Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ
(ರಾಜ್ಯ ) ಜಿಲ್ಲೆ

ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ಸೇವಾ ಸಂಕಲ್ಪ ಹಾಗೂ ಬೂತ್ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ | ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ನಿರುದ್ಯೋಗ, ರೈತರ ಸಮಸ್ಯೆಗಳು ಹಾಗೂ ಬರಗಾಲ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಸಿಂದಗಿ ನಗರದ ಮಾಂಗಲ್ಯ ಭವನದಲ್ಲಿ ಹಮ್ಮಿಕೊಂಡ ಸೇವಾ ಸಂಕಲ್ಪ ಹಾಗೂ ಬೂತ್ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದೆ ಯುವಕರ ಭವಿಷ್ಯದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಇದರಿಂದ ಯುವಕರಲ್ಲಿ ಆಕ್ರೋಶ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಹಿತ ಕಾಪಾಡುವಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು. ರೈತರ ಸಂಕಷ್ಟ ನಿವಾರಿಸುವ ನಿಟ್ಟಿನಲ್ಲಿ ರೂ.೫ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು. ಕೃಷಿ ಚಟುವಟಿಕೆಗಳಿಗೆ ಸಮರ್ಪಕವಾಗಿ ತ್ರಿಫೇಸ್ ವಿದ್ಯುತ್ ಪೂರೈಸಬೇಕು. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದ್ದು, ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಮೋದಿ ಅವರ ೨೫ವರ್ಷಗಳ ಸಾರ್ವಜನಿಕ ಜೀವನದ ಸಂಭ್ರಮಾಚರಣೆ: ಸೆ.೧೭ ರಿಂದ ಅ.೧೭ರವರೆಗೆ ದೇಶಾದ್ಯಂತ ಹಾಗೂ ಕರ್ನಾಟಕದಲ್ಲಿ ಸೇವಾ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನರೇಂದ್ರ ಮೋದಿ ಅವರು ೨೦೦೧ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಸಾರ್ವಜನಿಕ ಜೀವನ ಆರಂಭಿಸಿ, ೨೦೧೪ರಲ್ಲಿ ದೇಶದ ಪ್ರಧಾನಮಂತ್ರಿಯಾದರು. ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುತ್ತಿರುವ ಅವರ ೨೫ ವರ್ಷಗಳ ಸಾರ್ವಜನಿಕ ಜೀವನವನ್ನು ಸೇವಾ ಸಂಕಲ್ಪದೊಂದಿಗೆ ಆಚರಿಸಲಾಗುತ್ತಿದೆ ಎಂದರು.
