ಉದಯರಶ್ಮಿ ದಿನಪತ್ರಿಕೆ
ಅಥಣಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಥಣಿ ತಾಲೂಕು ಘಟಕದ ವತಿಯಿಂದ ಅಥಣಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಸಿದ್ಧರಾಯ ಭೋಸಗಿ (ಕೆಎಎಸ್) ಅವರು ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಬಡ್ತಿ ಪಡೆದ ಹಿನ್ನೆಲೆಯಲ್ಲಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಸಿದ್ಧರಾಯ ಭೋಸಗಿ ಅವರಿಗೆ ಅಭಿನಂದನೆ ಸಲ್ಲಿಸಿ, ಉಪ ವಿಭಾಗಾಧಿಕಾರಿ ಹುದ್ದೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವಂತಾಗಲಿ ಎಂದು ಶುಭ ಹಾರೈಸಿದರು. ಬಳಿಕ ಶಿಕ್ಷಕರ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.
ಶಿಕ್ಷಕರ ವೇತನ, ಸೇವಾ ಸೌಲಭ್ಯಗಳು, ಆಡಳಿತಾತ್ಮಕ ಸಮಸ್ಯೆಗಳು ಸೇರಿದಂತೆ ಹಲವು ವಿಷಯಗಳನ್ನು ಸಂಘದ ಪದಾಧಿಕಾರಿಗಳು ತಹಸೀಲ್ದಾರರ ಗಮನಕ್ಕೆ ತಂದರು. ಸಮಸ್ಯೆಗಳನ್ನು ಆಲಿಸಿದ ಸಿದ್ಧರಾಯ ಭೋಸಗಿ ಅವರು, ಶಿಕ್ಷಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಥಣಿ ತಾಲೂಕು ಘಟಕದ ಅಧ್ಯಕ್ಷ ಪಿ ಜಿ ಮಾಳಿ ಪ್ರಧಾನ ಕಾರ್ಯದರ್ಶಿ ಬಿ ಎಸ್ ಗುರವ ಖಜಾಂಚಿ ರವಿ ಹಳ್ಳೊಳ್ಳಿ ನಿರ್ದೇಶಕರಾದ ಎಂ ಬಿ ಅಸ್ಕಿ ರಮಜಾನ್ ಸನದಿ ಎಸ್ ಎಸ್ ಮುಗಳಖೋಡ ಕಾಡಪ್ಪ ಬೆಳಗಲಿ ವಂದನಾ ಭಂಡಾರಿ ಸುಭಾಸ ಹೆಳವರ ನಾಯಿಕ ಹನಮಂತ ವಾಗ್ಮಾರೆ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

