ಉದಯರಶ್ಮಿ ದಿನಪತ್ರಿಕೆ
ಇಂಡಿ: ಇಂಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಿವಿಧ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಪ್ತಿ ಮಾಡಿ ಮುಟ್ಟುಗೋಲು ಹಾಕಿಕೊಂಡಿರುವ ವಿವಿಧ ಮಾದರಿಯ ದ್ವಿಚಕ್ರ ವಾಹನಗಳನ್ನು ಅಕ್ಟೋಬರ್ 19ರಂದು ಬಹಿರಂಗವಾಗಿ ಹರಾಜು ಮಾಡಲಾಗುವುದು ಎಂದು ಇಂಡಿ ಪೊಲೀಸ್ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ.
ಮಾನ್ಯ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯ, ಇಂಡಿ ಅವರ ಆದೇಶದ ಮೇರೆಗೆ, ಅಕ್ಟೋಬರ್ 19, 2026ರಂದು ಬೆಳಿಗ್ಗೆ 11 ಗಂಟೆಗೆ ಇಂಡಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.
ಹರಾಜಿನಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ಸಾರ್ವಜನಿಕರು ಅಕ್ಟೋಬರ್ 17, 2026ರ ಸಂಜೆ 5 ಗಂಟೆಯೊಳಗೆ ಇಂಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ನಿಗದಿತ ಮುಂಗಡ ಠೇವಣಿ ಹಣವನ್ನು ಪಾವತಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
