ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ-೨೦೨೬ರ ಉದ್ಘಾಟನಾ ಸಮಾರಂಭಕ್ಕೆ ವಿಜಯಪುರ ಜಿಲ್ಲೆಯ ಸಿಂದಗಿ ಸಾರಂಗಮಠದ ಪೀಠಾಧ್ಯಕ್ಷರು ಡಾ.ಪ್ರಭುಸಾರಂಗದೇವ ಶಿವಾಚಾರ್ಯರಿಗೆ ಮುಖ್ಯಮಂತ್ರಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾದ ಆಹ್ವಾನ ಪತ್ರಿಕೆಯನ್ನು ವಿಜಯಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಸಂತೋಷ ಭೋವಿ ಶ್ರೀಗಳಿಗೆ ಹಸ್ತಾಂತರಿಸಿ ಆಹ್ವಾನ ನೀಡಿದರು.
ಅ.೧೧ರಂದು ಭಾನುವಾರ ಬೆಳಗ್ಗೆ ೧೧.೫೦ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ದಸರಾ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಿಂದಗಿ ಸಾರಂಗಮಠದ ಶ್ರೀಗಳಿಗೆ ಪಾಲ್ಗೊಳ್ಳುವಂತೆ ಆಹ್ವಾನಿಸಲಾಗಿದೆ.