ಈ ವೇಳೆ ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ, ಸಂಸದ ರಮೇಶ ಜಿಗಜಿಣಗಿ ಅವರ ಅಭಿವೃದ್ಧಿ ಕಾರ್ಯಗಳನ್ನು ಪ್ರಶ್ನಿಸುವ ಸಿಂದಗಿ ಶಾಸಕ ಅಶೋಕ ಮನಗೂಳಿ ಅವರಿಗೆ ಜಿಗಜಿಣಗಿ ಅವರ ರಾಜಕೀಯ ಸೇವೆಯ ಅನುಭವದಷ್ಟು ವಯಸ್ಸಾಗಿಲ್ಲ. ಜಿಗಜಿಣಗಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳ ಮುಂದೆ ಶಾಸಕರ ಅನುಭವ ಕಡಿಮೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ವ್ಯಂಗ್ಯವಾಡಿದರು.
ಶಾಸಕರ ಮನೆಯಲ್ಲಿಯೇ ೩-೪ ಜನ ಗುತ್ತಿಗೆದಾರರಿದ್ದು, ಬಹುತೇಕ ಕಾಮಗಾರಿಗಳನ್ನು ಅವರೇ ನಿರ್ವಹಿಸುತ್ತಿದ್ದಾರೆ. ನಗರದಲ್ಲಿ ನಡೆಯುತ್ತಿರುವ ಹಲವು ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ಆರೋಪಿಸಿದರು.
ಸಿಂದಗಿ ನಗರದ ಪ್ರಮುಖ ರಸ್ತೆಗಳು ತಗ್ಗು-ಗುಂಡಿಗಳಿಂದ ಹದಗೆಟ್ಟಿವೆ. ಶಾಸಕ ಅಶೋಕ ಮನಗೂಳಿ ಅವರ ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ ೨೦ಕಿ.ಮೀ. ಡಾಂಬರ ರಸ್ತೆ ನಿರ್ಮಿಸಿರುವುದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.
ಆಲಮೇಲ ತಾಲೂಕು ರಚನೆಯಾಗಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಪ್ರತ್ಯೇಕ ಬಿಜೆಪಿ ಮಂಡಲ ನೀಡಬೇಕು ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ತೃಪ್ತಿಕರವಾಗಿಲ್ಲ. ಮುಂಬರುವ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಿಗೆ ಕಾರ್ಯಕರ್ತರು ಸಜ್ಜಾಗಬೇಕು. ಪಕ್ಷದ ಕಾರ್ಯಕರ್ತರೊಂದಿಗೆ ನಾವು ಸದಾ ಇರುತ್ತೇವೆ. ರಾಜ್ಯದಲ್ಲಿ ಮುಂದಿನ ೨೦೨೮ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿಯಾಗಬೇಕು ಎಂಬ ಆಶಯವನ್ನೂ ವ್ಯಕ್ತಪಡಿಸಿದರು.
ಈ ವೇಳೆ ಸಂತೋಷ ಪಾಟೀಲ ಡಂಬಳ ಪ್ರಾಸ್ತಾವಿಕ ಮಾತನಾಡಿದರು. ಗುರು ತಳವಾರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಅರುಣ ಶಹಾಪುರ, ಸೋಮನಗೌಡ ಪಾಟೀಲ ಸಾಸನೂರ, ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ, ವಿಜುಗೌಡ ಪಾಟೀಲ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಬಸವರಾಜ ಯಂಕಂಚಿ, ಉಮೇಶ ಕಾರಜೋಳ, ಪೀರೂ ಕೆರೂರ, ಚಂದ್ರಶೇಖರ ಕವಟಗಿ, ಸುರೇಶ ಬಿರಾದಾರ, ಈರಣ್ಣ ರಾವೂರ, ಶಂಭುಲಿಂಗ ಕಕ್ಕಳಮೇಲಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

