಆರೋಗ್ಯ, ಪೌಷ್ಟಿಕತೆ ಹಾಗೂ ಸುರಕ್ಷಿತ ಮಾತೃತ್ವಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ವಿವಿಧ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ ಮಾತನಾಡಿ, ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ, ಆರೋಗ್ಯ ಸೇವೆ ಮತ್ತು ಅಗತ್ಯ ವೈದ್ಯಕೀಯ ಸಲಹೆಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಅಪೌಷ್ಟಿಕತೆ ನಿವಾರಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಜಿಲ್ಲಾ ನಿರೂಪಣಾಧಿಕಾರಿ ಶ್ರೀಮತಿ ನಿರ್ಮಲಾ ಎಚ್. ಸುರಪುರ ಅವರು ಪೋಷಣ್ ಮಾಸಾಚರಣೆಯ ಉದ್ದೇಶ ಹಾಗೂ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಆರ್.ಸಿ.ಎಚ್. ಅಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ದೀಪಾ ಕಾಳೆ, ವಿಜಯಪುರ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಸಿ. ಮ್ಯಾಗೇರಿ, ವಿಜಯಪುರ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಗೀತಾ ಗುತ್ತರಗಿಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ವಿಜಯಪುರ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಸಿ. ಮ್ಯಾಗೇರಿ ಸ್ವಾಗತಿಸಿದರು. ಇಂಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಸವರಾಜ ಜಗಳೂರು ವಂದನಾರ್ಪಣೆ ಸಲ್ಲಿಸಿದರು. ಜಿಲ್ಲಾ ಮಿಷನ್ ಸಂಯೋಜಕಿ ಶ್ರೀಮತಿ ಭಾರತಿ ಹೊನಳಿ ಕಾರ್ಯಕ್ರಮ ನಿರೂಪಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷ, ಪ್ರ.ಕಾರ್ಯದರ್ಶಿ ಹಾಗೂ ಕೋಶಾಧ್ಯಕ್ಷ ಅವಿರೋಧ ಆಯ್ಕೆ

ಮೈಸೂರು ದಸರಾ: ಸಿಂದಗಿ ಶ್ರೀಗಳಿಗೆ ಆಹ್ವಾನ

ಸಂಸತ್ ಕಲಾಪದ ಅನುಭವದೊಂದಿಗೆ ಪ್ರಜಾಪ್ರಭುತ್ವದ ಪಾಠ

ಶಿವಪುರದಲ್ಲಿ ಯುವ ಅಲ್ಪಸಂಖ್ಯಾತ ಅಭಿವೃದ್ಧಿ ಸಮಿತಿ ಸಭೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷ, ಪ್ರ.ಕಾರ್ಯದರ್ಶಿ ಹಾಗೂ ಕೋಶಾಧ್ಯಕ್ಷ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಸಿಂದಗಿ ಶ್ರೀಗಳಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಂಸತ್ ಕಲಾಪದ ಅನುಭವದೊಂದಿಗೆ ಪ್ರಜಾಪ್ರಭುತ್ವದ ಪಾಠ
    In (ರಾಜ್ಯ ) ಜಿಲ್ಲೆ
  • ಶಿವಪುರದಲ್ಲಿ ಯುವ ಅಲ್ಪಸಂಖ್ಯಾತ ಅಭಿವೃದ್ಧಿ ಸಮಿತಿ ಸಭೆ
    In (ರಾಜ್ಯ ) ಜಿಲ್ಲೆ
  • ಪುಸ್ತಕಗಳ ಆಯ್ಕೆ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ-ಅಚ್ಚುಕಟ್ಟಾಗಿ ಕೆ-ಸೆಟ್ ಪರೀಕ್ಷೆ ನಡೆಸಿ
    In (ರಾಜ್ಯ ) ಜಿಲ್ಲೆ
  • ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ನಿವೃತ್ತಿ ಭದ್ರತೆಗೆ ಇಂದಿನಿಂದಲೇ ಪಿಂಚಣಿ ಹೂಡಿಕೆ ಮಾಡಿ
    In (ರಾಜ್ಯ ) ಜಿಲ್ಲೆ
  • ಮಳೆ ಕೊರತೆ: ತೋಟಗಾರಿಕೆ ಬೆಳೆಗಳ ರಕ್ಷಣೆಗೆ ವಿಜ್ಞಾನಿಗಳ ಕ್ಷೇತ್ರ ಅಧ್ಯಯನ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್ ನೋಂದಣಿಗೆ ಅ.11 ಕೊನೆ ದಿನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.