ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಕೂಡಗಿ ಗ್ರಾಮದ ನಿವಾಸಿ ಉಮರಫಾರೂಕ ತಂದೆ ಹಮೀದ ಕೋರಬು (೨೮) ಎಂಬ ವ್ಯಕ್ತಿ ಕಾಣೆಯಾಗಿದ್ದು, ಈ ಕುರಿತು ಕೂಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ವ್ಯಕ್ತಿಯ ಪತ್ತೆಗೆ ಸಹಕರಿಸುವಂತೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಕಾಣೆಯಾದ ವ್ಯಕ್ತಿಯು ೫.೨ ಅಡಿ ಎತ್ತರ, ಸಾದಾ ಕಪ್ಪು ಮೈಬಣ್ಣ ಹಾಗೂ ಗುಂಡು ಮುಖ ಹೊಂದಿದ್ದು, ಕನ್ನಡ ಮತ್ತು ಹಿಂದಿ ಭಾ ಮಾತನಾಡುತ್ತಿದ್ದು, ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಅಂಗಿ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು,ಈ ಚಹರೆಪಟ್ಟಿಯುಳ್ಳ ವ್ಯಕ್ತಿ ಯಾರಿಗಾದರೂ ಕಂಡುಬಂದಲ್ಲಿ ಅಥವಾ ಈ ಬಗ್ಗೆ ಮಾಹಿತಿ ದೊರೆತಲ್ಲಿ ಕೂಡಗಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.