“ಸಿಂದಗಿಯಲ್ಲಿ ನಡೆಯುತ್ತಿರುವ ೩೭೧ಜೆ ಸತ್ಯಾಗ್ರಹದ ವಿಚಾರವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುತ್ತೇನೆ. ಈ ವಿಚಾರವಾಗಿ ಎಲ್ಲ ರಾಜಕೀಯ ಪಕ್ಷಗಳ ನಾಯಕರು ಒಗ್ಗೂಡಿ ಚರ್ಚೆ ನಡೆಸಬೇಕು. ಬಳಿಕ ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಕ್ರಮಕೈಗೊಳ್ಳಬೇಕು.”

– ಬಿ.ವೈ.ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷರು

೩೭೧(ಜೆ) ಹೋರಾಟಕ್ಕೆ ವಿಜಯೇಂದ್ರ ಬೆಂಬಲ

ಸಿಂದಗಿ: ನಗರದ ಬಸವೇಶ್ವರ ವೃತ್ತದ ಬಳಿ ಗೋಕಾಕ ಚಳವಳಿಯ ರೂವಾರಿ ಶ್ರೀ ರೇ.ಚ.ರೇವಡಿಗಾರ ಪ್ರತಿಷ್ಠಾನ ಹಾಗೂ ೩೭೧(ಜೆ) ಹೋರಾಟ ಸಮಿತಿಯ ನೇತೃತ್ವದಲ್ಲಿ ಏಳು ದಿನಗಳಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ಹೋರಾಟಕ್ಕೆ ಬೆಂಬಲ ಸೂಚಿಸಿ ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಪ್ರಮುಖ ರಂಗನಾಥ ತೋರ್ಫೆ ಮಾತನಾಡಿ, ಡಾ. ಡಿ.ಎಂ.ನಂಜುಂಡಪ್ಪ ವರದಿಯ ಪ್ರಕಾರ ವಿಜಯಪುರ ಜಿಲ್ಲೆ ಹಿಂದುಳಿದ ಪ್ರದೇಶವಾಗಿದ್ದು, ಜಿಲ್ಲೆಯನ್ನು ಸಂವಿಧಾನದ ೩೭೧(ಜೆ) ವಿಶೇಷ ಸೌಲಭ್ಯದ ವ್ಯಾಪ್ತಿಗೆ ಸೇರಿಸಬೇಕೆಂದು ಆಗ್ರಹಿಸಿದರು. ೨೦೧೨–೧೩ರಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ೩೭೧(ಜೆ) ಕಲಂ ಜಾರಿಗೆ ಬಂದಿದ್ದರೂ ವಿಜಯಪುರ ಜಿಲ್ಲೆಯನ್ನು ಅದರಿಂದ ಹೊರಗಿಡಲಾಗಿದೆ. ಹೀಗಾಗಿ ಜಿಲ್ಲೆಯನ್ನು ಪುನಃ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ವಿಧಾನಮಂಡಲದಲ್ಲಿ ಚರ್ಚಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಮನವಿ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ ಮಾತನಾಡಿ, ಡಾ.ನಂಜುಂಡಪ್ಪ ವರದಿಯ ಪ್ರಕಾರ ವಿಜಯಪುರ ಜಿಲ್ಲೆಗೂ ೩೭೧(ಜೆ) ಸೌಲಭ್ಯ ದೊರೆಯಬೇಕಿತ್ತು ಎಂಬುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿದೆ. ಈ ವಿಷಯವನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು, ವಿಜಯಪುರ ಜಿಲ್ಲೆಯನ್ನು ೩೭೧(ಜೆ) ವ್ಯಾಪ್ತಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಒತ್ತಾಯಿಸಲಾಗುವುದು. ಕೇಂದ್ರ ಸರ್ಕಾರದ ಮಟ್ಟದಲ್ಲಿಯೂ ಈ ಕುರಿತು ಚರ್ಚಿಸಿ ನ್ಯಾಯ ದೊರಕಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ, ಸಮಿತಿ ಸದಸ್ಯರಾದ ಸಿದ್ದರಾಮ ಪಾಟೀಲ, ಪಂಡಿತ ಯಂಪೂರೆ, ಎಂ.ಎಂ.ಹಂಗರಗಿ, ಎಸ್.ಎಸ್.ಮಲ್ಲೇದ, ದಾನಪ್ಪಗೌಡ ಚನಗೊಂಡ, ಸಿದ್ದು ಕಡಗಂಚಿ, ಅರವಿಂದ ಕುಲಕರ್ಣಿ, ಗುರುರಾಜ ಪಡಶೆಟ್ಟಿ, ಅಂಬರೀಶ ಸುಣಗಾರ, ಆನಂದ ಶಾಬಾದಿ, ಮಲ್ಲಿಕಾರ್ಜುನ ಅಲ್ಲಾಪುರ, ಪೀರು ಕೇರೂರ, ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಸಿದ್ದು ಬುಳ್ಳಾ, ಅಶೋಕ ಅಲ್ಲಾಪುರ, ಪ್ರಶಾಂತ ಕದ್ದರಕಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ

ಶಾಸಕ ಯತ್ನಾಳರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಅ.12ಕ್ಕೆ

ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಅಭಿಯಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ
    In (ರಾಜ್ಯ ) ಜಿಲ್ಲೆ
  • ಶಾಸಕ ಯತ್ನಾಳರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಅ.12ಕ್ಕೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಿದ್ಧೇಶ್ವರ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಅಧಿವೇಶನ
    In (ರಾಜ್ಯ ) ಜಿಲ್ಲೆ
  • ಕೆ-ಸೆಟ್ ಪರೀಕ್ಷೆ: ೨೪ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಕ್ಕೆ ಅ.೩೦ರೊಳಗೆ ಅರ್ಜಿ ಆಹ್ವಾನ
    In Uncategorized
  • ಹಿರಿಯ ನಾಗರಿಕರಿಗೆ ಉಚಿತ ಡಿಮೆನ್ಷಿಯಾ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಲಾಂಛನಗಳು ಮತ್ತು ಹೆಸರುಗಳ ಕಾಯ್ದೆ ಪಾಲನೆಗೆ ಸೂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.