ಉದಯರಶ್ಮಿ ದಿನಪತ್ರಿಕೆ
ತಾಳಿಕೋಟೆ: ಬಸವನ ಬಾಗೇವಾಡಿ ತಾಲ್ಲೂಕಿನ ನರಸಲಗಿ ಗ್ರಾಮದಲ್ಲಿ ಅ.೧೨ರಂದು ನಡೆದ ವಿಜಯಪುರ ಜಿಲ್ಲಾ ಮಟ್ಟದ ೧೪ ವರ್ಷ ವಯೋಮಿತಿಯ ಬಾಲಕರ ಕಬಡ್ಡಿ ಪಂದ್ಯಾವಳಿಯಲ್ಲಿ ತಾಳಿಕೋಟೆ ಪಟ್ಟಣದ ಮೈಲೇಶ್ವರ ಕ್ರಾಸ್‌ದ ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.
ಪಂದ್ಯಾವಳಿಯ ಫೈನಲ್‌ನಲ್ಲಿ ಬಸವನ ಬಾಗೇವಾಡಿ ತಾಲ್ಲೂಕಿನ ತಂಡವನ್ನು ಮಣಿಸಿದ ಬ್ರಿಲಿಯಂಟ್ ಶಾಲೆಯ ಬಾಲಕರು ಪ್ರಥಮ ಸ್ಥಾನ ಪಡೆದು, ಬೆಳಗಾವಿ ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯಿಂದ ಶಾಲೆ ಹಾಗೂ ತಾಲೂಕಿನ ಕೀರ್ತಿ ತಂದಂತಾಗಿದೆ. ಬಾಲಕರ ಕ್ರೀಡಾ ಸಾಧನೆಗೆ ಜಿಲ್ಲೆಯ ಮತ್ತು ಮುದ್ದೇಬಿಹಾಳ ತಾಲ್ಲೂಕಿನ ಕ್ರೀಡಾಧಿಕಾರಿಗಳು, ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಬ್ರಿಲಿಯಂಟ್ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸರ್ವ ಶಿಕ್ಷಕ ಬಳಗ ಹರ್ಷ ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

