Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮುಳವಾಡದಲ್ಲಿ ಅ.16ರಂದು ‘ಬಯಲು ಬಯಲಾಯಿತ್ತು’ ನಾಟಕ ಪ್ರದರ್ಶನ

36 ವರ್ಷಗಳ ಪರಂಪರೆಗೆ ಸಾಕ್ಷಿಯಾದ ಆದಿಶಕ್ತಿ ಯುವಕ ಮಂಡಳ

೩೭೧ (ಜೆ) ಹೋರಾಟ ಜನಾಂದೋಲನವಾಗಬೇಕು :ಮನಗೂಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳು ಸಂಸದೀಯ ಕಾರ್ಯಕಲಾಪಗಳ ಕುರಿತು ಅರಿಯಬೇಕು
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳು ಸಂಸದೀಯ ಕಾರ್ಯಕಲಾಪಗಳ ಕುರಿತು ಅರಿಯಬೇಕು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ ಮತ್ತು ಆಲಮೇಲ ತಾಲೂಕು ಮಟ್ಟದ ಯುವ ಸಂಸತ್ತು ೨೦೨೬-೨೭ರ ಯುವ ಸಂಸತ್ತು ಅಧಿವೇಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಅಶೋಕ ಮನಗೂಳಿ ಸಲಹೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವಿದ್ಯಾರ್ಥಿಗಳು ಪುಸ್ತಕದ ಜ್ಞಾನದ ಜೊತೆಗೆ ಪ್ರಾಯೋಗಿಕವಾಗಿ ಕಲಿತಾಗ ಅದು ಹೆಚ್ಚು ಪರಿಣಾಮಕಾರಿಯಾಗುತ್ತದೆ. ಶಾಲಾ-ಕಾಲೇಜು ಹಂತದಲ್ಲಿಯೇ ವಿಧೇಯಕ ಮಂಡನೆ, ಸಭಾತ್ಯಾಗ, ಶೂನ್ಯ ವೇಳೆಯಲ್ಲಿ ಪ್ರತಿಭಟನೆ ಹಾಗೂ ಚುಕ್ಕೆ ಗುರುತಿನ ಪ್ರಶ್ನೆಗಳ ಮಂಡನೆ ಸೇರಿದಂತೆ ಸಂಸದೀಯ ಕಾರ್ಯಕಲಾಪಗಳ ಕುರಿತು ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಸಲಹೆ ನೀಡಿದರು.
ಸಿಂದಗಿ ನಗರದ ಮಾಂಗಲ್ಯ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಯುವ ಸಂಸತ್ತು ಅಧಿವೇಶನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಆದೇಶದ ಮೇರೆಗೆ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಪರಿಕಲ್ಪನೆ ಹಾಗೂ ಶಾಸಕಾಂಗದ ಕಾರ್ಯವೈಖರಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಯುವ ಸಂಸತ್ತು ಕಾರ್ಯಕ್ರಮ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ನಡೆಸಿಕೊಟ್ಟ ಈ ಅಣಕು ಅಧಿವೇಶನ ಇಡೀ ರಾಜ್ಯಕ್ಕೆ ಮಾದರಿಯಾಗುವಂತಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಸಂಸದೀಯ ಪಟುಗಳಾಗಿ ಹೊರಹೊಮ್ಮಬೇಕು. ಜನಸೇವೆಯೇ ನಮ್ಮ ಮುಖ್ಯ ಗುರಿಯಾಗಿದ್ದು, ಜನಪ್ರತಿನಿಧಿಗಳು ಯಾವುದೇ ಸ್ವಾರ್ಥವಿಲ್ಲದೆ ನಿಸ್ವಾರ್ಥವಾಗಿ ಜನರ ಸೇವೆ ಮಾಡಬೇಕು ಎಂದರು.
ಈ ವೇಳೆ ತಹಶೀಲ್ದಾರ್ ಕರೇಪ್ಪ ಬೆಳ್ಳಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ಯುವ ಸಂಸತ್ತು ಆಯೋಜಿಸಲಾಗಿದೆ. ತಾಲೂಕ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿದ ೩೬ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಎಂದರು.
ಅಧಿವೇಶನದಲ್ಲಿ ಪ್ರೌಢಶಾಲೆ, ಪದವಿ-ಪೂರ್ವ ಹಾಗೂ ಪದವಿ ಹಂತದ ೨೨೪ ವಿದ್ಯಾರ್ಥಿಗಳು ಭಾಗವಹಿಸಿ, ಸಭಾಧ್ಯಕ್ಷರು, ಸಚಿವರು, ವಿರೋಧ ಪಕ್ಷದ ನಾಯಕರು ಹಾಗೂ ಸದಸ್ಯರ ಪಾತ್ರಗಳನ್ನು ನಿರ್ವಹಿಸುವ ಮೂಲಕ ಸಂಸದೀಯ ಕಾರ್ಯಕಲಾಪಗಳನ್ನು ಪ್ರಾಯೋಗಿಕವಾಗಿ ಪ್ರದರ್ಶಿಸಿದರು. ಎಲ್ಲ ವಿದ್ಯಾರ್ಥಿಗಳಿಗೂ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಸೂಕ್ತ ಅವಕಾಶ ಕಲ್ಪಿಸಲಾಯಿತು.
ನಿರುದ್ಯೋಗ ಸಮಸ್ಯೆ, ನಗರಾಭಿವೃದ್ಧಿ, ಶಿಕ್ಷಣ ವ್ಯವಸ್ಥೆ, ಗ್ರಾಮೀಣ ಕುಡಿಯುವ ನೀರಿನ ಪೂರೈಕೆ, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ, ಜಲಜೀವನ ಮಿಷನ್ ಯೋಜನೆ, ಕಾಲುವೆಗಳಿಗೆ ನೀರು ಪೂರೈಕೆ, ಬರಗಾಲ ನಿರ್ವಹಣೆ, ಸೈಬರ್ ಅಪರಾಧ ಹಾಗೂ ರೈತರ ಸಮಸ್ಯೆಗಳು ಸೇರಿದಂತೆ ಹಲವು ಪ್ರಚಲಿತ ವಿಷಯಗಳ ಕುರಿತು ವಿದ್ಯಾರ್ಥಿಗಳು ನಡೆಸಿದ ಚರ್ಚೆಗಳು ಗಮನ ಸೆಳೆದವು. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ ಗುಂದಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಪಂ ಇಒ ಅನಿಲ ಹಳ್ಳಿ, ಬಿಇಒ ಟಿ.ಎಸ್.ಆಲಗೂರ, ಎ.ಆರ್.ಹೆಗ್ಗನದೊಡ್ಡಿ, ಬಿ.ಎಂ. ಮಾಸ್ತಿ, ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಎಸ್.ಎಸ್.ಹಳಿಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಬಾಗೇಶ ಹೂಗಾರ ಪ್ರಾರ್ಥಿಸಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ ಸ್ವಾಗತಿಸಿದರು. ಆರ್.ಎಸ್.ಗಾಯಕವಾಡ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ ನಿರೂಪಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮುಳವಾಡದಲ್ಲಿ ಅ.16ರಂದು ‘ಬಯಲು ಬಯಲಾಯಿತ್ತು’ ನಾಟಕ ಪ್ರದರ್ಶನ

