Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದುಶ್ಚಟ ಮುಕ್ತ ಸಮಾಜಕ್ಕೆ ವ್ಯಸನಿಗಳು ಪಣತೊಡಲಿ :ಪೂಜಾರಿ

ಭಾಷಾ ನದಾಫ್ ರಾಜ್ಯಾಧ್ಯಕ್ಷರಾಗಿ ಆಯ್ಕೆ

ಮೈಸೂರು ದಸರಾ ಕಾರ್ಯಕ್ರಮಕ್ಕೆ ಶ್ರೀಗಳಿಗೆ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೈಭವದ ದಸರಾ ಆಚರಣೆಗೆ ಸಕಲ ಸಿದ್ಧತೆ :ಡಾ.ದೇವಾನಂದ
(ರಾಜ್ಯ ) ಜಿಲ್ಲೆ

ವೈಭವದ ದಸರಾ ಆಚರಣೆಗೆ ಸಕಲ ಸಿದ್ಧತೆ :ಡಾ.ದೇವಾನಂದ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮೈಸೂರು ದಸರಾ ವೈಭವದ ಮಾದರಿಯಲ್ಲಿಯೇ ತಾಂಬಾದಲ್ಲಿ ನಾಡದೇವಿ ನವರಾತ್ರಿ ಉತ್ಸವ ನಡೆಯುವುದುಂಟು. ಈ ಬಾರಿಯೂ ದಿ.೧೧ ರಿಂದ ಹತ್ತು ದಿನಗಳ ಕಾಲ ವೈಭವದ ದಸರಾ ಆಚರಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
ಈ ಕುರಿತು ವಿವರಣೆ ನೀಡಿದ ನಾಗಠಾಣ ಮಾಜಿ ಶಾಸಕ ಡಾ.ದೇವಾನಂದ ಚವ್ಹಾಣ ಅವರು, ತಾಂಬಾದಲ್ಲಿ ಸಮಾಜ ಸೇವಕ ದಿ.ಫೂಲಸಿಂಗ್ ಚವ್ಹಾಣ ಹಾಗೂ ಸಮಾನ ಮನಸ್ಕರು ಸೇರಿ ೧೯೭೨ ರಿಂದ ದಸರಾ ಉತ್ಸವ ಆಚರಣೆಗೆ ಮುಂದಾದರು, ಕಳೆದ ೫೫ ವರ್ಷಗಳಿಂದಲೂ ನಿರಂತರವಾಗಿ ಮೈಸೂರು ದಸರಾ ಮಾದರಿಯಲ್ಲಿಯೇ ದಸರಾ ಉತ್ಸವವನ್ನು ಆಯೋಜಿಸುತ್ತಾ ಬರಲಾಗಿದೆ ಎಂದರು.
ದಿನಾಂಕ ೧೧ ರಂದು ಉತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಗುತ್ತಿದ್ದು, ಬಂಥನಾಳದ ಶ್ರೀ ಸಂಗನಬಸವ ದೇವರ ಸಾನಿಧ್ಯದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಿಂದಗಿ ಶಾಸಕ ಅಶೋಕ ಮನಗೂಳಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಹಗರಿ ಬೊಮ್ಮನಳ್ಳಿ ಶಾಸಕ ಎಸ್. ಭೀಮಾನಾಯಕ ಹಾಗೂ ಸಮಾಜ ಸೇವಕ ಡಾ.ಪ್ರಭುಗೌಡ ಪಾಟೀಲ ಕುಂಭಮೇಳ ಹಾಗೂ ವೈಭವದ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಜಗದಂಬಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಜಿ.ಬಿ. ಅಂಗಡಿ ಅಧ್ಯಕ್ಷತೆ ವಹಿಸುವರು. ಅನ್ನದಾಸೋಹ ಕಾರ್ಯಕ್ಕೆ ಮಾಜಿ ಶಾಸಕ ರಮೇಶ ಭೂಸನೂರ ಚಾಲನೆ ನೀಡಲಿದ್ದಾರೆ. ಶ್ರೀ ಜಗನು ಮಹಾರಾಜರು, ಶ್ರೀ ಸೋಮಲಿಂಗ ಮಹಾರಾಜರು, ಶ್ರೀ ಧನಸಿಂಗ್ ಮಹಾರಾಜರು ಸಾನಿಧ್ಯ ವಹಿಸಲಿದ್ದಾರೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷö್ಮಣ ನಿಂಬರಗಿ, ವಿಶ್ರಾಂತ ಡಿವೈಎಸ್‌ಪಿ ಆರ್.ಕೆ. ನಾಯಕ, ಸಿಪಿಐ ಸುನೀಲ ಪಾಟೀಲ, ಬಿಜೆಪಿ ಮುಖಂಡ ಮಹೇಂದ್ರಕುಮಾರ ನಾಯಕ, ಜಿ.ಪಂ. ಮಾಜಿ ಸದಸ್ಯ ಪಂಚಪ್ಪ ಕಲಬುರ್ಗಿ ಮೊದಲಾದವರು ಆಗಮಿಸಲಿದ್ದಾರೆ ಎಂದು ಚವ್ಹಾಣ ತಿಳಿಸಿದರು.
ಮುಂಬೈನ ಮಹಾಕಾಲಿ ಇವೆಂಟ್ಸ್ ಸಹಯೋಗದಲ್ಲಿ ಅಘೋರಿ ಕಾರ್ಯಕ್ರಮ ಮೆರವಣಿಗೆಯ ಕೇಂದ್ರ ಬಿಂದುವಾಗಲಿದೆ, ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಮೆರವಣಿಗೆಗೆ ಕಳೆ ಕಟ್ಟಲಿವೆ ಎಂದರು.
ದಿ.೧೨ ರಂದು ರಾತ್ರಿ ೮ ಕ್ಕೆ ಮುಕ್ತ ಕೋಲಾಟ, ದಿ.೧೩ ರಂದು ಬೆಳಿಗ್ಗೆ ೧೧ ಕ್ಕೆ ಖೋಖೋ ಪಂದ್ಯಾವಳಿ, ಅದೇ ದಿನ ರಾತ್ರಿ ೮ ಕ್ಕೆ ರಸಮಂಜರಿ, ದಿ.೧೪ ರಂದು ಮ್ಯೂಸಿಕಲ್ ಚೇರ್, ಹಿಟ್ಟಿನಲ್ಲಿ ನಾಣ್ಯ ತೆಗೆಯುವ ವಿಭಿನ್ನ ಸ್ಪರ್ಧೆಗಳು ನಡೆಯಲಿವೆ ಎಂದು ಡಾ.ಚವ್ಹಾಣ ವಿವರಿಸಿದರು.
ದಿನಾಂಕ ೧೫ ರಂದು ಸಮಸ್ತ ನಾಡಿನ ಜನತೆಯ ಒಳಿತಿಗಾಗಿ ನವಚಂಡಿ ಹೋಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಉತ್ಸವ ಸಮಿತಿ ಅಧ್ಯಕ್ಷ ಅಭಿನವ ಚವ್ಹಾಣ, ಪ್ರೀತಮ್ ಚವ್ಹಾಣ, ದೊಡಮನಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದುಶ್ಚಟ ಮುಕ್ತ ಸಮಾಜಕ್ಕೆ ವ್ಯಸನಿಗಳು ಪಣತೊಡಲಿ :ಪೂಜಾರಿ

