Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೌರಕಾರ್ಮಿಕರು ಸ್ವಚ್ಛತೆಯ ರಾಯಭಾರಿಗಳು
(ರಾಜ್ಯ ) ಜಿಲ್ಲೆ

ಪೌರಕಾರ್ಮಿಕರು ಸ್ವಚ್ಛತೆಯ ರಾಯಭಾರಿಗಳು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಪೌರಕಾರ್ಮಿಕರಿಗೆ ಸನ್ಮಾನ ನೆರವೇರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರತಿನಿತ್ಯ ಮಳೆ, ಚಳಿ ಎನ್ನದೇ ಸ್ವಚ್ಛತೆಯ ಮೂಲಕ ನಗರವನ್ನು ಸ್ವಚ್ಚಗೊಳಿಸಿ ಪ್ರತಿಯೊಬ್ಬರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸುವ ಪೌರಕಾರ್ಮಿಕರಿಗೆ ಭಾರತೀಯ ಜನತಾ ಪಕ್ಷದ ನಗರ ಘಟಕದ ನೇತೃತ್ವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗೌರವಪೂರ್ವಕ ಸನ್ಮಾನ ನೇರವೇರಿಸಿ ಉಡುಗೊರೆ ನೀಡಿ ಅವರ ಕೊಡುಗೆಗೆ ಧನ್ಯತಾ ನುಡಿಗಳನ್ನು ಅರ್ಪಿಸಿದರು.
ನಗರದ ಸಾಯಿ ಗಾರ್ಡ್ನ್ ಸಭಾಂಗಣದಲ್ಲಿ ೭೫೦ ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ವಿಶೇಷ ಉಡುಗೊರೆ ನೀಡಿ ಅವರನ್ನು ಸನ್ಮಾನಿಸಿ ಅವರ ಮೇಲೆ ಪುಷ್ಪವೃಷ್ಟಿಗೈದು ಅವರ ಕಾರ್ಯಕ್ಕೆ ಧನ್ಯವಾದ ಅರ್ಪಿಸಲಾಯಿತು.
ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಇಂದು ನಮ್ಮ ನಾಡು ಸ್ವಚ್ಛವಾಗಿರಲು ಪೌರಕಾರ್ಮಿಕ ಬಂಧುಗಳ ಶ್ರಮವೇ ಕಾರಣ, ಪೌರಕಾರ್ಮಿಕರು ಸ್ವಚ್ಛತೆಯ ರಾಯಭಾರಿಗಳು, ಪೌರಕಾರ್ಮಿಕರ ಬಗ್ಗೆ ಬಿಜೆಪಿ ಯಾವತ್ತೂ ಆಳವಾದ ಗೌರವ ಹಾಗೂ ಶ್ರದ್ಧೆ ಹಾಗೂ ಕಾಳಜಿ ಹೊಂದಿದೆ, ಬಿ.ಎಸ್. ಯಡಿಯೂರಪ್ಪ ಅವರು ಕೋವಿಡ್ ಸಂದರ್ಭದಲ್ಲಿ ಪೌರಕಾರ್ಮಿಕ ಬಂಧುಗಳಿಗಾಗಿಯೇ ಅಭಯ ನೀಡುವ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದರು, ನಂತರ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಅನೇಕ ವರ್ಷಗಳಿಂದ ಆಗದೇ ಇದ್ದ ೫ ಸಾವಿರಕ್ಕೂ ಅಧಿಕ ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಲಾಯಿತು, ಇದು ಪೌರಕಾರ್ಮಿಕರಿಗೆ ಸಂಬಂಧಿಸಿದಂತೆ ನಮ್ಮ ಪಕ್ಷಕ್ಕೆ ಇರುವ ಕಾಳಜಿ ಹಾಗೂ ಬದ್ಧತೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರಂತೂ ಪೌರಕಾರ್ಮಿಕರನ್ನು ಶ್ರದ್ಧೆಯಿಂದ ಕಾಣುವ ರೀತಿ ಪ್ರತಿಯೊಬ್ಬರಿಗೂ ಮಾದರಿ, ಪೌರಕಾರ್ಮಿಕ ಬಂಧುಗಳ ಪಾದಪೂಜೆ ನೇರವೇರಿಸುವ ಮೂಲಕ ಪೌರಕಾರ್ಮಿಕರ ಕರ್ತವ್ಯಕ್ಕೆ ಗೌರವವನ್ನು ನೀಡುವ ಕಾರ್ಯವನ್ನು ಪ್ರಧಾನಿ ಮೋದಿಜಿ ಮಾಡಿದ್ದಾರೆ, ಅವರ ಆದರ್ಶದ ಬೆಳಕಿನಲ್ಲಿ ಸಾಗಿ ನಾವು ಪೌರಕಾರ್ಮಿಕರನ್ನು ಅತ್ಯಂತ ಗೌರವದಿಂದ ಕಾಣಬೇಕು, ಪೌರಕಾರ್ಮಿಕರು ತಮ್ಮ ಮಕ್ಕಳನ್ನು ಶಿಕ್ಷಣವಂತರಾಗಿಸಬೇಕು, ಅವರು ಉನ್ನತ ಹುದ್ದೆ ಅಲಂಕರಿಸುವ ನಿಟ್ಟಿನಲ್ಲಿ ಶಿಕ್ಷಣವೇ ಆಧಾರ, ಹೀಗಾಗಿ ಈ ವಿಷಯಕ್ಕೆ ಹೆಚ್ಚಿನ ಗಮನ ಹರಿಸಿ ಎಂದರು.