36 ವರ್ಷಗಳ ಪರಂಪರೆಗೆ ಸಾಕ್ಷಿಯಾದ ಆದಿಶಕ್ತಿ ಯುವಕ ಮಂಡಳ

೩೭೧ (ಜೆ) ಹೋರಾಟ ಜನಾಂದೋಲನವಾಗಬೇಕು :ಮನಗೂಳಿ

ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ-ಡಾ.ಔದ್ರಾಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮುಳವಾಡದಲ್ಲಿ ಅ.16ರಂದು ‘ಬಯಲು ಬಯಲಾಯಿತ್ತು’ ನಾಟಕ ಪ್ರದರ್ಶನ
    In (ರಾಜ್ಯ ) ಜಿಲ್ಲೆ
  • 36 ವರ್ಷಗಳ ಪರಂಪರೆಗೆ ಸಾಕ್ಷಿಯಾದ ಆದಿಶಕ್ತಿ ಯುವಕ ಮಂಡಳ
    In (ರಾಜ್ಯ ) ಜಿಲ್ಲೆ
  • ೩೭೧ (ಜೆ) ಹೋರಾಟ ಜನಾಂದೋಲನವಾಗಬೇಕು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಸಂಸದೀಯ ಕಾರ್ಯಕಲಾಪಗಳ ಕುರಿತು ಅರಿಯಬೇಕು
    In (ರಾಜ್ಯ ) ಜಿಲ್ಲೆ
  • ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ-ಡಾ.ಔದ್ರಾಮ
    In (ರಾಜ್ಯ ) ಜಿಲ್ಲೆ
  • ನವರಾತ್ರಿ ಉತ್ಸಾಹ: ಶ್ವೇತ ಕಾಂತಿಯಲ್ಲಿ ನಾರಿ ಲೋಕ ವೈಭವ ‌‌‌
    In (ರಾಜ್ಯ ) ಜಿಲ್ಲೆ
  • ಮನಸ್ಸಿನ ಸಂತೃಪ್ತಿಗಾಗಿ ಪುರಾಣ-ಪ್ರವಚನ ಆಲಿಸಿ :ಮಾಗಣಗೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿಎಂ ಉಕ ಅವಹೇಳನಕಾರಿ ಹೇಳಿಕೆಗೆ ಕದಂಬ ಸೈನ್ಯ ಖಂಡನೆ
    In (ರಾಜ್ಯ ) ಜಿಲ್ಲೆ
  • ಯಶಸ್ವೀ ಮಹಿಳೆಯ ಹಿಂದೆ ಅವಳ ಪತಿಯ ಪಾಲಿರುತ್ತದೆ
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 13,2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.