Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬರಗಾಲದಲ್ಲಿ ಗ್ರಾಮೀಣರಿಗೆ ಉದ್ಯೋಗ-ಕುಡಿಯುವ ನೀರಿಗೆಆದ್ಯತೆ ನೀಡಿ

ಮಾಸಾಶನ ಸೌಲಭ್ಯ ಕಲ್ಪಿಸಲು ವಿಕಲಚೇತನರ ಸಂಘ ಒತ್ತಾಯ

ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬರಗಾಲದಲ್ಲಿ ಗ್ರಾಮೀಣರಿಗೆ ಉದ್ಯೋಗ-ಕುಡಿಯುವ ನೀರಿಗೆಆದ್ಯತೆ ನೀಡಿ
(ರಾಜ್ಯ ) ಜಿಲ್ಲೆ

ಬರಗಾಲದಲ್ಲಿ ಗ್ರಾಮೀಣರಿಗೆ ಉದ್ಯೋಗ-ಕುಡಿಯುವ ನೀರಿಗೆಆದ್ಯತೆ ನೀಡಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಓ ಆನಂದ ಪ್ರಕಾಶ ಮೀನಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬರಗಾಲದ ಹಿನ್ನೆಲೆಯಲ್ಲಿ ಗ್ರಾಮೀಣ ಜನರಿಗೆ ಅವಶ್ಯಕತೆಯನುಸಾರ ನಿರಂತರ ಉದ್ಯೋಗಾವಕಾಶ ಕಲ್ಪಿಸುವುದರೊಂದಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ ಪ್ರಕಾಶ ಮೀನಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಬಿ-ಜಿ ರಾಮ್ ಜಿ, ಗ್ರಾಮೀಣ ವಸತಿ ಯೋಜನೆ, ಸ್ವಚ್ಛ ಭಾರತ ಮಿಷನ್ ಹಾಗೂ ಭಾರತ್ ಜೋಡೋ ಯುವ ಸಂಘಗಳ ನೋಂದಣಿ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಿದರು.
ಗ್ರಾಮೀಣರಿಗೆ ನಿರಂತರ ಉದ್ಯೋಗ ಕಲ್ಪಿಸಲು ಆದ್ಯತೆ: ಜಿಲ್ಲೆಯಲ್ಲಿ ಬರಗಾಲ ಘೋಷಣೆಯಾಗಿರುವುದರಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗದ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ನಿಗದಿಪಡಿಸಿರುವ ಮಾನವ ದಿನಗಳ ಗುರಿಯನ್ನು ಸಾಧಿಸಬೇಕು. ಕೂಲಿಕಾರ್ಮಿಕರ ಭಾಗವಹಿಸುವಿಕೆ ಹಾಗೂ ಅರ್ಹರಿಗೆ ನಿರಂತರ ಉದ್ಯೋಗ ಒದಗಿಸಬೇಕು ಎಂದು ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಬರಗಾಲದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯತೆ ಹಾಗೂ ನೀರು ಸರಬರಾಜಿನ ಸ್ಥಿತಿಗತಿಗಳನ್ನು ನಿರಂತರವಾಗಿ ಪರಿಶೀಲಿಸಬೇಕು.
ಪೂರೈಕೆಯಲ್ಲಿ ವ್ಯತ್ಯಯ ಕಂಡುಬಂದಲ್ಲಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಂಡು, ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ವಸತಿ, ಶೌಚಾಲಯ ನಿರ್ಮಾಣ ಹಾಗೂ ಯುವ ಸಂಘಗಳ ನೋಂದಣಿಗೆ ಒತ್ತು: ಗ್ರಾಮೀಣ ವಸತಿ ಯೋಜನೆಯಡಿ ಬಾಕಿ ಉಳಿದಿರುವ ಮನೆಗಳ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಿ, ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ನಿಗದಿತ ಗುರಿ ಸಾಧಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಯೋಜನಾ ನಿರ್ದೇಶಕ ಅಶೋಕ ಕಲಘಟಗಿ, ಜಿಲ್ಲಾ ಮಟ್ಟದ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಜಿಲ್ಲಾ ಪಂಚಾಯತಿಯ ಅಧಿಕಾರಿ, ಸಿಬ್ಬಂದಿ ಮತ್ತು ವಿಬಿ-ಜಿ ರಾಮ್ ಜಿ ಯೋಜನೆಯ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾಸಾಶನ ಸೌಲಭ್ಯ ಕಲ್ಪಿಸಲು ವಿಕಲಚೇತನರ ಸಂಘ ಒತ್ತಾಯ

ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ

ಗುಡಿ ಹಾಗೂ ಅತಿಸಣ್ಣ ಕೈಗಾರಿಕೆ ಸ್ಥಾಪನೆಗೆ; ಸಬ್ಸಿಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ವಿಜಯಪುರ ತಹಶೀಲ್ದಾರ್ ಕಚೇರಿಗೆ ಡಿಸಿ ಡಾ.ಆನಂದ ದಿಢೀರ್ ಭೇಟಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬರಗಾಲದಲ್ಲಿ ಗ್ರಾಮೀಣರಿಗೆ ಉದ್ಯೋಗ-ಕುಡಿಯುವ ನೀರಿಗೆಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಾಸಾಶನ ಸೌಲಭ್ಯ ಕಲ್ಪಿಸಲು ವಿಕಲಚೇತನರ ಸಂಘ ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ
    In (ರಾಜ್ಯ ) ಜಿಲ್ಲೆ
  • ಗುಡಿ ಹಾಗೂ ಅತಿಸಣ್ಣ ಕೈಗಾರಿಕೆ ಸ್ಥಾಪನೆಗೆ; ಸಬ್ಸಿಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ತಹಶೀಲ್ದಾರ್ ಕಚೇರಿಗೆ ಡಿಸಿ ಡಾ.ಆನಂದ ದಿಢೀರ್ ಭೇಟಿ
    In (ರಾಜ್ಯ ) ಜಿಲ್ಲೆ
  • ಅ.೧೫ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾರಾಯಿ ಮಾರಾಟ ತಡೆಗಟ್ಟಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ದೈಹಿಕ ಆರೋಗ್ಯದಷ್ಟೇ ಮಾನಸಿಕ ಸ್ವಾಸ್ಥ್ಯವೂ ಮುಖ್ಯ
    In (ರಾಜ್ಯ ) ಜಿಲ್ಲೆ
  • ‘ವ್ಯಾಲ್ಯೂ ವೆಂಚರ್ಸ್’ ಸಂಸ್ಥೆಯಿಂದ ಕ್ಯಾಂಪಸ್ ಉದ್ಯೋಗ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಅ.೧೮ರಿಂದ ಶ್ರೀ ಬಿ.ಎಂ.ಪಾಟೀಲ ಮೆಮೊರಿಯಲ್ ಕ್ರಿಕೆಟ್ ಪಂದ್ಯಾವಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.