ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ ಗುಡಿ ಮತ್ತು ಅತಿಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಇಚ್ಛಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹರಿಗೆ ಶೇ. ೬೦ರಷ್ಟು ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವಿಜಯಪುರ ನಗರದ ಶಿಕಾರಖಾನೆ, ಸ್ಟೇಷನ್ ಬ್ಯಾಕ್ ರೋಡ್ನಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅ.೩೧ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೯೯೭೨೬೫೦೧೩೭ ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
