ವಿಜಯಪುರ: ನಗರದ ಸಮಾಜ ಸೇವಕಿ, ಸಾಹಿತಿ ಡಾ.ಸುರೇಖಾ ರಾಠೋಡ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕವು ೨೦೨೩ನೇ ಸಾಲಿನ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ” ನೀಡಿ ಗೌರವಿಸಿತು.
ನಗರದ ಲಾಲಬಹದ್ದೂರ ಶಾಸ್ತ್ರಿ ಮಾರುಕಟ್ಟೆ ಪ್ರಾಂಗಣದಲ್ಲಿ ಬುಧವಾರ ಸಂಜೆ ಕರವೇ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಡಾ.ಸುರೇಖಾ ರಾಠೋಡ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ.ಬಿ.ಪಾಟೀಲ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಕರವೇ ಜಿಲ್ಲಾಧ್ಯಕ್ಷ ಎಂ.ಸಿ.ಮುಲ್ಲಾ, ಪ್ರ.ಕಾರ್ಯದರ್ಶಿ ಸುರೇಶ ಬಿಜಾಪುರ, ನಗರ ಘಟಕ ಅಧ್ಯಕ್ಷ ಫಯಾಜ ಕಲಾದಗಿ, ನ್ಯಾಯವಾದಿ ನಾಗರಾಜ ಲಂಬು, ಶ್ರೀಗಳು, ಮೌಲ್ವಿಗಳು, ಪಾದ್ರಿಗಳು ಸೇರಿದಂತೆ ಕರವೇ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.
Related Posts
Add A Comment