Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ

ಅ.19ರಂದು ಜಪ್ತಿ ವಾಹನಗಳ ಬಹಿರಂಗ ಹರಾಜು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ–ಬೆಂಗಳೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ವಿಜಯಪುರ–ಬೆಂಗಳೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೇಂದ್ರ ಸರ್ಕಾರದ ವಿರುದ್ಧ ರೈತರ ಧರಣಿ | ಕಬ್ಬಿಗೆ ಬೆಂಬಲ ಬೆಲೆ ಆಗ್ರಹ | ಯಲಗೂರ ಕ್ರಾಸ್‌ನಲ್ಲಿ ೭೦೦ಕ್ಕೂ ಹೆಚ್ಚು ರೈತರ ಪ್ರತಿಭಟನೆ

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಕಬ್ಬಿಗೆ ನ್ಯಾಯಯುತ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರ ಕ್ರಾಸ್ ಬಳಿ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ವಿಜಯಪುರ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಮಿಯಾನ ಹಾಕಿಕೊಂಡು ಧರಣಿ ನಡೆಸಿದ ರೈತರು, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಮಂಗಳವಾರ ಬೆಳಗ್ಗೆ ೧೧ ಗಂಟೆಗೆ ಆರಂಭವಾದ ಪ್ರತಿಭಟನೆಗೆ ಕ್ಷಣಕ್ಷಣಕ್ಕೂ ರೈತರ ಬೆಂಬಲ ಹೆಚ್ಚಾಯಿತು. ೭೦೦ಕ್ಕೂ ಹೆಚ್ಚು ರೈತರು ಸ್ಥಳದಲ್ಲಿ ಜಮಾಯಿಸಿ ಕಬ್ಬಿಗೆ ಸೂಕ್ತ ಬೆಲೆ ಘೋಷಿಸುವಂತೆ ಒತ್ತಾಯಿಸಿದರು. ಬೆಂಬಲ ಬೆಲೆ ನಿಗದಿಪಡಿಸುವವರೆಗೆ ಹೋರಾಟವನ್ನು ಮುಂದುವರಿಸುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಹೆದ್ದಾರಿ ಬಂದ್ – ವಾಹನಗಳಿಗೆ ಪರ್ಯಾಯ ಮಾರ್ಗ : ಯಲಗೂರ ಕ್ರಾಸ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಈ ಹಿನ್ನೆಲೆಯಲ್ಲಿ ವಾಹನಗಳನ್ನು ಆಲಮಟ್ಟಿ ರೈಲ್ವೆ ನಿಲ್ದಾಣದ ರಸ್ತೆಯ ಮೂಲಕ ಪರ್ಯಾಯ ಮಾರ್ಗದಲ್ಲಿ ಸಂಚರಿಸುವAತೆ ವ್ಯವಸ್ಥೆ ಮಾಡಲಾಗಿದೆ ಎಂದು ಸ್ಥಳೀಯ ಮಾಹಿತಿ ತಿಳಿಸಿದೆ.
ಪ್ರಯಾಣಿಕರು ಪ್ರಯಾಣ ಆರಂಭಿಸುವ ಮೊದಲು ಸ್ಥಳೀಯ ಪೊಲೀಸರ ಸೂಚನೆಗಳನ್ನು ಪರಿಶೀಲಿಸುವುದು ಸೂಕ್ತ. ವಿಶೇಷವಾಗಿ ವಿಜಯಪುರ–ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಸಂಚಾರ ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣ ಯೋಜಿಸಬೇಕಿದೆ.
ಪ್ರತಿಭಟನಾ ಸ್ಥಳಕ್ಕೆ ವಿಜಯಪುರ ಎಸ್‌ಪಿ ಭೇಟಿ : ಯಲಗೂರ ಕ್ರಾಸ್‌ನಲ್ಲಿ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ನಿಗಾ ವಹಿಸಿದೆ.
ಬೇಡಿಕೆ ಈಡೇರುವವರೆಗೆ ಹೋರಾಟದ ಎಚ್ಚರಿಕೆ : ಕಬ್ಬು ಬೆಳೆಗಾರರು ಉತ್ಪಾದನಾ ವೆಚ್ಚಕ್ಕೆ ತಕ್ಕ ಬೆಲೆ ದೊರೆಯಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕಬ್ಬಿನ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂಬುದು ರೈತರ ಒತ್ತಾಯವಾಗಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಯಲಗೂರ ಕ್ರಾಸ್‌ನ ಪ್ರತಿಭಟನೆ ಮಹತ್ವ ಪಡೆದಿದೆ. ರೈತರ ಬೇಡಿಕೆಗಳಿಗೆ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಮತ್ತು ಹೆದ್ದಾರಿಯಲ್ಲಿ ವಾಹನ ಸಂಚಾರ ಯಾವಾಗ ಸಹಜ ಸ್ಥಿತಿಗೆ ಮರಳಲಿದೆ ಎಂಬುದರ ಬಗ್ಗೆ ಮುಂದಿನ ಬೆಳವಣಿಗೆಗಳ ಮೇಲೆ ಗಮನ ನೆಟ್ಟಿದೆ.
ಕಬ್ಬಿಗೆ ಬೆಂಬಲ ಬೆಲೆ ಆಗ್ರಹಿಸಿ ಯಲಗೂರ ಕ್ರಾಸ್‌ನಲ್ಲಿ ೭೦೦ಕ್ಕೂ ಹೆಚ್ಚು ರೈತರು ಪ್ರತಿಭಟನೆ ನಡೆಸಿದರು. ವಿಜಯಪುರ–ಬೆಂಗಳೂರು ಹೆದ್ದಾರಿ ಬಂದ್ ಹಿನ್ನೆಲೆಯಲ್ಲಿ ವಾಹನಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಯಿತು.
ರಾಜ್ಯ ಉಪಾಧ್ಯಕ್ಷರಾದ ಶಾಂತಗೌಡ ಪಾಟೀಲ ನಡಹಳ್ಳಿ, ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ, ಮುಖಂಡರಾದ ರಾಮನಗೌಡ ಪಾಟೀಲ, ಸಂಗಪ್ಪ ಟಕ್ಕೆ, ದಯಾನಂದ ಕೋಳಿ, ಸೀತಪ್ಪ ಗಣಿ, ಸಾಬಣ್ಣ ಅಂಗಡಿ, ರವೀಂದ್ರ ಕೋಟಿನ, ಶಶಿಕಾಂತ ಪಾಟೀಲ, ಜಗದೇವಿ ಬಿರಾದಾರ, ಲಕ್ಷ್ಮಿ ಬಿರಾದಾರ, ಅನಮೇಶ ಜಮಖಂಡಿ, ಡಾ. ಕೆ. ಎಂ. ಗುಡ್ನಳ, ಮಾಳು ಪೂಜಾರಿ, ಮುದಕಣ್ಣ ಹೊರ್ತಿ, ಮಹಾಂತೇಶ ಕತ್ತಿ, ಸೋಮು ಬಿರಾದಾರ, ವಸಂತ ಭೈರಮಡಿ, ಪ್ರಕಾಶ ತೇಲಿ, ವೀರಣ್ಣ ಸಜ್ಜನ, ಪ್ರಶಾಂತ ಭೂಸನೂರ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಬಸವರಾಜ ತಾಳಿಕೋಟಿ, ಆನಂದ ಹಡಗಲಿ, ಈರಪ್ಪ ಕುಳೆಕುಮಟಗಿ,ಸುರೇಶ ಕಿರೆಸೂರ್,ಶಂಕರಗೌಡ ಬಿರಾದಾರ,ಅಭಿಷೇಕ್ ಹೂಗಾರ,

