Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬರಗಾಲದಲ್ಲಿ ಗ್ರಾಮೀಣರಿಗೆ ಉದ್ಯೋಗ-ಕುಡಿಯುವ ನೀರಿಗೆಆದ್ಯತೆ ನೀಡಿ

ಮಾಸಾಶನ ಸೌಲಭ್ಯ ಕಲ್ಪಿಸಲು ವಿಕಲಚೇತನರ ಸಂಘ ಒತ್ತಾಯ

ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಸಾಶನ ಸೌಲಭ್ಯ ಕಲ್ಪಿಸಲು ವಿಕಲಚೇತನರ ಸಂಘ ಒತ್ತಾಯ
(ರಾಜ್ಯ ) ಜಿಲ್ಲೆ

ಮಾಸಾಶನ ಸೌಲಭ್ಯ ಕಲ್ಪಿಸಲು ವಿಕಲಚೇತನರ ಸಂಘ ಒತ್ತಾಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಏಳು ತಿಂಗಳಿಂದ ಪಿಂಚಣಿ ಇಲ್ಲ | ವಿಕಲಚೇತನರು, ವೃದ್ಧರ ಬದುಕು ದುಸ್ತರ | ಕುಂದುಕೊರತೆ ಸಭೆ ಕರೆದು ಸಮಸ್ಯೆ ಬಗೆಹರಿಸಲು ಆಗ್ರಹ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಕಳೆದ ಏಳು ತಿಂಗಳಿಂದ ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುತ್ತಿದ್ದ ಪಿಂಚಣಿ ಸ್ಥಗಿತಗೊಂಡಿದ್ದು, ಮಾಸಾಶನವನ್ನೇ ನಂಬಿ ಬದುಕುತ್ತಿರುವ ವಿಕಲಚೇತನರು ಹಾಗೂ ಹಿರಿಯ ನಾಗರಿಕರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಬಾಕಿ ಪಿಂಚಣಿ ಬಿಡುಗಡೆ ಮಾಡಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ವಿಕಲಚೇತನರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಬುಧವಾರ ತಹಶೀಲ್ದಾರ್ ಸಂತೋಷ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಸದಸ್ಯ ಎಸ್.ಬಿ. ದಿಂದಾರ ಮಾತನಾಡಿ, ಕೊಲ್ಹಾರ ತಾಲೂಕಿನಾದ್ಯಂತ ಸಾವಿರಾರು ವಿಕಲಚೇತನರು ಹಾಗೂ ಹಿರಿಯ ನಾಗರಿಕರು ವಾಸಿಸುತ್ತಿದ್ದು, ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಗ್ರಾಮ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಅವರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪಿಂಚಣಿಯೇ ಆಸರೆ, ಬದುಕು ದುಸ್ತರ: ಸಾಮಾಜಿಕ ಭದ್ರತಾ ಯೋಜನೆಯಡಿ ದೊರೆಯುವ ಮಾಸಾಶನವೇ ಅನೇಕ ವಿಕಲಚೇತನರು ಹಾಗೂ ವೃದ್ಧರ ಜೀವನಾಧಾರವಾಗಿದೆ. ಆದರೆ, ಸುಮಾರು ಏಳು ತಿಂಗಳಿಂದ ಪಿಂಚಣಿ ದೊರೆಯದ ಕಾರಣ ಔಷಧೋಪಚಾರ, ಆಹಾರ ಹಾಗೂ ದೈನಂದಿನ ಅಗತ್ಯಗಳನ್ನು ಪೂರೈಸಿಕೊಳ್ಳಲು ಪರದಾಡುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಬಾಕಿ ಪಿಂಚಣಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ಕಚೇರಿಗಳಿಗೆ ರ‍್ಯಾಂಪ್ ನಿರ್ಮಿಸಿ: ತಾಲೂಕಿನ ಬಹುತೇಕ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಲ್ಲಿ ವಿಕಲಚೇತನರ ಸುಗಮ ಸಂಚಾರಕ್ಕೆ ಅಗತ್ಯವಾದ ರ‍್ಯಾಂಪ್ ಸೌಲಭ್ಯ ಕಲ್ಪಿಸಬೇಕು. ಸಾರ್ವಜನಿಕ ಸೇವೆಗಳನ್ನು ಪಡೆಯಲು ವಿಕಲಚೇತನರು ಎದುರಿಸುತ್ತಿರುವ ಅಡೆತಡೆಗಳನ್ನು ನಿವಾರಿಸಬೇಕು. ತಾಲೂಕು ಮಟ್ಟದಲ್ಲಿ ವಿಕಲಚೇತನರ ಕುಂದುಕೊರತೆ ಸಭೆ ಆಯೋಜಿಸಿ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಿಯಾಜ್ ಮಕಾನದಾರ, ಕಾರ್ಯದರ್ಶಿ ಗುಲಾಬ್ ಶಿರೂರ, ಸುಲೇಮಾನ್ ದೀನದಾರ, ದಾದಾಪೀರ ಖಾಟಿಕ್, ಶಿವಲೀಲಾ ಬಿರಾದಾರ, ಮಲ್ಲಿಕಾರ್ಜುನ ಬಿರಾದಾರ, ಸಮೀರ ಗಿರಗಾಂವಿ, ಅಯೂಬ್ ದೀನದಾರ, ಲಾಲಸಾಬ್ ಅತ್ತಾರ, ಮಹಮ್ಮದ್ ಕಮತಗಿ, ರಫೀಕ್ ಹವಾಲ್ದಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬರಗಾಲದಲ್ಲಿ ಗ್ರಾಮೀಣರಿಗೆ ಉದ್ಯೋಗ-ಕುಡಿಯುವ ನೀರಿಗೆಆದ್ಯತೆ ನೀಡಿ

ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ

ಗುಡಿ ಹಾಗೂ ಅತಿಸಣ್ಣ ಕೈಗಾರಿಕೆ ಸ್ಥಾಪನೆಗೆ; ಸಬ್ಸಿಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ವಿಜಯಪುರ ತಹಶೀಲ್ದಾರ್ ಕಚೇರಿಗೆ ಡಿಸಿ ಡಾ.ಆನಂದ ದಿಢೀರ್ ಭೇಟಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬರಗಾಲದಲ್ಲಿ ಗ್ರಾಮೀಣರಿಗೆ ಉದ್ಯೋಗ-ಕುಡಿಯುವ ನೀರಿಗೆಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಾಸಾಶನ ಸೌಲಭ್ಯ ಕಲ್ಪಿಸಲು ವಿಕಲಚೇತನರ ಸಂಘ ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ
    In (ರಾಜ್ಯ ) ಜಿಲ್ಲೆ
  • ಗುಡಿ ಹಾಗೂ ಅತಿಸಣ್ಣ ಕೈಗಾರಿಕೆ ಸ್ಥಾಪನೆಗೆ; ಸಬ್ಸಿಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ತಹಶೀಲ್ದಾರ್ ಕಚೇರಿಗೆ ಡಿಸಿ ಡಾ.ಆನಂದ ದಿಢೀರ್ ಭೇಟಿ
    In (ರಾಜ್ಯ ) ಜಿಲ್ಲೆ
  • ಅ.೧೫ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾರಾಯಿ ಮಾರಾಟ ತಡೆಗಟ್ಟಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ದೈಹಿಕ ಆರೋಗ್ಯದಷ್ಟೇ ಮಾನಸಿಕ ಸ್ವಾಸ್ಥ್ಯವೂ ಮುಖ್ಯ
    In (ರಾಜ್ಯ ) ಜಿಲ್ಲೆ
  • ‘ವ್ಯಾಲ್ಯೂ ವೆಂಚರ್ಸ್’ ಸಂಸ್ಥೆಯಿಂದ ಕ್ಯಾಂಪಸ್ ಉದ್ಯೋಗ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಅ.೧೮ರಿಂದ ಶ್ರೀ ಬಿ.ಎಂ.ಪಾಟೀಲ ಮೆಮೊರಿಯಲ್ ಕ್ರಿಕೆಟ್ ಪಂದ್ಯಾವಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.