ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮುದ್ದೇಬಿಹಾಳ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ೨೦೨೬-೨೭ನೇ ಸಾಲಿಗೆ ಅಂಗನವಾಡಿ-ಕಂ-ಕ್ರಷ್ ಕೇಂದ್ರಗಳಲ್ಲಿನ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ-ಕಂ-ಕ್ರಷ್ ಕೇಂದ್ರಗಳ ೦೬ ಕಾರ್ಯಕರ್ತೆಯರು ಹಾಗೂ ೦೬ ಸಹಾಯಕಿಯರ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಮುದ್ದೇಬಿಹಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
