Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ

ಅ.19ರಂದು ಜಪ್ತಿ ವಾಹನಗಳ ಬಹಿರಂಗ ಹರಾಜು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ; ಚಿರತೆ ಕಾರ್ಯಾಚರಣೆಗೆ ವೇಗ
(ರಾಜ್ಯ ) ಜಿಲ್ಲೆ

ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ; ಚಿರತೆ ಕಾರ್ಯಾಚರಣೆಗೆ ವೇಗ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿರತೆ ಕಾಟಕ್ಕೆ ತದ್ದೇವಾಡಿಯಲ್ಲಿ ಜಾನುವಾರುಗಳ ಬಲಿ | ಚಿರತೆ ಸೆರೆಗೆ 2 ಡ್ರೋನ್, 3 ಬೋನ್ ಅಳವಡಿಕೆ

ಉದಯರಶ್ಮಿ ದಿನಪತ್ರಿಕೆ

ಚಡಚಣ: ತಾಲೂಕಿನ ತದ್ದೇವಾಡಿ ಗ್ರಾಮದ ಅಡವಿ ವಸ್ತಿ ಪ್ರದೇಶದಲ್ಲಿ ಚಿರತೆ ಕಾಟ ಮತ್ತೆ ಶುರುವಾಗಿದ್ದು, ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಕಳೆದ ವರ್ಷ ಇದೇ ಭಾಗದಲ್ಲಿ ಚಿರತೆ ಕಾಣಿಸಿಕೊಂಡಾಗ ಸ್ಥಳೀಯ ಗೊಲ್ಲರು ತಮ್ಮ ಪ್ರಾಣದ ಹಂಗು ತೊರೆದು ಸಾಹಸದಿಂದ ಚಿರತೆಯನ್ನು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದರು. ಇದೀಗ ಮತ್ತೆ ಚಿರತೆ ದಾಳಿ ನಡೆಸಿ ಎರಡು ಜಾನುವಾರುಗಳನ್ನು ಬಲಿ ಪಡೆದಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಚುರುಕುಗೊಳಿಸಿದೆ.
ನಮ್ಮ ಪತ್ರಿಕೆಯಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಮಂಗಳವಾರ ವಿಜಯಪುರ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಎಂ.ಬಿ. ಕುಶನಾಳ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೆಲ್ವರಾಜ್ ನಾಯ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿರತೆಯ ಚಲನವಲನ, ಜಾನುವಾರುಗಳ ಮೇಲೆ ನಡೆದ ದಾಳಿ ಹಾಗೂ ಅದನ್ನು ಸೆರೆಹಿಡಿಯಲು ಕೈಗೊಂಡಿರುವ ಕ್ರಮಗಳು ಹಾಗೂ ಗಸ್ತು ಕುರಿತು ಸ್ಥಳಿಯ ಅಧಿಕಾರಿ ಮಂಜುನಾಥ ಧೂಳೆ ಅವರಿಂದ ಮಾಹಿತಿ ಪಡೆದುಕೊಂಡರು.
ತದ್ದೇವಾಡಿ ಗ್ರಾಮದ ಅಡವಿ ವಸ್ತಿ ಪ್ರದೇಶದ ಕಬ್ಬಿನ ಗದ್ದೆಯಲ್ಲಿ ಭಾನುವಾರ ಬೆಳಗಿನ ಜಾವ ಚಿರತೆ ದಾಳಿ ನಡೆಸಿ ರೈತರಾದ ಶಿವಮೂರ್ತಿ ಕೋಳೂರ ಹಾಗೂ ಲಕ್ಷ್ಮಣ ಬಸಣ್ಣ ವಡಗಾಂವಿ ಅವರಿಗೆ ಸೇರಿದ ಆಕಳು ಮತ್ತು ಎಮ್ಮೆ ಕರುವನ್ನು ಕೊಂದು ಹಾಕಿದೆ ಎಂದು ತಿಳಿದುಬಂದಿದೆ. ಜಾನುವಾರುಗಳ ಸಾವು ರೈತರಿಗೆ ಆರ್ಥಿಕ ನಷ್ಟ ಉಂಟುಮಾಡಿದ್ದು, ಗ್ರಾಮದಲ್ಲಿ ಚಿರತೆಯ ಭೀತಿ ಹೆಚ್ಚಿಸಿದೆ.
ಕಳೆದ ವರ್ಷವೂ ತದ್ದೇವಾಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿತ್ತು. ಆಗ ಸ್ಥಳೀಯ ಗೊಲ್ಲರು ತಮ್ಮ ಪ್ರಾಣದ ಹಂಗು ತೊರೆದು ಧೈರ್ಯದಿಂದ ಚಿರತೆಯನ್ನು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸುವ ಮೂಲಕ ಸಾಹಸ ಮೆರೆದಿದ್ದರು. ಆದರೆ ಈಗ ಮತ್ತೆ ಚಿರತೆ ದಾಳಿ ನಡೆಸಿರುವುದು ಈ ಭಾಗದ ಜನರಲ್ಲಿ ಆತಂಕ ಮೂಡಿಸಿದೆ. ಪದೇಪದೇ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರು ಹೊಲ-ಗದ್ದೆಗಳಿಗೆ ತೆರಳಲು ಹಾಗೂ ಜಾನುವಾರುಗಳನ್ನು ಮೇಯಿಸಲು ಭಯಪಡುವಂತಾಗಿದೆ.

