ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರಿಗೆ ನವೆಂಬರ್ ೧ರಂದು ಸನ್ಮಾನ ಮಾಡಲು ಉದ್ದೇಶಿಸಲಾಗಿದೆ.
ಕಲೆ, ಸಾಹಿತ್ಯ, ಶಾಸ್ತ್ರೀಯ ಸಂಗಿತ,, ಸುಗಮ ಸಂಗೀತ, ಜನಪದ, ರಂಗಭೂಮಿ ಶಿಲ್ಪಕಲೆ, ನೃತ್ಯ, ಚಿತ್ರಕಲೆ, ಸಮಾಜ ಸೇವೆ, ಕೃಷಿ, ವೈದ್ಯಕೀಯ, ಪತ್ರಿಕೋದ್ಯಮ, ಸಂಕೀರ್ಣ ಇತರೆ ಕ್ಷೇತ್ರಗಳಲ್ಲಿ ತಮ್ಮ ಸಾಧನೆಯ ವಿವರಗಳನ್ನು ಒಳಗೊಂಡಂತೆ ತಮ್ಮ ಸ್ವ-ಪರಿಚಯ ಮತ್ತು ದಾಖಲೆಗಳೊಂದಿಗೆ ದಿನಾಂಕ: ೨೭-೧೦-೨೦೨೬ ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಶನ್ ರಸ್ತೆ ವಿಜಯಪುರ ಕಚೇರಿಗೆ ಸಲ್ಲಿಸಬಹುದಾಗಿದೆ.
ಈ ಕುರಿಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ೦೮೩೫೨-೨೫೧೨೬೧ ಸಂಖ್ಯೆಗೆ ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
