ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಎರಡು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಗಳಿಗಾಗಿ ಬಾಡಿಗೆ ಕಟ್ಟಡಗಳ ಅಗತ್ಯವಿದ್ದು, ಆಸಕ್ತ ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ವಸತಿ ನಿಲಯದಲ್ಲಿ ತಲಾ ೧೫೦ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು ಅನುಕೂಲವಾಗುವಂತೆ ಸಾಕಷ್ಟು ಸ್ಥಳಾವಕಾಶ, ನೀರು, ಸ್ನಾನಗೃಹ ಹಾಗೂ ಶೌಚಾಲಯ ಸೌಲಭ್ಯ ಹೊಂದಿರುವ ಕಟ್ಟಡಗಳ ಅಗತ್ಯವಿದೆ. ಸರ್ಕಾರ ನಿಗದಿಪಡಿಸುವ ಬಾಡಿಗೆ ಮಿತಿಗೆ ಒಳಪಟ್ಟು ಕಟ್ಟಡಗಳನ್ನು ಬಾಡಿಗೆಗೆ ನೀಡಲು ಆಸಕ್ತಿಯಿರುವ ಮಾಲೀಕರು ಅಗತ್ಯ ದಾಖಲೆಗಳೊಂದಿಗೆ ಅ. ೩೦ರೊಳಗೆ ಅರ್ಜಿ ಸಲ್ಲಿಸಬೇಕು. ಆಸಕ್ತರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಡಿ. ದೇವರಾಜ ಅರಸು ಭವನ, ಜಿಲ್ಲಾ ಪಂಚಾಯಿತಿ ಕಚೇರಿ ಹತ್ತಿರ, ಕನಕದಾಸ ಬಡಾವಣೆ, ವಿಜಯಪುರ ಇಲ್ಲಿಗೆ ಸಲ್ಲಿಸಬಹುದು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