ಚಿರತೆ ಪತ್ತೆಗೆ 2 ಡ್ರೋನ್, 3 ಬೋನ್ ಅಳವಡಿಕೆ

ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಜೇವೂರ ಸಸ್ಯಪಾಲನಾ ಮತ್ತು ಅರಣ್ಯ ಅಧಿಕಾರಿ ಮಂಜುನಾಥ ಧೂಳೆ ಅವರು ಪರಿಶೀಲನೆ ನಡೆಸಿ, ಸ್ಥಳದಲ್ಲಿ ಕಂಡುಬಂದ ಹೆಜ್ಜೆ ಗುರುತುಗಳು ಚಿರತೆಯದ್ದಾಗಿವೆ ಎಂದು ತಿಳಿಸಿದರು. ಚಿರತೆಯ ಪತ್ತೆಗಾಗಿ ಎರಡು ಡ್ರೋನ್‌ಗಳ ಮೂಲಕ ಸುತ್ತಮುತ್ತಲಿನ ಕಬ್ಬಿನ ಗದ್ದೆ ಹಾಗೂ ಅರಣ್ಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದರೂ ಚಿರತೆ ಪತ್ತೆಯಾಗಿಲ್ಲ ಎಂದರು.
ಚಡಚಣ ತಾಲೂಕಿನಲ್ಲಿ ಲಭ್ಯವಿದ್ದ ಒಂದು ಬೋನ್ ಜತೆಗೆ ಸಿಂದಗಿ ಹಾಗೂ ವಿಜಯಪುರದಿಂದ ಹೆಚ್ಚುವರಿಯಾಗಿ ಎರಡು ಬೋನ್‌ಗಳನ್ನು ತರಿಸಿ ಒಟ್ಟು ಮೂರು ಬೋನ್‌ಗಳನ್ನು ಅಳವಡಿಸಲಾಗಿದೆ. ಚಿರತೆಯ ಚಲನವಲನಗಳ ಮೇಲೆ ನಿಗಾ ಇಡಲು ಕ್ಯಾಮೆರಾ ಟ್ರ‍್ಯಾಪ್ ವ್ಯವಸ್ಥೆಯನ್ನೂ ಅಳವಡಿಸಲಾಗಿದೆ. ಚಿರತೆಯನ್ನು ಪತ್ತೆಹಚ್ಚಿ ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದರು.

ರಾತ್ರಿ ಒಂಟಿಯಾಗಿ ಓಡಾಡದಂತೆ ಎಚ್ಚರಿಕೆ

ಗ್ರಾಮಸ್ಥರು ರಾತ್ರಿ ವೇಳೆ ಒಂಟಿಯಾಗಿ ಓಡಾಡಬಾರದು. ಜಾನುವಾರುಗಳನ್ನು ಮನೆಯ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಕಟ್ಟಬೇಕು. ಚಿರತೆಯ ಚಲನವಲನ ಕಂಡುಬಂದರೆ ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಬೇಕು. ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆಗೆ ಗ್ರಾಮಸ್ಥರು ಸಹಕರಿಸಬೇಕು ಎಂದು ವಿಜಯಪುರ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಎಂ.ಬಿ. ಕುಶನಾಳ ಮನವಿ ಮಾಡಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ

ಅ.19ರಂದು ಜಪ್ತಿ ವಾಹನಗಳ ಬಹಿರಂಗ ಹರಾಜು

ಅ.೧೪ರಂದು ವಿಜಯಪುರಕ್ಕೆ ‘ವಿಜಯ ಜ್ಯೋತಿ ಯಾತ್ರೆ’

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವ್ಯಕ್ತಿ ಕಾಣೆ: ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಅ.19ರಂದು ಜಪ್ತಿ ವಾಹನಗಳ ಬಹಿರಂಗ ಹರಾಜು
    In (ರಾಜ್ಯ ) ಜಿಲ್ಲೆ
  • ಅ.೧೪ರಂದು ವಿಜಯಪುರಕ್ಕೆ ‘ವಿಜಯ ಜ್ಯೋತಿ ಯಾತ್ರೆ’
    In (ರಾಜ್ಯ ) ಜಿಲ್ಲೆ
  • ಕುರುಬರ ಕಲೆ-ಸಂಸ್ಕೃತಿ ಅಕಾಡೆಮಿ ಸ್ಥಾಪಿಸುವಂತೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಚೆಸ್: ರಾಜ್ಯಮಟ್ಟಕ್ಕೆ ಭೂಮಿಕಾ & ಸ್ಪೂರ್ತಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಬೆಳಗಾವಿ ವಿಭಾಗ ಮಟ್ಟದ ಪಂದ್ಯಾವಳಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟದ ಕಿಚ್ಚು ಜಾರಿಯಾಗುವರೆಗೂ ನಿಲ್ಲುವುದಿಲ್ಲ
    In (ರಾಜ್ಯ ) ಜಿಲ್ಲೆ
  • ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ; ಚಿರತೆ ಕಾರ್ಯಾಚರಣೆಗೆ ವೇಗ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯಲ್ಲಿ ದುಡಿದವರಿಗೆ ಟಿಕೆಟ್ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.