ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ, ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ, ನವದೆಹಲಿ (ಐಸಿಎಸ್‌ಎಸ್‌ಆರ್) ಅವರ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಸಂಶೋಧನಾ ಪ್ರಾಜೆಕ್ಟ್ನಲ್ಲಿ ತಾತ್ಕಾಲಿಕವಾಗಿ ಕೆಲಸ ಮಾಡಲು ಸಹಾಯಕ ಸಂಶೋಧಕರು ಮತ್ತು ಫೀಲ್ಡ್ ಇನ್ವಸ್ಟಿಗೇರ‍್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ ೨೨ರೊಳಗೆ ಯೋಜನಾ ನಿರ್ದೇಶಕರು, ಐಸಿಎಸ್‌ಎಸ್‌ಆರ್ ಪ್ರಾಜೆಕ್ಟ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಇವರಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳು ತಾತ್ಕಾಲಿಕವಾಗಿದ್ದು ವೇತನ, ವಿದ್ಯಾರ್ಹತೆ ಮತ್ತಿತರ ವಿವರಗಳಿಗೆ ವಿಶ್ವವಿದ್ಯಾನಿಲಯದ ವೆಬ್‌ಸೈಟ್ ತಿತಿತಿ.ಞsತಿu.ಚಿಛಿ.iಟಿ ಅಥವಾ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಭೇಟಿ ನೀಡಬಹುದು ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.