ಭಾಷಾ ನದಾಫ್ ರಾಜ್ಯಾಧ್ಯಕ್ಷರಾಗಿ ಆಯ್ಕೆ

ಮೈಸೂರು ದಸರಾ ಕಾರ್ಯಕ್ರಮಕ್ಕೆ ಶ್ರೀಗಳಿಗೆ ಆಹ್ವಾನ

ಹೆಣ್ಣು ಜಗವ ಬೆಳಗುವ ದೇವತೆ :ಡಾ.ಹೊಸಮನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದುಶ್ಚಟ ಮುಕ್ತ ಸಮಾಜಕ್ಕೆ ವ್ಯಸನಿಗಳು ಪಣತೊಡಲಿ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಭಾಷಾ ನದಾಫ್ ರಾಜ್ಯಾಧ್ಯಕ್ಷರಾಗಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ ಕಾರ್ಯಕ್ರಮಕ್ಕೆ ಶ್ರೀಗಳಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಜಗವ ಬೆಳಗುವ ದೇವತೆ :ಡಾ.ಹೊಸಮನಿ
    In (ರಾಜ್ಯ ) ಜಿಲ್ಲೆ
  • ಬಯಲು ಬಹಿರ್ದೆಸೆ ತಡೆಯದಿದ್ದರೆ ರಸ್ತೆಯೇ ಬಂದ್!
    In (ರಾಜ್ಯ ) ಜಿಲ್ಲೆ
  • ವೈಭವದ ದಸರಾ ಆಚರಣೆಗೆ ಸಕಲ ಸಿದ್ಧತೆ :ಡಾ.ದೇವಾನಂದ
    In (ರಾಜ್ಯ ) ಜಿಲ್ಲೆ
  • ಪೌಷ್ಟಿಕ ಆಹಾರದಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಲು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಬೇಸಿಗೆಗೂ ಮುನ್ನವೇ ಚಿಂಚೋಳಿಯಲ್ಲಿ ಕುಡಿವ ನೀರಿಗೆ ಹಾಹಾಕಾರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ ೩೭೧(ಜೆ) ಮೀಸಲಾತಿಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮರಡಿಸಿದ್ದೇಶ್ವರ ದೇವಸ್ಥಾನದಲ್ಲಿ ಘಟಸ್ಥಾಪನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.