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ

ಅ.19ರಂದು ಜಪ್ತಿ ವಾಹನಗಳ ಬಹಿರಂಗ ಹರಾಜು

ಅ.೧೪ರಂದು ವಿಜಯಪುರಕ್ಕೆ ‘ವಿಜಯ ಜ್ಯೋತಿ ಯಾತ್ರೆ’

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವ್ಯಕ್ತಿ ಕಾಣೆ: ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಅ.19ರಂದು ಜಪ್ತಿ ವಾಹನಗಳ ಬಹಿರಂಗ ಹರಾಜು
    In (ರಾಜ್ಯ ) ಜಿಲ್ಲೆ
  • ಅ.೧೪ರಂದು ವಿಜಯಪುರಕ್ಕೆ ‘ವಿಜಯ ಜ್ಯೋತಿ ಯಾತ್ರೆ’
    In (ರಾಜ್ಯ ) ಜಿಲ್ಲೆ
  • ಕುರುಬರ ಕಲೆ-ಸಂಸ್ಕೃತಿ ಅಕಾಡೆಮಿ ಸ್ಥಾಪಿಸುವಂತೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಚೆಸ್: ರಾಜ್ಯಮಟ್ಟಕ್ಕೆ ಭೂಮಿಕಾ & ಸ್ಪೂರ್ತಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಬೆಳಗಾವಿ ವಿಭಾಗ ಮಟ್ಟದ ಪಂದ್ಯಾವಳಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟದ ಕಿಚ್ಚು ಜಾರಿಯಾಗುವರೆಗೂ ನಿಲ್ಲುವುದಿಲ್ಲ
    In (ರಾಜ್ಯ ) ಜಿಲ್ಲೆ
  • ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ; ಚಿರತೆ ಕಾರ್ಯಾಚರಣೆಗೆ ವೇಗ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯಲ್ಲಿ ದುಡಿದವರಿಗೆ ಟಿಕೆಟ್ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.