Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ

ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
(ರಾಜ್ಯ ) ಜಿಲ್ಲೆ

ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ದೇಶದ ಜ್ವಲಂತ ಸಮಸ್ಯೆಗಳಾದ ಬಡತನ, ನಿರುದ್ಯೋಗ, ಅನಕ್ಷರತೆ, ಮಹಿಳಾ ಸಬಲೀಕರಣ ಹಾಗೂ ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನ್ ಅಧಿನಿಯಮ’ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳು ಹಾಗೂ ವೈಫಲ್ಯಗಳ ಕುರಿತು ಆಡಳಿತ ಪಕ್ಷದ ಸಚಿವರನ್ನು ವಿರೋಧ ಪಕ್ಷದ ನಾಯಕರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರೆ,ಆಡಳಿತ ಪಕ್ಷದ ಸದಸ್ಯರು ಹಾಗೂ ಸಚಿವರು ವಿರೋಧ ಪಕ್ಷಗಳ ಪ್ರತಿಯೊಂದು ಪ್ರಶ್ನೆಗೆ ಸೂಕ್ತ ಅಂಕಿ-ಅಂಶಗಳ ಸಹಿತ ಮರುಉತ್ತರ ನೀಡಿ ತಮ್ಮ ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳನ್ನು ಬಲವಾಗಿ ಸಮರ್ಥಿಸಿಕೊಂಡರು. ಇದು ಯಾವುದೇ ರಾಜ್ಯದ ವಿಧಾನಸಭೆಯ ಅಥವಾ ದೇಶದ ಲೋಕಸಭೆಯ ನೇರ ಕಲಾಪದ ದೃಶ್ಯವಲ್ಲ! ವಿದ್ಯಾರ್ಥಿಗಳಿಗೆ ಪ್ರಜಾಸತ್ತಾತ್ಮಕ ಮೌಲ್ಯಗಳು, ಸಂಸದೀಯ ಪ್ರಕ್ರಿಯೆ ಹಾಗೂ ಕಲಾಪ ನಿರ್ವಹಣೆಯ ಕುರಿತು ಅರಿವು ಮೂಡಿಸಲು ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಗಳ ಸಯೋಗದಲ್ಲಿ ಅಥಣಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಯುವ ಸಂಸತ್ತು’ ಕಾರ್ಯಕ್ರಮದ ರೋಚಕ ದೃಶ್ಯ.
ಕಾಲೇಜಿನ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪ್ರಧಾನಮಂತ್ರಿ, ಸಚಿವರು, ವಿರೋಧ ಪಕ್ಷದ ನಾಯಕರು ಹಾಗೂ ಸಂಸದರ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿದ್ದರು. ಕಲಾಪದ ವೇಳೆ ಪ್ರಶ್ನೋತ್ತರ ಕಲಾಪ, ಶೂನ್ಯ ವೇಳೆ ಹಾಗೂ ಪ್ರಮುಖ ಕಾಯ್ದೆಗಳ ಕುರಿತು ನಡೆದ ಗಂಭೀರ ಚರ್ಚೆಯು ನಿಜವಾದ ಸಂಸತ್ತಿನ ವಾತಾವರಣವನ್ನೇ ಮರುಸೃಷ್ಟಿಸಿತು.
ಪ್ರಾಸ್ತಾವಿಕ ಮಾತುಗಳನ್ನಾಡಿದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಜು ಬಜಂತ್ರಿ ವಿದ್ಯಾರ್ಥಿಗಳು ಇಂತಹ ವೇದಿಕೆಗಳನ್ನು ಬಳಸಿಕೊಂಡು ನಾಯಕತ್ವ ಗುಣವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಡಾ. ಶಾಂತಿನಾಥ್ ಬಳೋಜ ಪ್ರಜಾಪ್ರಭುತ್ವ ವ್ಯವಸ್ಥೆಯು ಇತರೆ ಎಲ್ಲಾ ಮಾದರಿಯ ಸರ್ಕಾರಗಳಲ್ಲಿಯೇ ಅತ್ಯುತ್ತಮವಾದ ಸರ್ಕಾರದ ಪದ್ಧತಿಯಾಗಿದೆ ಎಂದು ಹೇಳಿ ವಿದ್ಯಾರ್ಥಿಗಳ ಕಾರ್ಯಕ್ಷಮತೆ ಮತ್ತು ಉತ್ಸಾಹವನ್ನು ಶ್ಲಾಘಿಸಿದರು. ತಾಲೂಕ ಸಮಾಜ ಕಲ್ಯಾಣ ಅಧಿಕಾರಿಗಳಾದ ಪರಶುರಾಮ ಪತ್ತಾರ ಮಾತನಾಡಿ ಯುವಜನರಲ್ಲಿ ರಾಜಕೀಯ ಜಾಗೃತಿ, ನಾಯಕತ್ವ ಗುಣ ಹಾಗೂ ಸಂವಿಧಾನದ ಮೌಲ್ಯಗಳನ್ನು ಬೆಳೆಸಲು ಇಂತಹ ‘ಯುವ ಸಂಸತ್ತು’ ಕಾರ್ಯಕ್ರಮಗಳು ಅತ್ಯಂತ ಪೂರಕವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಧಾನಮಂತ್ರಿಯಾಗಿ ಶಿವಾನಿ ಕೊಡಗ, ವಿರೋಧ ಪಕ್ಷದ ನಾಯಕಿಯಾಗಿ ಸಾನಿಕಾ ಧನಗರ ಮತ್ತು ಸಭಾಪತಿಯಾಗಿ ವಿದ್ಯಾಶ್ರೀ ಪಾಟೀಲ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾದ ಬಿ ಐ ಮಠಪತಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಸೋಮಲಿಂಗ ಪಾಟೀಲ್, ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಡಾ ಸುರೇಶ್ ತಾಕತರಾವ, ಡಾಕ್ಟರ್ ಎಂ ಎ ಚನ್ನಾಪುರ ಮುಂತಾದವರು ಉಪಸ್ಥಿತರಿದ್ದರು. ಸಂಗಮೇಶ ಹಚಡದ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ

ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ

ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್ ಪ್ರಕ್ರಿಯೆ ರದ್ದುಪಡಿಸಲು ಆಗ್ರಹಿಸಿ ಡಿಎಸ್ಸೆಸ್ ಮನವಿ
    In (ರಾಜ್ಯ ) ಜಿಲ್ಲೆ
  • “ಹಸಿರು ಮುಡಿ ಲಲನೆಯರ ಜೀವದಡಿ” ನಲಿಕೆ ಸೊಗಸಲ್ಲಿ ನಾರಿ!
    In (ರಾಜ್ಯ ) ಜಿಲ್ಲೆ
  • ೩,೮೯೪.೧೩ ಕ್ವಿಂಟಲ್ ಅಕ್ಕಿ-೯೫.೧ ಕ್ವಿಂಟಲ್ ಗೋಧಿ ವಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.