ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಸಿವಿಲ್ ಎಂಜಿನಿಯರಿಂಗ್ ಡಿಪ್ಲೋಮಾ ವಿದ್ಯಾರ್ಥಿಗಳಿಗಾಗಿ ಖ್ಯಾತ ‘ವ್ಯಾಲ್ಯೂ ವೆಂಚರ್ಸ್’ (Value Venture) ಸಂಸ್ಥೆಯ ವತಿಯಿಂದ ಕ್ಯಾಂಪಸ್ ಉದ್ಯೋಗ ಸಂದರ್ಶನವನ್ನು ಮಂಗಳವಾರ ನಡೆಯಿತು.
ಈ ಕ್ಯಾಂಪಸ್ ಸಂದರ್ಶನದಲ್ಲಿ ಪಾಲಿಟೆಕ್ನಿಕ್ ನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡರು.
ವ್ಯಾಲ್ಯೂ ವೆಂಚರ್ಸ್ ಸಂಸ್ಥೆಯ ವತಿಯಿಂದ ಹರ್ಷವರ್ಧನ ಮತ್ತು ಮಾನವ ಸಂಪನ್ಮೂಲ ವ್ಯವಸ್ಥಾಪಕಿ(HR Manager) ಗೀತಾ ನೇಮಕಾತಿ ಪ್ರಕ್ರಿಯೆ ನಡೆಸಿದರು.
ಈ ಸಂದರ್ಭದಲ್ಲಿ ವಿದ್ಯಾಲಯದ ಪ್ರಾಚಾರ್ಯ ಪ್ರಭುದೇವ ಬಿ. ಕಳಸಗೊಂಡ, ಉದ್ಯೋಗಾಧಿಕಾರಿ ಸುಧನ್ವ ವಿ. ಕುಲಕರ್ಣಿ, ಸಿವಿಲ್ ವಿಭಾಗದ ಮುಖ್ಯಸ್ಥೆ ಸುನೀತಾ ಲಕ್ಷಾಣಿ, ಉಪನ್ಯಾಸಕಿಯರಾದ ತೇಜಸ್ವಿನಿ ಬಿರಾದಾರ, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಎಲ್ಲ ಉಪನ್ಯಾಸಕರು, ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.