ಪೌರಕಾರ್ಮಿಕರ ಸನ್ಮಾನ ಎಂದರೆ ಹತ್ತು-ಹದಿನೈದು ಜನರಿಗೆ ಇರಬಹುದು ಎಂದೇ ಭಾವಿಸಿದ್ದೆ, ಆದರೆ ೭೫೦ ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಏಕಕಾಲಕ್ಕೆ ಸನ್ಮಾನ ಮಾಡುತ್ತಿರುವುದು ಒಂದು ಅದ್ಭುತ ಕಾರ್ಯವೇ ಸರಿ, ಈ ಕಾರ್ಯಕ್ರಮದ ರೂವಾರಿಯಾಗಿರುವ ಉಮೇಶ ಕಾರಜೋಳರಿಗೆ ವಿಶೇಷ ಧನ್ಯವಾದ ಅರ್ಪಿಸುವೆ ಎಂದರು.
ಈ ವಿಶೇಷ ಕಾರ್ಯಕ್ರಮವನ್ನು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಉಮೇಶ ಕಾರಜೋಳ ಅವರ ಸಾರಥ್ಯದಲ್ಲಿ ಸಂಘಟಿಸಲಾಗಿತ್ತು.
ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮೇಯರ್ ಎಂ.ಎಸ್. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಉಪಮೇಯರ್ ಸುಮಿತ್ರಾ ಜಾಧವ, ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂದೀಪ ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಬೆಳಗಾವಿ ವಿಭಾಗ ಸಹ ಪ್ರಭಾರಿಗಳಾದ ಬಸವರಾಜ ಯಂಕಂಚಿ, ವಿಜುಗೌಡ ಪಾಟೀಲ, ಚಂದ್ರಶೇಖರ ಕವಟಗಿ, ಡಾ.ಸುರೇಶ ಬಿರಾದಾರ, ನವೀನ ಅರಕೇರಿ, ಪರಶುರಾಮಸಿಂಗ್ ರಜಪೂತ ಸೇರಿದಂತೆ ಹಲವರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ

ಶಾಸಕ ಯತ್ನಾಳರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಅ.12ಕ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ
    In (ರಾಜ್ಯ ) ಜಿಲ್ಲೆ
  • ಶಾಸಕ ಯತ್ನಾಳರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಅ.12ಕ್ಕೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಿದ್ಧೇಶ್ವರ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಅಧಿವೇಶನ
    In (ರಾಜ್ಯ ) ಜಿಲ್ಲೆ
  • ಕೆ-ಸೆಟ್ ಪರೀಕ್ಷೆ: ೨೪ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಕ್ಕೆ ಅ.೩೦ರೊಳಗೆ ಅರ್ಜಿ ಆಹ್ವಾನ
    In Uncategorized
  • ಹಿರಿಯ ನಾಗರಿಕರಿಗೆ ಉಚಿತ ಡಿಮೆನ್ಷಿಯಾ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಲಾಂಛನಗಳು ಮತ್ತು ಹೆಸರುಗಳ ಕಾಯ್ದೆ ಪಾಲನೆಗೆ ಸೂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.