ಅಕ್ಟೋಬರನಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಆರನೇ ವಾರ್ಷಿಕೋತ್ಸವ | ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಯುವಜನತೆಯನ್ನು ವ್ಯಸನದಿಂದ ದೂರವಿಡುವ ಮೂಲಕ ಆರೋಗ್ಯಕರ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಿಸುವ ಉದ್ದೇಶದಿಂದ ನಶಾ ಮುಕ್ತ ಭಾರತ ಅಭಿಯಾನದ ಆರನೇ ವಾರ್ಷಿಕೋತ್ಸವದ ಅಂಗವಾಗಿ ಅಕ್ಟೋಬರ್ ತಿಂಗಳ ನಾಲ್ಕನೇ ವಾರದಲ್ಲಿ ಜಿಲ್ಲಾದ್ಯಂತ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರ್ಕಾರದ ನಿರ್ದೇಶನ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮಾರ್ಗಸೂಚಿಯಂತೆ ಜಿಲ್ಲಾ, ತಾಲ್ಲೂಕು ಹಾಗೂ ಶಿಕ್ಷಣ ಸಂಸ್ಥೆಗಳ ಮಟ್ಟದಲ್ಲಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕಾರ್ಯಕ್ರಮಗಳ ಸಮರ್ಪಕ ನಿರ್ವಹಣೆ ಮತ್ತು ಇಲಾಖೆಗಳ ನಡುವಿನ ಸಮನ್ವಯಕ್ಕಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿ, ತಮ್ಮ ವ್ಯಾಪ್ತಿಯಲ್ಲಿ ವ್ಯವಸ್ಥಿತವಾಗಿ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಯುವಜನತೆ ದೇಶದ ಅಮೂಲ್ಯ ಸಂಪತ್ತಾಗಿದ್ದು, ಅವರನ್ನು ಮಾದಕ ವ್ಯಸನದ ದುಷ್ಪರಿಣಾಮಗಳಿಂದ ರಕ್ಷಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ, ಕುಟುಂಬದ ನೆಮ್ಮದಿ ಹಾಗೂ ಸಾಮಾಜಿಕ ಜೀವನದ ಮೇಲೆ ಉಂಟಾಗುವ ಗಂಭೀರ ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಯುವಜನರು, ಮಹಿಳೆಯರು ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರು ವ್ಯಸನಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು ಎಂದು ಅವರು ಸೂಚಿಸಿದ್ದಾರೆ.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕವೂ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ. ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣವಾದ hಣಣಠಿs://ಟಿಚಿshmuಞಣi.ಜosರಿe.gov.iಟಿ/eಠಿಟeಜge/ಗೆ ಭೇಟಿ ನೀಡಿ ಇ-ಪ್ರತಿಜ್ಞೆ ಸ್ವೀಕರಿಸುವ ಮೂಲಕ ಪ್ರಮಾಣಪತ್ರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಅಭಿಯಾನದಡಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಅಗತ್ಯವಾದ ಮಾಹಿತಿ ಹಾಗೂ ಮಾರ್ಗಸೂಚಿಗಳನ್ನು hಣಣಠಿs://ಜಡಿive.googಟe.ಛಿom/ಜಡಿive/ಜಿoಟಜe
ಡಿs/೧ಆoಆಗಿಜಜಿರಿoಜಆo೬ಣu೩೧೧ಉqi೯೬ಘಿui೧೬೩?usಠಿ=ಜಡಿive_ಟiಟಿಞ ಮೂಲಕ ಪಡೆಯಬಹುದಾಗಿದೆ.
ಜಿಲ್ಲೆಯಾದ್ಯಂತ ಆಯೋಜಿಸುವ ಕಾರ್ಯಕ್ರಮಗಳ ವರದಿಗಳನ್ನು ಎನ್‌ಎಂಬಿಎ (ಓಒಃಂ) ಮೊಬೈಲ್ ಆ್ಯಪ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಅಲ್ಲದೆ, ಕಾರ್ಯಕ್ರಮಗಳ ವಿವರ ಹಾಗೂ ವರದಿ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

